ಪಟ್ಟಣದ ಸೂರ್ಯ ಫಂಕ್ಷನ್ ಹಾಲ್ ಬಳಿ ಕಾಂಗ್ರೇಸ್ ಪಕ್ಷದ – ಸ್ವಾಭಿಮಾನ ಸಮಾವೇಶ.
ಮಾನ್ವಿ ಅ.04

ಮುಖ್ಯಮಂತ್ರಿ ಸಿದ್ದರಾಮಯ್ಯ ಅಕ್ಟೋಬರ್ 5 ರಂದು ಮಾನ್ವಿಯಲ್ಲಿ ನಾನಾ ಕಾಮಗಾರಿಗಳಿಗೆ ಚಾಲನೆ ಹಾಗೂ ಕೆಲ ಕಟ್ಟಡಗಳನ್ನು ಉದ್ಘಾಟನೆ ಮಾಡಲಿದ್ದಾರೆಂದು ಸಣ್ಣ ನೀರಾವರಿ ಹಾಗೂ ವಿಜ್ಞಾನ ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು ತಿಳಿಸಿದರು.ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಮಾನ್ವಿ ಪಟ್ಟಣದ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಅಂದೇ ಚಾಲನೆ ನೀಡಲಿದ್ದು, ಇದಕ್ಕಾಗಿ ಒಂದು ಸಾವಿರ್ ಐದು ನೂರು ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿದೆ ಎಂದರು.ಸರಕಾರಿ ಕಟ್ಟಡಗಳು ನಿರ್ಮಾಣ ಸೇರಿದಂತೆ ಇನ್ನಿತರ ಹಾಸ್ಟೇಲ್ ಉದ್ಘಾಟನೆ ಯಾಗಲಿದೆ, ನಂತರ ಸೂರ್ಯ ಫಂಕ್ಷನ್ ಹಾಲ್ ಬಳಿ ಬೃಹತ್ ಕಾರ್ಯಕರ್ತರ ಸಮಾವೇಶ ನಡೆಯಲಿದೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ