ಮಾಧ್ಯಮ ಗೋಷ್ಠಿಯಲ್ಲಿ ಆಕ್ರೋಶ ವ್ಯಕ್ತಪಡಿಸಿದ – ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್.
ಮಾನ್ವಿ ಅ.02

ಕ್ಷೇತ್ರದಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಆದರೆ ಅಭಿವೃದ್ಧಿ ಮಾಡಬೇಕಾದ ಶಾಸಕ ಹಂಪಯ್ಯ ನಾಯಕರಿಗೆ ಕಾಳಜಿಯೇ ಇಲ್ಲವಾಗಿದೆ ಎಂದು ಮಾಜಿ ಶಾಸಕ ಹಂಪಯ್ಯ ನಾಯಕ ತಿಳಿಸಿದರು. ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಪತ್ರಿಕಾ ಭವನದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಕೆಳಭಾಗದ ರೈತರಿಗೆ ಕಾಲುವೆ ನೀರು ತಲುಪದ ಕಾರಣ ಬೆಳೆಗಳು ಒಣಗಿ ಹೋಗಿವೆ.

ಈ ಬಗ್ಗೆ ಕಾಳಜಿ ವಹಿಸಬೇಕಾದ ಶಾಸಕ ಹಂಪಯ್ಯ ನಾಯಕರ ಧೋರಣೆಯೇ ಕಾರಣ ಎಂದು ಕಿಡಿಕಾರಿದರು. ಮಾಜಿ ಶಾಸಕ ಬಸನಗೌಡ ಬ್ಯಾಗವಾಟ್ ಮಾತನಾಡಿ, ಮಾನ್ವಿಯಲ್ಲಿ ಶಿಕ್ಷಕರ ಕೊರತೆ, ವೈದ್ಯರ ಕೊರತೆ ರಸ್ತೆಗಳ ಸಮಸ್ಯೆ ಇದ್ದರು ಸಹ ಶಾಸಕ ಹಂಪಯ್ಯ ನಾಯಕ ಅವರಿಗೆ ಕಾಳಜಿ ಇಲ್ಲದ ಮಾನ್ವಿ ಅಭಿವೃದ್ಧಿಯಿಂದ ಹಿಂದುಳಿದಿದೆ ಎಂದು ಆರೋಪಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ಮಾನ್ವಿ