ಗ್ರಾಮ ಆಡಳಿತಾಧಿಕಾರಿಗಳ ಅನಿರ್ದಿಷ್ಟಾವಧಿ ಮುಷ್ಕರ.
ಮಸ್ಕಿ ಸ.27

ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ಮೂಲಭೂತ ಸೌಕರ್ಯ ನೀಡದೆ ಒತ್ತಡ ಏರಿ ಕೆಲಸ ಮಾಡಿಸುತ್ತಿರುವುದನ್ನು ವಿರೋಧಿಸಿ ಹಾಗೂ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಮಹಾಂತೇಶ ತಿಳಿಸಿದರು.ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಧಿಕ ಕೆಲಸದ ಒತ್ತಡ ಹಾಗೂ ತಾಂತ್ರಿಕ ಕೆಲಸಗಳಿಗೆ ಮಾಹಿತಿ ನೀಡದೆ ಹಾಗೂ ಮೂಲಭೂತ ಸೌಕರ್ಯ ನೀಡದೆ ಒತ್ತಡ ಏರಿ ಕೆಲಸ ಮಾಡಿಸುತ್ತಿರುವುದನ್ನು ವಿರೋಧಿಸಿ ಹಾಗೂ ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಅನಿರ್ದಿಷ್ಠಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದ ಕಾರ್ಯದರ್ಶಿ ನಿಂಗಪ್ಪ ತಿಳಿಸಿದರು. ಪಟ್ಟಣದ ತಹಸೀಲ್ದಾರ್ ಕಚೇರಿ ಮುಂಭಾಗದಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕ ಸಂಘದಿಂದ ಏರ್ಪಡಿಸಲಾಗಿದ್ದ ಪ್ರತಿಭಟನೆಯಲ್ಲಿ ತಹಸೀಲ್ದಾರ್ ಡಾ, ಮಲ್ಲಪ್ಪ.ಕೆ. ಯರಗೋಳ ರವರು ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿ ಮತನಾಡಿದರು.

ಕರ್ನಾಟಕ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದ ಕಾರ್ಯಕಾರಿಣಿ ಸಭೆಯ ನಿರ್ಣಯದಂತೆ ರಾಜ್ಯ ಸರ್ಕಾರ ಜಾರಿಗೆ ತಂದಿರುವ ೬ ಮೊಬೈಲ್ ಆ್ಯಪ್ ಗಳಲ್ಲಿ ಒಂದೇ ಬಾರಿಗೆ ಪ್ರಗತಿ ಸಾಧಿಸುವಂತೆ ಒತ್ತಡ ಏರಿರುವುದರಿಂದ ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಧಿಕ ಕೆಲಸದ ಒತ್ತಡ ಉಂಟಾಗಿದ್ದು ಅಧಿಕ ಕೆಲಸದ ಒತ್ತಡದಿಂದ ಕೆಲವು ಗ್ರಾಮ ಆಡಳಿತ ಅಧಿಕಾರಿಗಳು ಹೃದಯಾಘಾತ ದಿಂದ ಮರಣ ಹೊಂದಿದ್ದು, ಕೆಲವು ಗ್ರಾಮ ಆಡಳಿತ ಅಧಿಕಾರಿಗಳು ಕೆಲಸಕ್ಕೆ ರಾಜೀನಾಮೆ ಸಲ್ಲಿಸುವ ಹಂತಕ್ಕೆ ತಲುಪಿದ್ದಾರೆ ಎಂದರು.ಸಂಘದ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಸರ್ಕಾರವನ್ನು ಒತ್ತಾಯಿಸಿದ್ದು ಸೆ.೨೬ ವರೆಗೆ ಸರ್ಕಾರ ಸಂಘದ ಬೇಡಿಕೆ ಈಡೇರದಿದ್ದರೆ ಸೆ.೨೬ ರಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ಸಂಘವು ಸರಕಾರಕ್ಕೆ ಎಚ್ಚರಿಕೆ ನೀಡಿತು. ನಾಳೆಯೂ ಪ್ರತಿಭಟನೆ ಮುಂದುವರೆಯುವುದು ಎಂದು ಗ್ರಾಮ ಆಡಳಿತ ಅಧಿಕಾರಿಗಳ ತಾಲೂಕು ಸಂಘದ ಅಧ್ಯಕ್ಷ ಮಹಾಂತೇಶ ತಿಳಿಸಿದರು.ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ದುರುಗಪ್ಪ, ಖಜಾಂಚಿ ಶಿವಪ್ಪ,ರಾಘವೇಂದ್ರ ಶೆಟ್ಟಿ,ಗಂಗಪ್ಪ, ಅಮರೇಶ, ಉಮಾದೇವಿ,ವಿಜಯಲಕ್ಷ್ಮಿ, ಶಿವಲೀಲಾ, ಅನಿತಾ, ದುರ್ಗಾಂಜನಿ,ತಾಲೂಕು ಗ್ರಾಮ ಆಡಳಿತ ಅಧಿಕಾರಿಗಳು ಸಂಘದ ಪದಾಧಿಕಾರಿಗಳು ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ