ಪೂರ್ವ ಸಿದ್ಧತಾ ಸಭೆಯಲ್ಲಿ ಉಪ ವಿಭಾಗಾಧಿಕಾರಿ ಎಂ ಕಾರ್ತಿಕ್ ಅ, 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ – ಅರ್ಥಪೂರ್ಣ ಆಚರಣೆ.
ಚಿತ್ರದುರ್ಗ ಅ.16

ಜಿಲ್ಲಾ ಕೇಂದ್ರದಲ್ಲಿ ಇದೇ ಅ. 23 ರಂದು ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದು ಉಪ ವಿಭಾಗಾಧಿಕಾರಿ ಎಂ.ಕಾರ್ತಿಕ್ ಹೇಳಿದರು.ನಗರದ ಉಪ ವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಿಸುವ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಸಮಾಜದ ಮುಖಂಡರ ಸಮ್ಮತಿಯಂತೆ ಅಂದು ಬೆಳಿಗ್ಗೆ 11 ಕ್ಕೆ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಅರ್ಥ ಪೂರ್ಣವಾಗಿ ಆಚರಿಸಲಾಗುವುದು ಎಂದರು.ಸರ್ಕಾರದ ಶಿಷ್ಟಾಚಾರದ ಅನುಸಾರ ಜಯಂತಿ ಕಾರ್ಯಕ್ರಮ ಆಯೋಜಿಸಲಾಗುವುದು. ಜಯಂತಿ ಅಂಗವಾಗಿ ಗೀತ ಗಾಯನ ಹಾಗೂ ಕಿತ್ತೂರು ರಾಣಿ ಚೆನ್ನಮ್ಮ ಅವರ ಕುರಿತು ಸಂಪನ್ಮೂಲ ವ್ಯಕ್ತಿಗಳಿಂದ ವಿಶೇಷ ಉಪನ್ಯಾಸ ಕಾರ್ಯಕ್ರಮ ಆಯೋಜಿಸಲಾಗುವುದು ಎಂದು ತಿಳಿಸಿದರು.ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ, ವೀರಶೈವ ಸಮಾಜ ಕಾರ್ಯದರ್ಶಿ ವೀರೇಂದ್ರ ಕುಮಾರ್, ಪಂಚಮಸಾಲಿ ಸಮಾಜದ ಜಿಲ್ಲಾಧ್ಯಕ್ಷ ಗಂಗಾಧರಪ್ಪ, ಮಾಜಿ ಅಧ್ಯಕ್ಷೆ ಮೋಕ್ಷ ರುದ್ರಸ್ವಾಮಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಇದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ