ಪಿ.ಯು.ಸಿ ವಿದ್ಯಾರ್ಥಿಗಳ ಗುರುವಂದನಾ ಕಾರ್ಯಕ್ರಮ.
ಗೋಲಗೇರಿ ಅ.15

ಸಿಂದಗಿ ತಾಲೂಕಿನ ಗೋಲಗೇರಿಯ ಶ್ರೀ ಗೊಲ್ಲಾಳೇಶ್ವರ ಸಂಯುಕ್ತ ಪದವಿ ಪೂರ್ವ ಕಾಲೇಜಿನ 2006 ನೇ ಸಾಲಿನ SSLC ಹಾಗೂ 2008 ನೇ ಸಾಲಿನ PUC ವಿದ್ಯಾರ್ಥಿ ಬಳಗದ ವತಿಯಿಂದ ಗುರುವಂದನಾ ಹಾಗೂ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ದಿನಾಂಕ 13 /10/ 2024 ರಂದು ತಾಲೂಕಿನ ಸಿಂದಗಿಯ ಅನುಗ್ರಹ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀಯುತ ಆರ್.ಬಿ ಬಿರಾದಾರ್ ನಿವೃತ್ತ ಪ್ರಾಂಶುಪಾಲರು ವಹಿಸಿಕೊಂಡಿದ್ದರು. ಈ ಸಮಾರಂಭದಲ್ಲಿ ಭಾಗವಹಿಸಿದ ನಿವೃತ್ತ ಪ್ರಾಂಶುಪಾಲರು, ನಿವೃತ್ತ ಶಿಕ್ಷಕರು, ಶಿಕ್ಷಕರು ಹಾಗೂ ಸಹಾಯಕ ಸಿಬ್ಬಂದಿಗಳನ್ನು , 2006, 2008 ನೇ. ಸಾಲಿನ ಎಲ್ಲಾ ವಿದ್ಯಾರ್ಥಿಗಳು ಒಗ್ಗೂಡಿ ತಮಗೆ ಒಳ್ಳೆಯ ಶಿಕ್ಷಣ ನೀಡಿದ ಶಿಕ್ಷಕ ವೃಂದಕ್ಕೆ ಆತ್ಮೀಯವಾಗಿ ಸನ್ಮಾನಿಸಿ ಗೌರವ ನೀಡಿದ್ದಾರೆ.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ