ಕನ್ನಡ ಜ್ಯೋತಿ ಹೊತ್ತ ಕನ್ನಡ ರಥ ಯಾತ್ರೆಯನ್ನು ಅತ್ಯಂತ ವಿಜ್ರಂಭಣೆಯಿಂದ ಸ್ವಾಗತಿಸಿ – ಬೀಳ್ಕೊಡಲಾಯಿತು.
ಕನಕಗಿರಿ ಅ.19

೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಕನ್ನಡ ಜ್ಯೋತಿ ರಥಯಾತ್ರೆಯು ಕೇಸರಹಟ್ಟಿ ಗ್ರಾಮದ ಮೂಲಕ ಇಂದು ಕನಕಗಿರಿ ಪಟ್ಟಣಕ್ಕೆ ಆಗಮಿಸಿದ ಕನ್ನಡ ಜ್ಯೋತಿ ರಥಯಾತ್ರೆಯನ್ನು ಪುಷ್ಪ ನಮನಗಳನ್ನು ಸಲ್ಲಿಸುವ ಮೂಲಕ ಸ್ವಾಗತಿಸಿ ಕಲ್ಮಠದಿಂದ ರಾಜ ಬೀದಿಯ ಮೂಲಕ ಡೊಳ್ಳು, ಡೋಲು ಬಾರಿಸುತ್ತ ವಿಜೃಂಭಣೆಯಿಂದ ವಾಲ್ಮೀಕಿ ವೃತ್ತದ ವರೆಗೆ ಬೀಳ್ಕೊಡಲಾಯಿತು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ತಾಲೂಕ ಅಧಿಕಾರಿಗಳು, ಹಿರಿಯ ಮುಖಂಡರು, ಕನ್ನಡ ಸಾಹಿತ್ಯ ಪರಿಷತ್ತಿನ ಕಸಾಪ ಪದಾಧಿಕಾರಿಗಳು, ಆಜೀವ ಸದಸ್ಯರು, ಕನ್ನಡ ಅಭಿಮಾನಿಗಳು, ಸಕಾಲಕ್ಕೆ ಆಗಮಿಸಿ ಕನ್ನಡ ಜ್ಯೋತಿ ರಥಯಾತ್ರೆಯನ್ನು ಬರ ಮಾಡಿಕೊಂಡು ಗೌರವ ಸಲ್ಲಿಸುವ ಮೂಲಕ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಶುಭ ಹಾರೈಸಿದರು ಎಂದು ಸುದ್ದಿ ಯಾಗಿರುತ್ತದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಮಂಜುನಾಥ.ನವಲಿ. ಕೊಪ್ಪಳ.