ರಕ್ಕಸಗಿ ಕಾರ್ಮಿಕರ ಆಯವ್ಯಯ ತಯಾರಿಕಾ ಅಭಿಯಾನಕ್ಕೆ ಚಾಲನೆ.
ಹುನಗುಂದ ನವೆಂಬರ್.2

ಕಾರ್ಮಿಕರ ಆಯವ್ಯಯ ತಯಾರಿಸುವ ಸಲುವಾಗಿ ಉದ್ಯೋಗ ಖಾತರಿ ನಡಿಗೆ ಸುಸ್ಥಿರತೆಯಡೆಗೆ ಅಭಿಯಾನಕ್ಕೆ ಹುನಗುಂದ ತಾಲ್ಲೂಕಿ ನ ರಕ್ಕಸಗಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇವಿನಮಟ್ಟಿ ಗ್ರಾಮದಲ್ಲಿ ಅಧ್ಯಕ್ಷೆ ಶೃತಿ ನಿಲ್ಲಮ್ಮನವರ ಚಾಲನೆ ನೀಡಿದರು.ಈ ವೇಳೆ ಮಾತನಾಡಿದ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಪಡಿಯಪ್ಪ ಕೊಳಮಲಿ, 2024 – 25ನೇ ಸಾಲಿನ ಕಾರ್ಮಿಕ ಆಯವ್ಯಯ ತಯಾರಿಸುತ್ತಿದ್ದು, ಗ್ರಾಮಸ್ಥರು ವೈಯಕ್ತಿಕ ಕಾಮಗಾರಿಗಳ ಬಗ್ಗೆ ಹೆಚ್ಚಿನ ಮಹತ್ವ ನೀಡಬೇಕು ಎಂದು ಸೂಚಿಸಿದರು. ಬಳಿಕ ಗ್ರಾಮಸ್ಥರ ಹಲವು ಸಮಸ್ಯೆಗಳಿಗೆ ಅಭಿವೃದ್ಧಿ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಸೂಚಿಸಿದರು.ಬಳಿಕ ಮಾತನಾಡಿದ ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ನರೇಗಾ ಯೋಜನೆಯಡಿ ಸಿಗುತ್ತಿರುವ ವೈಯಕ್ತಿಕ ಕಾಮಗಾರಿಗಳ ಮೊತ್ತ 5 ಲಕ್ಷಕ್ಕೆ ಹೆಚ್ಚಳವಾದ ಬಗ್ಗೆ ಮಾಹಿತಿ ನೀಡಿದರು. ಜೊತೆಗೆ ನರೇಗಾ ಸಿಗುತ್ತಿರುವ ಕೃಷಿ ಹೊಂಡ ಬದು ನಿರ್ಮಾಣ, ಬಚ್ಚಲು ಗುಂಡಿ ಸೇರಿದಂತೆ ನರೇಗಾ ಯೋಜನೆಯಡಿ ಸಿಗುತ್ತಿರುವ ವೈಯಕ್ತಿಕ ಕಾಮಗಾರಿಗಳ ಹಾಗೂ ಸಮುದಾಯ ಕಾಮಗಾರಿಗಳ ಬಗ್ಗೆ ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಬಿ. ಎಚ್. ತಿಳಗೂಳ, ಐಇಸಿ ಸಂಯೋಜಕ ಬಸವರಾಜ ಕೊಪ್ಪದ, ಗ್ರಾಮ ಪಂಚಾಯಿತಿ ಸಿಬ್ಬಂದಿ ಅಭಿವೃದ್ಧಿ ಅಧಿಕಾರಿ ಪಡಿಯಪ್ಪ ಕೊಳಮಲಿ, ತಾಲ್ಲೂಕು ಕಾರ್ಯಕ್ರಮ ವ್ಯವಸ್ಥಾಪಕ ಯು. ಆರ್ ಗೋನಾಳ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶೃತಿ ನಿಲ್ಲಮ್ಮನವರ, ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಪರಸಪ್ಪ ಕೆ. ಭೀಮಣ್ಣವರ, ಎಸ್ ಡಿಎ ಪ್ರೇಮಾ ಲೆಕ್ಕದ, ಬಿಎಫ್ ಟಿ ಸಂತೋಷ ಅಕ್ಕಿ, ಡಾಟಾ ಎಂಟ್ರಿ ಆಪರೇಟರ್ ಶಿವು , ಬಿಲ್ ಕಲೆಕ್ಟರ್ ರಾಜು ಬೇವೂರ, ಸರ್ವ ಸದಸ್ಯರು, ಅನುಷ್ಠಾನ ಇಲಾಖೆ ಸಿಬ್ಬಂದಿ ವರ್ಗ, ಕಾಯಕ ಬಂಧುಗಳು ಉಪಸ್ಥಿತರಿದ್ದರು.