ಶಾಲಾ ಮಕ್ಕಳಿಗೆ ವಾರದಲ್ಲಿ ಆರು ದಿನ ಪೌಷ್ಟಿಕ ಆಹಾರ ನೀಡಿಕೆಗೆ – ಚಾಲನೆ ನೀಡಿದ ಶಾಸಕರು.
ರಾಂಪುರ ಸ.27

ಇಂದು ಮೊಳಕಾಲ್ಮೂರು ತಾಲೂಕಿನ ರಾಂಪುರದಲ್ಲಿಜನಪ್ರಿಯ ಶಾಸಕರಾದ ಸನ್ಮಾನ್ಯ ಶ್ರೀ ಎನ್.ವೈ ಗೋಪಾಲಕೃಷ್ಣರವರು ರಾಜ್ಯ ಸರ್ಕಾರದ ಅಕ್ಷರ ದಾಸೋಹ -ಮಧ್ಯಾಹ್ನ ಉಪಹಾರ ಯೋಜನೆಯಡಿ ಅಜೀಂ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು, ಇವರ ಸಹಭಾಗಿತ್ವದಲ್ಲಿ ಶಾಲಾ ಮಕ್ಕಳ ಪೌಷ್ಟಿಕತೆ ವೃದ್ಧಿಸಲು 2024 25 ನೇ. ಸಾಲಿನಲ್ಲಿ ತಾಲೂಕಿನ ಎಲ್ಲಾ ಸರ್ಕಾರಿ ಪೂರ್ವ ಪ್ರಾಥಮಿಕ, ಸರ್ಕಾರಿ ಮತ್ತು ಅನುದಾನಿತ ಮತ್ತು ಅನುದಾನ ರಹಿತ ಶಾಲೆ ಮಕ್ಕಳಿಗೆ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಟಿಕ ಆಹಾರವನ್ನು ವಿತರಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಿಕ್ಷಣ ಇಲಾಖೆಯ ಅಧಿಕಾರಿ ಹಾಗೂ ಸಿಬ್ಬಂದಿಗಳು ಶಿಕ್ಷಕರು ಮಕ್ಕಳು ಮೊದಲಾದವರು ಉಪಸ್ಥಿತರಿದ್ದರು ಎಂದು ವರದಿಯಾಗಿದೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಚಾನಲ್:ತಿಪ್ಪೇಸ್ವಾಮಿ. ಹೊಂಬಾಳೆ.ಮೊಳಕಾಲ್ಮೂರು