ಬ್ಲಾಕ್ ಕಾಂಗ್ರೇಸ್ ವತಿಯಿಂದ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹಾದುರ್ ಶಾಸ್ತ್ರಿ ಅವರ ಜಯಂತಿ ಆಚರಣೆ.
ಬಸವನ ಬಾಗೇವಾಡಿ ಅ.03

ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ನಗರದಲ್ಲಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮ ಗಾಂಧೀಜಿಯವರ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ಆಚರಿಸಲಾಯಿತು. ಕಾಂಗ್ರೆಸ್ ಕಾರ್ಯಕರ್ತರು ಪೋಲಿಸ್ ಇಲಾಖೆ ಸಿಬ್ಬಂದಿ ನಗರದ ಗಣ್ಯರು ಪೊಲೀಸ್ ಠಾಣೆಯ ಆವರಣದಲ್ಲಿರುವ ಮಹಾತ್ಮ ಗಾಂಧೀಜಿಯವರ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಗಾಂಧಿ ಭಾರತ ನೂರು ವರ್ಷ ಗಾಂಧಿ ನಡೆ ಪಾದಯಾತ್ರೆ ಎನ್ನುವ ಸ್ಲೋಗನ್ ನೊಂದಿಗೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಮಹಾತ್ಮ ಗಾಂಧೀಜಿ ಅವರಿಗೆ ಜೈಕಾರ ಹಾಕುತ್ತ ಮೆರವಣಿಗೆ ಬಂದು ಅಂಬೇಡ್ಕರ್ ಪುತ್ತಳಿಗೆ ಮಾಲಾರ್ಪಣೆ ಮಾಡಿ ನಂತರ ಮರಗಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ಸಭೆ ಸೇರಿ ಮಹಾತ್ಮ ಗಾಂಧೀಜಿಯವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮತ್ತು. ಶ್ರೀ ಸುರೇಶ ಹಾರಿವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು. ಗಾಂಧೀಜಿಯವರ ಕುರಿತು ಮಾತನಾಡುತ್ತಾ . ಸತ್ಯ ಹಾಗೂ ಅಹಿಂಸೆ ಮೂಲಕ ನಮಗೆ ಸ್ವಾತಂತ್ರ್ಯವನ್ನು ತಂದು ಕೊಟ್ಟರು. ಬ್ರಿಟಿಷರನ್ನು ಹೊಡೆದೋಡಿಸಿ 1947 ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ದೊರೆಯಿತು.ಅವರು ಶಿಸ್ತು ಸ್ವಚ್ಛತೆ ಹಾಗೂ ಗ್ರಾಮೀಣ ಅಭಿವೃದ್ಧಿ ದೇಶದ ಅಭಿವೃದ್ಧಿ ಎಂದರು. ಶ್ರೀ ಸಂಗಮೇಶ ಓಲೆಕಾರ್ ಮತ್ತು ಶಂಕರಗೌಡ ಬಿರಾದಾರ್ ಮಾತನಾಡಿದರು. ಈ ಸಂದರ್ಭದಲ್ಲಿ ಶ್ರೀ ಚಂದ್ರಶೇಖರ ಪಾಟೀಲ್. ಬಸಣ್ಣ ದೇಸಾಯಿ ಭರತ್ ಅಗರ್ವಾಲ್ ರವಿ ರಾಠೋಡ್ ಶೇಖರ್ ಗೊಳಸಂಗಿ ನಿವೃತ್ತ ಮಿಲಿಟರಿ ಯೋದರು ಊರಿನ ಗುರು ಹಿರಿಯರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ.