ಅಕ್ಟೋಬರ್ 5 ರಂದು ಪಟ್ಟಣದಲ್ಲಿ ಕಾಂಗ್ರೇಸ್ ಪಕ್ಷದಿಂದ ಸ್ವಾಭಿಮಾನ ಸಮಾವೇಶ.
ಮಾನ್ವಿ ಅ.02

ಅಕ್ಟೋಬರ್ 5 ರಂದು ಮಾನ್ವಿ ಪಟ್ಟಣದ ಸೂರ್ಯ ಫಂಕ್ಷನ್ ಹಾಲ್ ಬಳಿ ಕಾಂಗ್ರೆಸ್ ಪಕ್ಷದಿಂದ ಸ್ವಾಭಿಮಾನಿ ಸಮಾವೇಶ ನಡೆಯಲಿದ್ದು, ಸಹಸ್ರ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕು ಎಂದು ಕಾಂಗ್ರೆಸ್ ಮುಖಂಡ ಫಯಾಜ್ ತಿಳಿಸಿದರು.ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾನ್ವಿ ನಗರಕ್ಕೆ ಆಗಮಿಸಿ ನಾನಾ ಯೋಜನೆಗಳ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದು, ಅಂದು ರಾಜ್ಯದ ಸಚಿವರು ಶಾಸಕರು ಭಾಗವಹಿಸಲಿದ್ದಾರೆ ಎಂದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸ್ವಾಭಿಮಾನಿ ಸಮಾವೇಶಕ್ಕೆ ಜಿಲ್ಲೆಯ ಕಾರ್ಯಕರ್ತರು ಆಗಮಿಸಿ ಕಾರ್ಯಕರ್ತರೆ ಸ್ವಾಭಿಮಾನಿ ಸಮಾವೇಶ ಏನೆಂದು ತೋರಿಸಬೇಕು ಎಂದು ಕರೆ ನೀಡಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್,ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ಮಾನ್ವಿ