ಭಾಗೀರಥಿ ರಾಜ್ಯ ಮಟ್ಟಕ್ಕೆ ಆಯ್ಕೆ.
ಮಸ್ಕಿ ಸ.29

ಶಾಲಾ ಶಿಕ್ಷಣ (ಪದವಿ ಪೂರ್ವ) ಇಲಾಖೆ ರಾಯಚೂರು ಹಾಗೂ ಅನಿಕೇತನ ಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ಸಿಂಧನೂರಿನಲ್ಲಿ ನಡೆದ ರಾಯಚೂರು ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ಸ್ಥಳೀಯ ವೀರರಾಣಿ ಕಿತ್ತೂರು ಚನ್ನಮ್ಮ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಭಾಗೀರಥಿ ತಂದೆ ಶರಣಪ್ಪ ಬುದ್ದಿನ್ನಿ 3000 ಮೀಟರ್ ನಡಿಗೆ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದು.

ರಾಜ್ಯ ಮಟ್ಟಕ್ಕೆ ಆಯ್ಕೆ ಯಾಗಿದ್ದಾಳೆ ಎಂದು ಕಾಲೇಜಿನ ಪ್ರಾಚಾರ್ಯ ಲಕ್ಷ್ಮಣ ಕರ್ಲಿ ಪತ್ರಿಕೆಗೆ ತಿಳಿಸಿದ್ದಾರೆ. ವಿದ್ಯಾರ್ಥಿನಿಯ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಸುಭಾಷ್ ಕೊರೆಕರ್, ಕಾರ್ಯದರ್ಶಿ ಪಿ ರಾಮು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು, ಗೆಳೆಯರು ಅಭಿನಂದಿಸಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಇಲಕಲ್ಲ