ಜಕ್ಕಲಿ ಗ್ರಾಮದಲ್ಲಿ ಪುಸ್ತಕದ ಗೂಡು ಕಾರ್ಯಕ್ರಮಕ್ಕೆ ಚಾಲನೆ ನೀಡಿದ – ಶಾಸಕ ಜಿ.ಎಸ್ ಪಾಟೀಲ.

ಜಕ್ಕಲಿ ಜ.13

ಗದಗ ಜಿಲ್ಲೆಯಲ್ಲಿ ಮೊದಲ ಬಾರಿಗೆ ರೋಣ ತಾಲೂಕಿನ ಜಕ್ಕಲಿ ಗ್ರಾಮ ಪಂಚಾಯತಿ ಕೇಂದ್ರದ ಆವರಣದಲ್ಲಿ ಮುಂದೆ ಇರುವ ಬಸ್ ನಿಲ್ದಾಣದಲ್ಲಿ ತಾಲೂಕ ಪಂಚಾಯತಿ ಸಹ ಯೋಗದೊಂದಿಗೆ ಗ್ರಾಮ ಪಂಚಾಯತಿ ವತಿಯಿಂದ ಪುಸ್ತಕ ಗೂಡು ಎಂಬ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು. ಗ್ರಾಮದಲ್ಲಿ ಗ್ರಾಮಸ್ಥರು ಪುಸ್ತಕ ಓದುವ ಹವ್ಯಾಸವನ್ನು ಬೆಳೆಸಿ ಕೊಳ್ಳುವ ಮೂಲಕ ಜ್ಞಾನ ವೃದ್ಧಿ ಮಾಡಿಕೊಳ್ಳಿ, ಶಾಲಾ ಮಕ್ಕಳು ಪುಸ್ತಕ ಗೂಡನ್ನು ಹೆಚ್ಚು ಸದುಪಯೋಗ ಪಡೆಯಬೇಕು ಹಾಗೂ ಮುಂದಿನ ದಿನಗಳಲ್ಲಿ ಇದೇ ಮಾದರಿಯಲ್ಲಿ ತಾಲೂಕಿನ ಎಲ್ಲಾ ಗ್ರಾ.ಪಂ.ಗಳಲ್ಲಿ ಈ ಕಾರ್ಯಕ್ರಮ ಯಶಸ್ವಿ ಗೊಳಿಸಲು ಪ್ರಯತ್ನಿಸಲಾಗುವುದು. ಓದುಗರಿಗೆ ತನ್ನ ವಾಸಸ್ಥಾನದಲ್ಲಿಯೇ ಒಂದು ವೇದಿಕೆ ಕಲ್ಪಿಸುವುದಕ್ಕಾಗಿ ಈ ಕಾರ್ಯಕ್ರಮ ಮಾಡಲಾಗಿದೆ ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮ ಯಶಸ್ವಿಯಾಗಿ ಮುನ್ನಡೆ ಸಾಧಿಸುತ್ತಿದೆ ಶಾಸಕ ಜಿ.ಎಸ್ ಪಾಟೀಲ ಮಾತನಾಡಿದರು.ತಾಲೂಕ ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿ ಚಂದ್ರಶೇಖರ ಬಿ ಕಂದಕೂರ ಮಾತನಾಡಿ, ಬಸ್ ನಿಲ್ದಾಣಗಳಲ್ಲಿ, ಉದ್ಯಾನಗಳಲ್ಲಿ, ಸಾರ್ವಜನಿಕ ಕಚೇರಿಗಳಲ್ಲಿ ಜನರ ಬಿಡುವಿನ ಸಮಯದಲ್ಲಿ ಪುಸ್ತಕ ಓದುವ ಹವ್ಯಾಸ ಮೂಡಲಿ ಎಂಬ ಧೈಯ ದೊಂದಿಗೆ ಈ ಪುಸ್ತಕ ಗೂಡುಗಳನ್ನು ನಿರ್ಮಿಸಲಾಗಿದೆ. ಇಲ್ಲಿ ಕಥೆ, ಕಾದಂಬರಿ, ನಿಯತ ಕಾಲಿಕೆಗಳಿದ್ದು, ಲಭ್ಯವಿರುವ ಪುಸ್ತಕಗಳನ್ನು ಓದುವ ಇಲ್ಲವೇ ಮನೆಗೆ ತೆಗೆದುಕೊಂಡು ಓದಿ ಮರಳಿ ಗೂಡಿಗೆ ತಂದಿಡಲು ಅವಕಾಶವಿದೆ. ಇದು ಜನರಿಗೆ ಓದುವ ಹವ್ಯಾಸ ಮೂಡಿಸುವ ಉತ್ತಮ ಪರಿಕಲ್ಪನೆಯಾಗಿದೆ. ಜತೆಗೆ ಎಲ್ಲ ವಯೋಮಾನದ ಓದುಗರಿಗೆ ಆಸಕ್ತಿ ದಾಯಕವಾಗುವಂತೆ ಪುಸ್ತಕದ ಗೂಡು ವೇದಿಕೆ ಏರ್ಪಡಿಸುವ ಉದ್ದೇಶ ಒಳಗೊಂಡಿದೆ. ಅತಿ ಕಡಿಮೆ ವೆಚ್ಚದಲ್ಲಿ ಬೆಲೆ ಕಟ್ಟಲಾಗದ ಜ್ಞಾನವನ್ನು ಹಂಚುವ ಕಾರ್ಯ ಕೈಗೆತ್ತಿ ಕೊಂಡಿದ್ದು, ಮುಂದಿನ ದಿನಗಳಲ್ಲಿ ತಾಲೂಕು ವ್ಯಾಪ್ತಿಯ 22 ಗ್ರಾಪಂಗಳಲ್ಲಿ ಈ ಕಾರ್ಯಕ್ರಮ ಅನುಷ್ಠಾನ ಮಾಡಲಾಗುವುದು ಎಂದು ತಿಳಿಸಿದರು. ಗ್ರಾ.ಪಂ ಪಿಡಿಒ ಶಿವಯೋಗಿ ರಿತ್ತಿ, ಗ್ರಾ.ಪಂ ಅಧ್ಯಕ್ಷ, ಉಪಾಧ್ಯಕ್ಷರು, ಸದಸ್ಯರು, ಗ್ರಾಮ ಪಂಚಾಯತಿ ಸಿಬ್ಬಂದಿಗಳು ಸೇರಿದಂತೆ ಗ್ರಾಮಸ್ಥರು ಹಾಜರಿದ್ದರು.ಜಕ್ಕಲಿ ಗ್ರಾಮದ ಅಂದಾನಪ್ಪ ಜ್ಞಾನಪ್ಪ ದೊಡ್ಡಮೇಟಿ ಪ್ರೌಢ ಶಾಲೆಯಲ್ಲಿ ನರೇಗಾ ಯೋಜನೆಯಡಿ ಅನುಷ್ಠಾನ ಮಾಡಲಾದ ಅಡುಗೆ ಕೋಣೆಯನ್ನು ಶಾಸಕರಾದ ಜಿ.ಎಸ್ ಪಾಟೀಲ ಲೋಕಾರ್ಪಣೆ ಮಾಡಿದರು. ಈ ಸಂದರ್ಭದಲ್ಲಿ ತಾಲೂಕ ಪಂಚಾಯತಿ ಇ.ಓ, ಪಿ.ಡಿ.ಓ, ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button