ಮಾನ್ವಿ ವಿಧಾನ ಸಭಾ ಕ್ಷೇತ್ರದಲ್ಲಿ ಆಯೋಜಿಸಿದ ಬೃಹತ್ ಸ್ವಾಭಿಮಾನಿ ಸಮಾವೇಶ.
ಮಾನ್ವಿ ಅ.06

ಕಾರ್ಯಕ್ರಮದಲ್ಲಿ ಹಿಂದುಳಿದ ವರ್ಗದ ಪ್ರಶ್ನಾತೀತ ನಾಯಕರು, ಅಭಿವೃದ್ಧಿಯ ಹರಿಕಾರರಾದ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಸಂಪುಟದ ಸಚಿವರೊಂದಿಗೆ ಸಸಿಗೆ ನೀರು ಹಾಕುವ ಮೂಲಕ ಬೃಹತ್ ಸ್ವಾಭಿಮಾನಿ ಸಮಾವೇಶಕ್ಕೆ ಚಾಲನೆ ನೀಡಲಾಯಿತು.ಈ ವೇಳೆ 458 ಕೋಟಿ ರೂ. ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ ಹಾಗೂ 1,670 ಕೋಟಿ ರೂ ವೆಚ್ಚದಲ್ಲಿ ಸಿಂಧನೂರು, ಮಾನ್ವಿ, ಕಲ್ಮಲಾ ಸಂಪರ್ಕಿಸುವ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ನೀಡಿದ್ದರ ಬಗ್ಗೆ ಸಿದ್ದರಾಮಯ್ಯ ಅವರು ತಿಳಿಸಿದರು.

ಸಮಾವೇಶದಲ್ಲಿ ಲೋಕೋಪಯೋಗಿ ಇಲಾಖೆಯ ಸಚಿವರಾದ ಸತೀಶ್ ಜಾರಕಿಹೊಳಿ, ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಶರಣ ಪ್ರಕಾಶ್ ಪಾಟೀಲ್, ಹಿಂದುಳಿದ ವರ್ಗದ ಸಚಿವರಾದ ಶಿವರಾಜ್ ತಂಗಡಗಿ, ಆಹಾರ ನಾಗರಿಕ ಸರಬರಾಜು ಇಲಾಖೆಯ ಸಚಿವರಾದ ಕೆ.ಎಚ್ ಮುನಿಯಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಎಚ್. ಸಿ ಮಹದೇವಪ್ಪ ಸೇರಿದಂತೆ ಅನೇಕ ಗಣ್ಯರು ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಾನ್ವಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಹಂಪಯ್ಯ ನಾಯಕ್, ಬಸನಗೌಡ ದದ್ದಲ್, ಶರಣಗೌಡ ಬಯ್ಯಾಪುರ ಹಂಪನಗೌಡ ಬಾದರ್ಲಿ, ಬಸನಗೌಡ ತುರುವಿಹಾಳ, ವಸಂತಕುಮಾರ್, ಬಸನಗೌಡ ಬಾದರ್ಲಿ, ಚಂದ್ರಶೇಖರ್ ಪಾಟೀಲ್, ಜಯಣ್ಣ, ಕೆ ಶಾಂತಪ್ಪ ಜಿ ಶಿವಮೂರ್ತಿ, ಅಮರೇಗೌಡ ಹಂಚಿನಾಳ್, ರುದ್ರಪ್ಪ ಅಂಗಡಿ, ಜಯವಂತರಾವ್ ಪತಂಗೆ, ಗಪುರ್ ಸಾಬ್, ಚುಕ್ಕಿ ಶಿವಕುಮಾರ್, ಶರಣಯ್ಯ ನಾಯಕ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ಮಾನ್ವಿ