ರಾಂಪುರ ಹೋಬಳಿಯ ವೀರಶೈವ ಕಲ್ಯಾಣ ಮಂಟಪದಲ್ಲಿ ಮತಯಾಚನೆ ಮಾಡಿದ ಕಾಂಗ್ರೆಸ್ ಲೋಕಸಭಾ ಅಭ್ಯರ್ಥಿ ಎನ್ ಚಂದ್ರಪ್ಪ.
ರಾಂಪುರ ಏಪ್ರಿಲ್.06

ಚಿತ್ರದುರ್ಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಮೊಳಕಾಲ್ಮೂರು ತಾಲೂಕಿನ ರಾಂಪೂರದಲ್ಲಿ ಜರುಗಿದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಹೋಬಳಿ ಮಟ್ಟದ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಾದ ಶ್ರೀ ಬಿ.ಎನ್.ಚಂದ್ರಪ್ಪ ರವರು ಭಾಗವಹಿಸಿ, ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಎನ್ ವೈ ಗೋಪಾಲಕೃಷ್ಣ ಶಾಸಕರ ಅಪಾರ ಮತದಾರರ ಬಾಂಧವ್ಯಗಳನ್ನು ಪಡೆದು ಎಲ್ಲ ಬಡವರ್ಗದ ಜನ ಸಾಮಾನ್ಯರಿಗೆ ಒಳ್ಳೆ ಕೆಲಸಗಳನ್ನು ಮಾಡಿ ಒಳ್ಳೆಯ ಹೆಸರು ಪಡೆದ ಶಾಸಕರುಈ ಪ್ರಚಾರ ಸಭೆಯಲ್ಲಿ ಸಚಿವರಾದ ಶ್ರೀ ಡಿ.ಸುಧಾಕರ್ ರವರು.

ಮಾಜಿ ಸಚಿವರಾದ ಶ್ರೀ ಹೆಚ್.ಆಂಜನೇಯ ರವರು, ಶಾಸಕರುಗಳಾದ ಶ್ರೀ.ಎನ್.ವೈ.ಗೋಪಾಲಕೃಷ್ಣ ರವರು, ಶ್ರೀ. ಟಿ.ರಘುಮೂರ್ತಿ ರವರು, ಶ್ರೀ ಕೆಸಿ.ವೀರೇಂದ್ರ ಪಪ್ಪಿ ರವರು, ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯಾಧ್ಯಕ್ಷ ಶ್ರೀ ಜಿಎಸ್.ಮಂಜುನಾಥ್ ರವರು, ಚಿತ್ರದುರ್ಗ ಡಿಸಿಸಿ ಜಿಲ್ಲಾಧ್ಯಕ್ಷ ಶ್ರೀ ತಾಜ್ ಪೀರ್ ರವರು, ಗ್ಯಾರಂಟಿ ಅನುಷ್ಟಾನ ಸಮಿತಿ ಜಿಲ್ಲಾಧ್ಯಕ್ಷ ಶ್ರೀ ಶಿವಣ್ಣ ರವರು, ಕರ್ನಾಟಕ ದ್ರಾಕ್ಷಿ ಮತ್ತು ವೈನ್ ಬೋರ್ಡ್ ಅಧ್ಯಕ್ಷ ಶ್ರೀ ಯೋಗೀಶ್ ಬಾಬು ರವರು, ಡಿಸಿಸಿ ಕಾರ್ಯಾಧ್ಯಕ್ಷ ಶ್ರೀ ಹಾಲಸ್ವಾಮಿ ರವರು ಸೇರಿದಂತೆ ಮೊಳಕಾಲ್ಮೂರು ತಾಲೂಕಿನ ಜಿ.ಪಂ, ತಾ.ಪಂ ಮಾಜಿ ಸದಸ್ಯರುಗಳು, ಗ್ರಾ.ಪಂ ಸದಸ್ಯರುಗಳು ಮತ್ತು ಜಿಲ್ಲಾ ಮತ್ತು ತಾಲೂಕಿನ ಕಾಂಗ್ರೆಸ್ ನ ಪದಾಧಿಕಾರಿಗಳು ಉಪಸ್ಥಿತರಿದ್ದರು.ಎಂದು ವರದಿಯಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ತಿಪ್ಪೇಸ್ವಾಮಿ.ಹೊಂಬಾಳೆ. ಮೊಳಕಾಲ್ಮೂರು