ಸೆನ್ಸಾರ್ ಗೆ ಹೊರಟ “ತಾರಕೇಶ್ವರ” ಚಲನ ಚಿತ್ರ.

ಬೆಂಗಳೂರು ಅ.06

ಜಿ.ಆರ್ ಫಿಲಂಸ್ ಬೆಂಗಳೂರು ಲಾಂಛನದಲ್ಲಿ ಭಕ್ತಿ ಪ್ರಧಾನ ‘ತಾರಕೇಶ್ವರ’ ಅಡಿ ಬರಹದಲ್ಲಿ ‘ಅಸುರ ಕುಲತಿಲಕ’ ಎಂದು ಹೇಳಲಾದ ಕನ್ನಡ ಚಲನ ಚಿತ್ರ ಇದೀಗ ಪೋಸ್ಟ್ ಪ್ರೊಡಕ್ಷನ್ ಕಾರ್ಯ ಮುಗಿಸಿದ್ದು ಸಧ್ಯದಲ್ಲೇ ಸೆನ್ಸಾರ್ ಗೆ ಹೋಗಲು ಸಿದ್ಧವಾಗಿದೆ. ಈಗಾಗಲೇ ಚಲನ ಚಿತ್ರರಂಗದಲ್ಲಿ ವಿವಿಧ ಪಾತ್ರಗಳ ಮೂಲಕ ತಮ್ಮದೇ ಛಾಪು ಮೂಡಿಸಿರುವ ಗಣೇಶ್‌ರಾವ್ ಕೇಸರಕರ ಅವರ ೩೩೩ ನೇ. ಚಿತ್ರ ಇದು. ಸಿನಿಮಾಕ್ಕೆ ಕಥೆ, ಚಿತ್ರಕಥೆ, ಸಂಭಾಷಣೆ, ಸಾಹಿತ್ಯ ಬರೆದು ನಿರ್ದೇಶನ ಮಾಡಿರುವ ಪುರುಷೋತ್ತಮ್ ಅವರು ಹೇಳುವಂತೆ ಈ ಹಿಂದೆ ‘ಸಿದ್ಧರಾಮೇಶ್ವರ’ ಚಿತ್ರದಲ್ಲಿ ಗಣೇಶ್‌ರಾವ್ ಶಿವನಾಗಿ ನಟಿಸುತ್ತಿರುವಾಗ, ಆ ಸಂದರ್ಭದಲ್ಲೇ ‘ತಾರಕೇಶ್ವರ’ ಕುರಿತಂತೆ ಒನ್ ಲೈನ್ ಎಳೆ ಚರ್ಚಿಸಲಾಗಿದ್ದೇ ಈ ಚಿತ್ರ ನಿರ್ಮಿಸಲು ಕಾರಣವಾಗಿದೆ. ಶಿವಪುರಾಣದ ಕಥೆಯಲ್ಲಿ ತಾರಕಾಸುರ ಅಸುರ ಆದರೂ ಕೂಡ, ತಂದೆಯನ್ನು ಕೊಂದವನ ಮೇಲೆ ಸೇಡು ತೀರಿಸಿ ಕೊಳ್ಳಲು ತಪ್ಪಸ್ಸು ಮಾಡಿ ತನಗೆ ಸಾವು ಬರ ಬಾರದೆಂದು ಬ್ರಹ್ಮನಿಂದ ವರ ಪಡೆದು ಕೊಳ್ಳುತ್ತಾನೆ. ಮುಂದೆ ಯಾವ ರೀತಿ ಹೋರಾಟ ಮಾಡುತ್ತಾನೆಂದು ಕುತೂಹಲದ ಸನ್ನಿವೇಶ ಗಳೊಂದಿಗೆ ಚಿತ್ರದಲ್ಲಿ ತೋರಿಸಲಾಗಿದೆ.

ಗಣೇಶ್‌ರಾವ್ ಕೇಸರಕರ್ ಪುತ್ರ ಪ್ರಜ್ವಲ್ ಕೇಸರಕರ್ ಇಂದ್ರನಾಗಿ ಕಾಣಿಸಿ ಕೊಂಡಿದ್ದಾರೆ. ಬೆಂಗಳೂರು, ಶ್ರೀರಂಗಪಟ್ಟಣ, ಮೈಸೂರು ಮೊದಲಾದ ಕಡೆಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ ಎಂದರು. ನಾನು ‘ಸಿದ್ಧರಾಮೇಶ್ವರ ’ ಚಿತ್ರದಲ್ಲಿ ಈಶ್ವರ ಪಾತ್ರ ಮಾಡಿದಾಗ ಎಲ್ಲರೂ ಇಷ್ಟ ಪಟ್ಟರು. ಮುಂದೆ ‘ಗಂಗೆಗೌರಿ’ ಆರಂಭಿಸಿ ಎಡಿಟಿಂಗ್ ಸಮಯದಲ್ಲಿ ‘ತಾರಕೇಶ್ವರ’ ಚಿತ್ರ ಮಾಡುವ ಬಗ್ಗೆ ಪ್ರಸ್ತಾಪ ಬಂತು. ಆಗ ಒಂದಷ್ಟು ಆಪ್ತರು ಹಣ ಹೂಡಲು ಮುಂದೆ ಬಂದರು. ಇವರೆಲ್ಲರ ಸಹಕಾರ ದಿಂದಲೇ ತಾರಕಾಸುರನಾಗಿ ಅಭಿನಯಿಸಲು ಸಾಧ್ಯವಾಯಿತು. ಎಂದು ಚಿತ್ರದ ನಿರ್ಮಾಪಕರೂ ಆದ ಗಣೇಶ್‌ರಾವ್ ಕೇಸರಕರ್ ಸಂತಸ ಹಂಚಿ ಕೊಂಡರು. ಪಾರ್ವತಿಯಾಗಿ ನಾಯಕಿ ರೂಪಾಲಿ ಹಾಡಿನಲ್ಲಿ ಅದ್ಭುತ ಅಭಿನಯ ನೀಡಿದ್ದಾರೆ. ಬಾಲ ನಟಿ ಋತು ಸ್ಪರ್ಶ. ಸುಮಿತ ಪ್ರವೀಣ್, ಅನ್ನಪೂರ್ಣ, ರತಿ ಮನ್ಮಥರಾಗಿ ವಿಕ್ರಂಸೂರಿ-ನಮಿತಾರಾವ್, ಉಳಿದಂತೆ ಶಂಕರಭಟ್, ಶ್ರೀವಿಷ್ಣು, ಜಿಮ್ ಶಿವು, ಎನ್.ಟಿ.ರಾಮಸ್ವಾಮಿ, ಗುರುರಾಜ್, ಹೆಜ್ಜಾಜಿ ಮಹಾದೇವ, ಬಸವರಾಜ ದೇಸಾಯಿ, ವೀರೇಂದ್ರ ಬೆಳ್ಳಿ ಚುಕ್ಕಿ, ಮಧು ಕಾರ್ತಿಕ್, ಗೀತಾ,ರಾಜೇಶ್ವರಿ ಪಾಂಡೆ, ರಕ್ಷಾಗೌಡ, ರಂಜಿತ, ಶ್ರೀರಾಮ್, ರೂಪ ಮುಂತಾದವರು ಅಭಿನಯಿಸಿದ್ದಾರೆ. ತಾಂತ್ರಿಕ ವರ್ಗದಲ್ಲಿ- ಛಾಯಾಗ್ರಹಣ ಮುತ್ತುರಾಜ್, ಸಂಗೀತ ರಾಜ್‌ಭಾಸ್ಕರ್, ಸಂಕಲನ ಅನಿಲ್ ಕುಮಾರ್, ನೃತ್ಯ ಕಪಿಲ್ ,ವಸ್ತ್ರಾಲಂಕಾರ ವೀರೇಂದ್ರ ಬೆಳ್ಳಿ ಚುಕ್ಕಿ, ವರ್ಣಾಲಂಕಾರ ಅಭಿನಂದನ, ಪತ್ರಿಕಾ ಸಂಪರ್ಕ ಚಂದ್ರಶೇಖರ, ಡಾ, ಪ್ರಭು ಗಂಜಿಹಾಳ, ಡಾ.ವೀರೇಶ ಹಂಡಿಗಿ, ಸಂಭಾಷಣೆ ಜೆಮ್ ಶಿವು, ಸಂಕಲನ ಆರ್. ಅನಿಲ್ ಕುಮಾರ್, ಸಹ ನಿರ್ದೇಶನ ಜೆಮ್ ಶಿವು, ಶ್ರೀಕರ ಮಂಜು, ಸಹ ನಿರ್ಮಾಪಕರು ತುಳಜಾಬಾಯಿ, ರೂಪ. ಎಸ್.ದೊಡ್ಡನಿ, ಡಾ, ಸುಮಿತ ಪ್ರವೀಣ್, ಬಸವರಾಜ್ ದೇಸಾಯಿ , ನಿರ್ಮಾಣ ನಿರ್ವಹಣೆ ಹೇಮಂತ್ ಬಾಬು, ನಿರ್ಮಾಪಕರು ಗಣೇಶ್ ರಾವ್ ಕೇಸರಕರ ಆಗಿದ್ದಾರೆ. ಆದಷ್ಟು ಬೇಗನೇ ಚಿತ್ರವನ್ನು ರಾಜ್ಯಾದ್ಯಂತ ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡುವುದಾಗಿ ನಿರ್ಮಾಪಕ ಗಣೇಶರಾವ್ ಮತ್ತು ನಿರ್ದೇಶಕ ಬಿ.ಎ.ಪುರುಷೋತ್ತಮ ಓಂಕಾರಸ್ವಾಮಿ ಹೇಳಿದ್ದಾರೆ.

*****

ವರದಿ:-ಡಾ.ಪ್ರಭು ಗಂಜಿಹಾಳ

ಮೊ : ೯೪೪೮೭೭೫೩೪೬

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button