ಅಧಿವೇಶನ ಅಗತ್ಯ ಸಿದ್ಧತೆಗೆ ಸಭಾಧ್ಯಕ್ಷ – ಯು.ಟಿ ಖಾದರ್ ಫರೀದ್ ಸೂಚನೆ.

ಬೆಳಗಾವಿ ಅ .18

ಪ್ರಸಕ್ತ ಸಾಲಿನ ಡಿಸೆಂಬರ್ ನಲ್ಲಿ ಬೆಳಗಾವಿಯಲ್ಲಿ ಜರುಗಲಿರುವ ವಿಧಾನ ಮಂಡಲದ ಚಳಿಗಾಲ ಅಧೀವೇಶನವನ್ನು ಕಳೆದ ಬಾರಿಯಂತೆ ಯಾವುದೇ ದೂರುಗಳಿಗೆ ಆಸ್ಪದ ನೀಡದೆ ಅಚ್ಚು ಕಟ್ಟಾಗಿ ಆಯೋಜಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿ ಕೊಳ್ಳಬೇಕು ಎಂದು ಕರ್ನಾಟಕ ವಿಧಾನ ಸಭೆ ಸಭಾಧ್ಯಕ್ಷರಾದ ಯು.ಟಿ.ಖಾದರ ಫರೀದ್ ಅವರು ಸೂಚನೆ ನೀಡಿದರು.ಬೆಳಗಾವಿ ಸುವರ್ಣ ವಿಧಾನ ಸೌಧದಲ್ಲಿ ಶುಕ್ರವಾರ ನಡೆದ ಬೆಳಗಾವಿ ಚಳಿಗಾಲ ಅಧಿವೇಶನದ ಕುರಿತ ಪೂರ್ವ ಸಿದ್ಧತಾ ಸಭೆಯ ಅಧ್ಯಕ್ಷತೆ‌ ವಹಿಸಿ ಅವರು ಮಾತನಾಡಿದರು.ಅಧಿವೇಶನಕ್ಕೆ ಆಗಮಿಸುವ ಮುಖ್ಯಮಂತ್ರಿ, ಸಚಿವರು, ಶಾಸಕರುಗಳಿಗೆ ಯಾವುದೇ ರೀತಿಯ ಅನಾನೂಕುಲ ವಾಗದಂತೆ ನಿಗಾ ವಹಿಸಬೇಕು. ಅಧಿವೇಶನಕ್ಕೆ ಬರುವಂತಹ ಸಚಿವರು, ಶಾಸಕರು, ಸಚಿವಲಾಯದ‌ ಅಧಿಕಾರಿ, ಸಿಬ್ಬಂದಿಗಳು, ಚಾಲಕರಿಗೆ ಹಾಗೂ ಪೋಲಿಸ್ ಅಧಿಕಾರಿ ಸಿಬ್ಬಂದಿಗಳಿಗೆ ವ್ಯವಸ್ಥಿತ ವಸತಿ, ಊಟೋಪಹಾರದ ವ್ಯವಸ್ಥೆ ಯಾಗಬೇಕು ಎಂದರು.ಸುವರ್ಣ ಸೌಧದ ಪ್ರವೇಶ ದ್ವಾರದಲ್ಲಿ ಜನ ಹಾಗೂ ಸಂಚಾರ ದಟ್ಟಣೆ ಆಗದಂತೆ ಕ್ರಮ ಕೈಗೊಳ್ಳಬೇಕು. ಅಲ್ಲದೇ ಪ್ರತಿಭಟನಾ ಸ್ಥಳ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಸಿ.ಸಿ ಕ್ಯಾಮೆರಾಗಳನ್ನು ಅಳವಡಿಸಿ ನಿರಂತರವಾಗಿ ನಿಗಾ ವಹಿಸಲು ತಿಳಿಸಿದರು.ಅಧಿವೇಶನ‌ದ ವೀಕ್ಷಣೆಗೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸುತ್ತಾರೆ. ಈ ನಿಟ್ಟಿನಲ್ಲಿ ಸುವರ್ಣ ಸೌಧದಲ್ಲಿ ಸ್ವಚ್ಚತೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಕಲಾಪಗಳ‌ ವೀಕ್ಷಣೆಗೆ ಆಗಮಿಸುವ ಶಾಲೆಗಳ ವಿವರಗಳನ್ನು‌ ಮುಂಚಿತವಾಗಿ ನೀಡಬೇಕು. ಕಾಯುವಿಕೆ ಸಮಯದಲ್ಲಿ‌ ಮಕ್ಕಳಿಗೆ ನೆರಳಿನ ವ್ಯವಸ್ಥೆ ಮಾಡಬೇಕು. ಕಳೆದ ಬಾರಿಯ ಅಧಿವೇಶನದಂತೆ ಈ ಬಾರಿಯ ಚಳಿಗಾಲದ ಅಧಿವೇಶನವನ್ನು ಅಚ್ಚು ಕಟ್ಟಾಗಿ ಜರುಗಿಸಬೇಕು.‌ ಎಲ್ಲ ಇಲಾಖೆಗಳು ಸಮನ್ವಯ ದೊಂದಿಗೆ ಕಾರ್ಯ ನಿರ್ವಹಿಸುವುದರ‌ ಮೂಲಕ ಚಳಿಗಾಲದ ಅಧಿವೇಶನವನ್ನು ಯಶಸ್ವಿಗಾಗಿ ಎಲ್ಲಾ ಸಿದ್ಧತೆಗಳನ್ನು ಮಾಡಿ ಕೊಳ್ಳುವಂತೆ ಸಭಾಧ್ಯಕ್ಷರಾದ ಯು.ಟಿ. ಖಾದರ್ ಅವರು ತಿಳಿಸಿದರು.

ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು‌ ಮಾತನಾಡಿ, ಕಳೆದ‌ ಬಾರಿಯಂತೆ ಈ ಬಾರಿಯು ಪ್ರತಿ ದಿನ ಬೇರೆ ಬೇರೆ ಜಿಲ್ಲೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸ ಬೇಕು. ಈ ಕಾರ್ಯಕ್ರಮಗಳಿಗೆ ಅಕ್ಕ ಪಕ್ಕದ‌ ಜಿಲ್ಲೆಗಳ ಕಲಾವಿದರಿಗೆ ಆದ್ಯತೆ ನೀಡಬೇಕು ಎಂದರು.ಅಧಿವೇಶನದ ಸಂದರ್ಭದಲ್ಲಿ ಅಂತರ್ಜಾಲ‌ ವ್ಯವಸ್ಥೆಯಲ್ಲಿ ಯಾವುದೇ ಅಡತಡೆ ಆಗದಂತೆ‌ ನೋಡಿ ಕೊಳ್ಳಲು ಸೂಚಿಸಿದರು. ಶಾಸಕರು, ಸಚಿವರುಗಳು ವಾಸ್ತವ್ಯ ಮಾಡುವಂತಹ ಹೊಟೆಲಗಳಲ್ಲಿ ಸಾರ್ವಜನಿಕರ‌ ಭೇಟಿಗೆ ಲಾಂಜ್ ವ್ಯವಸ್ಥೆ ಮಾಡಬೇಕು. ಈ ಕುರಿತು ಹೋಟೆಲ್‌ ಮಾಲೀಕ ರೊಂದಿಗೆ ಸಭೆ ಜರುಗಿಸಿ ಸೂಕ್ತ ನಿರ್ದೆಶನಗಳನ್ನು ನೀಡಲು ತಿಳಿಸಿದರು.ಸುವರ್ಣ ಸೌಧದಲ್ಲಿ ಶಾಸಕರ‌ ಭವನ‌ ನಿರ್ಮಾಣ ಹಾಗೂ ನಿರಂತರ‌ ನೀರು‌‌‌ ಪೂರೈಕೆಗೆ ಸಂಬಂಧಿಸಿದಂತೆ ಯೋಜನೆಯನ್ನು ರೂಪಿಸಿ ಪ್ರಸ್ತಾವನೆಯನ್ನು ಸಲ್ಲಿಸುವಂತೆ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರು ತಿಳಿಸಿದರು.ಜಿಲ್ಲಾಧಿಕಾರಿ‌ ಮೊಹಮ್ಮದ್‌ ರೋಷನ್ ಅವರು‌ ಮಾತನಾಡಿ, ಅಧಿವೇಶನವನ್ನು ವ್ಯವಸ್ಥಿತವಾಗಿ ಜರುಗಿಸುವ‌ ಹಿನ್ನೆಲೆಯಲ್ಲಿ ವಸತಿ, ಆಹಾರ‌ ಹಾಗೂ ಭದ್ರತಾ‌ ಸಮಿತಿಗಳನ್ನು ರಚಿಸಿ ಸಭೆಗಳನ್ನು ಆಯೋಜಿಸಲಾಗಿದೆ. ಅಧಿವೇಶನಕ್ಕೆ‌ ಆಗಮಿಸುವ ಮುಖ್ಯಮಂತ್ರಿಗಳು, ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಸೂಕ್ತ‌ ವಸತಿ‌ ಹಾಗೂ ಊಟೋಪಹಾರದ ಕಲ್ಪಿಸಲು ಸಭೆಯಲ್ಲಿ‌ ಚರ್ಚಿಸ ಲಾಗಿರುತ್ತದೆ. ಅಲ್ಲದೇ ಭದ್ರತೆಗೆ ಸಂಬಂಧಿಸಿದಂತೆ ಸೂಕ್ತ‌ ವ್ಯವಸ್ಥೆಗಳನ್ನು ಮಾಡಿ ಕೊಳ್ಳಲು ಯೋಜಿಸಲಾಗಿದೆ ಎಂದು ತಿಳಿಸಿದರು.ಸುವರ್ಣ ಸೌಧದಲ್ಲಿ ಸಚಿವರು, ಶಾಸಕರು, ಸಚಿವಾಲಯದ ಅಧಿಕಾರಿ, ಸಿಬ್ಬಂದಿ, ವಾಹನ ಚಾಲಕರಿಗೆ ಹಾಗೂ ಪೋಲಿಸ್ ಸಿಬ್ಬಂದಿಗಳಿಗೆ ಪ್ರತ್ಯೇಕವಾಗಿ ಊಟದ ವ್ಯವಸ್ಥೆ ಮಾಡಲಾಗುವುದು. ಅಲ್ಲದೇ ಸುಮಾರು ನಾಲ್ಕು‌ ಖಾಸಗಿ ಕ್ಯಾಂಟಿನ್ ಗಳನ್ನು ತೆರೆಯಲಾಗುವುದು. ಡಿ.ಸಿ.ಪಿ ರೋಹನ ಜಗದೀಶ‌ ಕಳೆದ ಅಧಿವೇಶನಕ್ಕೆ ಅಂದಾಜು ಐದು ಸಾವಿರ ಪೋಲಿಸ್ ಅಧಿಕಾರಿ, ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಆ ಸಂದರ್ಭದಲ್ಲಿ ಪೋಲಿಸ್ ಅಧಿಕಾರಿ‌ ಹಾಗೂ ಸಿಬ್ಬಂದಿಗಳಿಗೆ ಅಚ್ವು ಕಟ್ಟಾದ ವಸತಿ ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು. ಪ್ರತಿಭಟನಾ ಸ್ಥಳಗಳಲ್ಲಿ ಅಗತ್ಯ ಪೋಲಿಸ್ ಬಂದೋಬಸ್ತ ಜೊತೆ ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು. ಸಭೆಯಲ್ಲಿ ಶಾಸಕರಾದ ರಾಜು (ಆಸೀಫ್) ಸೇಠ ಕರ್ನಾಟಕ ವಿಧಾನ ಸಭೆ ಕಾರ್ಯದರ್ಶಿ ಎಂ.ಕೆ.ವಿಶಾಲಾಕ್ಷಿ, ವಿಧಾನ ಪರಿಷತ್ ಕಾರ್ಯದರ್ಶಿಗಳಾದ ಮಹಾಲಕ್ಷ್ಮೀ, ಜಿಲ್ಲಾ‌ ಪೊಲಿಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ‌ ಗುಳೇದ,ಜಿಲ್ಲಾ ಪಂಚಾಯತ ಸಿ.ಇ.ಓ. ರಾಹುಲ್ ಶಿಂಧೆ,ಪ್ರಶಿಕ್ಷಣಾರ್ಥಿ ಆಯ್.ಎಸ್. ಅಧಿಕಾರಿ ದಿನೇಶಕುಮಾರ್ ಮೀನಾ, ವಿವಿಧ ಇಲಾಖೆಗಳ‌ ಅಧಿಕಾರಿಗಳು ಉಪಸ್ಥಿತರಿದ್ದರು.

ಸುವರ್ಣಸೌಧ ಪರಿಶೀಲನೆ; ಸಮರ್ಪಕ ನಿರ್ವಹಣೆಗೆ ನಿರ್ದೇಶನ:ಸಭೆಗೂ ಮುಂಚೆ ಸಭಾಧ್ಯಕ್ಷರಾದ ಯು.ಟಿ.ಖಾದರ‌್ ಹಾಗೂ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಸುವರ್ಣ ಸೌಧದ ವಿವಿಧ ಸಭಾಂಗಣಗಳನ್ನು ವೀಕ್ಷಿಸಿದರು‌. ಇದೇ ಸ್ವಚ್ಛತಾ ಸಿಬ್ಬಂದಿಗಳನ್ನು ಮಾತನಾಡಿಸಿದ ಯು.ಟಿ.ಖಾದರ್ ಅವರು, ದೈನಂದಿನ ಸ್ವಚ್ಛತಾ ಕೆಲಸದ ಕುರಿತು ಮಾಹಿತಿ ಪಡೆದು ಕೊಂಡರು.ತದನಂತರ ವಿಧಾನ ಸಭೆ, ವಿಧಾನ‌ ಪರಿಷತ್ ಸಭಾಂಗಣಗಳಿಗೆ ಭೇಟಿ ನೀಡಿ ವ್ಯವಸ್ಥೆಗಳನ್ನು ಪರಿಶೀಲಿಸಿದರು.ಸ್ವಚ್ಛತೆ, ಆಸನಗಳ ನಿರ್ವಹಣೆ, ಪ್ರವೇಶ ದ್ವಾರದ ಬ್ಯಾಗೇಜ್ ಸ್ಕ್ಯಾನರ್ ಮತ್ತಿತರ ವ್ಯವಸ್ಥೆಗಳನ್ನು ಮುಂಚಿತವಾಗಿ ಸಿದ್ಧವಾಗಿಟ್ಟು ಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button