ಸೆಪ್ಟಂಬರ್ 28. ರಂದು ಗ್ರಾಮ ಪಂಚಾಯಿತಿ ನೌಕರರಿಂದ ಸಮ್ಮೇಳನ.
ಮಾನ್ವಿ ಸ.26

ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘ ಸಿಐಟಿಯು ಸಂಯೋಜಿತದ ಅಡಿಯಲ್ಲಿ 10 ನೆ. ಜಿಲ್ಲಾ ಸಮ್ಮೇಳನ ಕಾರ್ಯಕ್ರಮವನ್ನು ಸೆಪ್ಟೆಂಬರ್ 28 ರಂದು ಈದ್ಗಾ ಫಂಕ್ಷನ್ ಹಾಲ್ ನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಕಾಮ್ರೇಡ್ ಆರ್.ಎಸ್ ಬಸವರಾಜ ತಿಳಿಸಿದರು.ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪತ್ರಿಕಾ ಭವನದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ,
ಗ್ರಾಮ ಪಂಚಾಯತಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕರ ವಸೂಲಿಗಾರ, ಕ್ಲಾರ್ಕ್, ಡಾಟಾ ಎಂಟ್ರಿ ಆಪರೇಟರ್, ಹಾಗು ನೀರು ಗಂಟಿಗಳನ್ನು ಸೇರಿದಂತೆ ಇನ್ನಿತರರನ್ನು ಸರಕಾರಿ ನೌಕರರೆಂದು ಘೋಷಿಸಬೇಕು ಎಂದರು.ಗ್ರಾಮ ಪಂಚಾಯಿತಿಗಳಲ್ಕಿ ಕೆಲಸ ನಿರ್ವಹಿಸುವ ನೌಕರರಿಗೆ ನಿವೃತ್ತಿ ಅಥವಾ ಮರಣ ಹೊಂದಿದರೆ ಅವರಿಗೆ ಪ್ರತಿ ತಿಂಗಳು ಕನಿಷ್ಠ 6 ಸಾವಿರ ರುಪಾಯಿ ಪಿಂಚಣಿ ನೀಡಬೇಕು ಎಂದು ಆಗ್ರಹಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ಕನಕ್ಕುಂದಿ.ಮಾನ್ವಿ