ಸಿ.ಎ ಫೌಂಡೇಶನ್ ನ ಒಳ ನೋಟ ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ.
ಅಥಣಿ ಅ.01

ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಜಾಧವಜಿ ಶಿಕ್ಷಣ ಸಂಸ್ಥೆಯ ಜೆ.ಎ.ಪದವಿ ಪೂರ್ವ ಮಹಾ ವಿದ್ಯಾಲಯದಲ್ಲಿ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗಾಗಿ “An Insight on C A Foundation” ಎಂಬ ವಿಷಯದ ಮೇಲೆ ಒಂದು ದಿನದ ಕಾರ್ಯಾಗಾರ ಎರ್ಪಡಿಲಾಗಿತ್ತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಬೆಳಗಾವಿಯ ಖ್ಯಾತ ಲೆಕ್ಕ ಪರಿಶೋಧಕ ಶ್ರೀ ವಿನಯ ಅಸುಂಡೆ ಯವರು ಕಾರ್ಯಕ್ರಮ ಉದ್ಘಾಟಿಸಿ ದೇಶದ ಆರ್ಥಿಕ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳ ಪಾತ್ರ ಬಹಳ ಪ್ರಮುಖವಾಗಿದೆ. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿ ಕೊಳ್ಳುವುದ ಜೊತೆಯಲ್ಲಿ ದೇಶದ ಆರ್ಥಿಕ ಪರಿಸ್ಥಿತಿ ಉತ್ತಮ ಪಡಿಸಿದರೆ ಜನರ ಜೀವನ ಮಟ್ಟ ಉತ್ತಮ ಗೊಳ್ಳುತ್ತದೆ. ಪ್ರತಿ ಯೊಬ್ಬರಿಗೆ ಪೌಷ್ಟಿಕ ಆಹಾರ, ಉತ್ತಮ ಪರಿಸರ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರಕಾರದ ಆರ್ಥಿಕ ಪರಿಸ್ಥಿತಿ ಉತ್ತಮ ರೀತಿಯಲ್ಲಿ ಇದ್ದಾಗ ಮಾತ್ರ ಸಾಧ್ಯವೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಹಾ ವಿದ್ಯಾಲಯದ ಪ್ರಾಚಾರ್ಯರರಾದ ಶ್ರೀ ಎಂ.ಪಿ.ಮೇತ್ರಿ ವಹಿಸಿಕೊಂಡು ಮಾತುನಾಡುತ್ತಾ ಪ್ರತಿಯೊಬ್ಬ ವಿದ್ಯಾರ್ಥಿ ಉತ್ತಮ ಗುಣಮಟ್ಟ ಶಿಕ್ಷಣ ಪಡೆಯಬೇಕು ಎಂಬುದು ಮಹಾವಿದ್ಯಾಲಯದ ಉದ್ದೇಶವಾಗಿದೆ. ಈ ಕಾರಣಕ್ಕಾಗಿ ಬೇರೆ ಬೇರೆ ವಿಭಾಗದ ವಿದ್ಯಾರ್ಥಿಗಳಿಗೆ ಬೇರೆ ಬೇರೆ ಕಾರ್ಯಾಗಾರ ಹಮ್ಮಿ ಕೊಳ್ಳಲಾಗುತ್ತಿದ್ದು ಇದರ ಸದುಪಯೋಗ ಮಾಡಿ ಕೊಳ್ಳಬೇಕೆಂದು ಹೇಳಿದರು. ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಚಂದ್ರಶೇಖರ ಎನ್ ವೇದಿಕೆಯಲ್ಲಿ ಪ್ರಾಸ್ತಾವಿಕ ಮಾತನಾಡಿ ಎಲ್ಲರನ್ನೂ ಸ್ವಾಗತಿಸಿದರು. ಭಾರತಿ ಅಡಹಳ್ಳಿ ಕಾರ್ಯಕ್ರಮ ನಿರೂಪಿಸಿದರು. ಸುರೇಶ ದಾಸರಡ್ಡಿ, ಶಂಕರ ಕಮತಗಿ, ರಮೇಶ ಮಾಳಿ, ಅನಿಲ ಅಂಕಲಗಿ, ಪೂಜಾ ಭಂಗಿ, ಆಶಾ ಹೀರೇಮಠ ಮೊದಲಾದ ಉಪನ್ಯಾಸಕರು ಕಾರ್ಯಾಗಾರದಲ್ಲಿ ಹಾಜರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ.ಬೆಳಗಾವಿ