ರಕ್ತದಾನ ಮಹಾದಾನ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಸಿ. ಚೇತನ್.
ಖಾನಾ ಹೊಸಹಳ್ಳಿ ಸ.26

ಪಟ್ಟಣದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣ ಆವರಣದಲ್ಲಿ ಗುರುವಾರ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವಿಜಯನಗರ ಜಿಲ್ಲೆ, ಪ್ರಾಥಮಿಕ ಆರೋಗ್ಯ ಕೇಂದ್ರ ಖಾನಾ ಹೊಸಹಳ್ಳಿ ಇವರ ನೇತೃತ್ವದಲ್ಲಿ ಸ್ವಯಂ ಪ್ರೇರಿತರಾಗಿ ರಕ್ತದಾನ ಶಿಬಿರ ಹಮ್ಮಿ ಕೊಳ್ಳಲಾಗಿತ್ತು. ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಗ್ರಾ.ಪಂ ಅಧ್ಯಕ್ಷ ಎ.ಸಿ ಚೇತನ್ ರಕ್ತದಾನ ಮಹಾದಾನ ವಾಗಿದೆ. ಅಪಘಾತ ಹಾಗೂ ಇತರ ತುರ್ತು ಚಿಕಿತ್ಸೆ ಸಂದರ್ಭದಲ್ಲಿ ರೋಗಿಗೆ ರಕ್ತದ ಅವಶ್ಯಕತೆ ಬಹಳ ಇರುತ್ತದೆ. ಆ ಸಮಯ ರೋಗಿ ಪಾಲಿಗೆ ಪ್ರತಿ ನಿಮಿಷವೂ ಅಮೂಲ್ಯ. ರಕ್ತ ಕೊರತೆ ತಪ್ಪಿಸಿ, ಆತನ ಪ್ರಾಣ ಉಳಿಸಲು ರಕ್ತ ಅತ್ಯವಶ್ಯವಕ ವಾಗಿರುತ್ತದೆ ಎಂದರು. ಈ ಸಂದರ್ಭದಲ್ಲಿ ಹೊಸಹಳ್ಳಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ, ಅಭಿಷೇಕ್ ಮಾತನಾಡಿ ಸಾಮಾನ್ಯವಾಗಿ ರಸ್ತೆ ಅಪಘಾತದಲ್ಲಿ ರಕ್ತ ಸ್ರಾವಗೊಂಡ ರೋಗಿಗಳು ಮತ್ತು ಹೆರಿಗೆ ಸಂದರ್ಭದಲ್ಲಿ ಗರ್ಭಿಣಿಯರಿಗೆ ರಕ್ತದ ಅವಶ್ಯಕತೆ ಇರುತ್ತದೆ.

ಇಂಥ ಸಂದರ್ಭದಲ್ಲಿ ರಕ್ತ ದಾನಿಗಳು ನೀಡುವ ರಕ್ತ ಮಹತ್ವ ಪಡೆಯುತ್ತದೆ. ಒಬ್ಬರ ರಕ್ತ ದಾನದಿಂದ ಮೂರು ಜನರ ಪ್ರಾಣ ಉಳಿಸ ಬಹುದಾಗಿದೆ ಎಂದು ಹೇಳಿ ರಕ್ತ ದಾನದ ಮಹತ್ವವನ್ನು ವಿವರಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ನೇತ್ರಾವತಿ ಮಂಜುನಾಥ, ವೈದ್ಯಾಧಿಕಾರಿ ಡಾ ಅಭಿಷೇಕ್, ಎಲ್ಎಚ್.ವಿ ಭಾರತಿ, ರಾಘವರಡ್ಡಿ, ಕೃಷ್ಣ, ಮಹೇಂದ್ರ, ಕಿ.ಪ್ರ.ತಾ. ಅಧಿಕಾರಿ ಸೋಮಶೇಖರ್ ಕೆ.ಆರ್, ಪ್ರಸಾದ್, ಬೋರಣ್ಣ, ಶಶಿಧರ, ರಮ್ಯಾ ಇ.ಎಸ್, ಸುಧಾ, ರೇಖಾ, ಸವಿತಾ, ಆಶ್ರೀಫ್ ಬಾನು, ಸುರೇಶ್ ಸೇರಿದಂತೆ ಗ್ರಾ.ಪಂ ಸರ್ವ ಸದಸ್ಯರು, ಮುಖಂಡರು, ಆಶಾ ಕಾರ್ಯಕರ್ತೆಯರು ಮತ್ತು ರಕ್ತ ದಾನಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನೆಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ