ಕನ್ನಡ ರಾಜ್ಯೋತ್ಸವ ಪೂರ್ವಭಾವಿ ಸಭೆ.
ತರೀಕೆರೆ ಅ.21

ನವಂಬರ್ ಒಂದ ರಂದು ನಡೆಯಲಿರುವ ಕನ್ನಡ ರಾಜ್ಯೋತ್ಸವ, ಕರ್ನಾಟಕ 50 ರ ಸಂಭ್ರಮದ ಹಬ್ಬದ ರೀತಿ ಆಚರಿಸೋಣ ಎಂದು ಶಾಸಕರಾದ ಜಿ.ಹೆಚ್ ಶ್ರೀನಿವಾಸ್ ಹೇಳಿದರು. ಅವರು ಇಂದು ತರೀಕೆರೆ ತಾಲೂಕು ಆಡಳಿತ ಸೌಧದಲ್ಲಿ ನಾಡ ಹಬ್ಬಗಳ ಸಮಿತಿ ಕರೆದಿದ್ದ ಸಭೆಯಲ್ಲಿ ಮಾತನಾಡಿದರು. ಸಾಂಸ್ಕೃತಿಕ ಕಾರ್ಯಕ್ರಮಗಳಿ ಗೆ 30 ನಿಮಿಷ ಸಮಯ ನಿಗದಿ ಪಡಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ತಿಳಿಸಿದರು. ಸಮಾಜ ಸೇವಕ ಎಂ ನರೇಂದ್ರ, ನಗರ ಕಾಂಗ್ರೆಸ್ ಅಧ್ಯಕ್ಷರಾದ ಪ್ರಕಾಶ್ ವರ್ಮ, ಪತ್ರಕರ್ತರಾದ ಟಿ.ಎಸ್ ಬಸವರಾಜ್ ರವರು ಮಾತನಾಡಿ ಎಲ್ಲಾ ಇಲಾಖೆಯ ಅಧಿಕಾರಿಗಳು ಸಿಬ್ಬಂದಿ ಗಳೊಂದಿಗೆ ಹಾಜರಾಗಬೇಕು ಎಂದು ಹೇಳಿದರು.

ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ರವಿ ದಳವಾಯಿ ಮಾತನಾಡಿ ಕರ್ನಾಟಕ 50 ರ ಸಂಭ್ರಮದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 50 ಜನರನ್ನು ಗೌರವಿಸಿ ಸನ್ಮಾನಿಸ ಬೇಕು ಎಂದು ಹೇಳಿದರು. ಉಪ ವಿಭಾಗ ಅಧಿಕಾರಿ ಡಾ, ಕೆ.ಜೆ ಕಾಂತರಾಜ್ ರವರು ಮಾತನಾಡಿ ರಂಗೋಲಿ ಸ್ಪರ್ಧೆ ಏರ್ಪಡಿಸ ಬೇಕು ಕ.ಸಾ.ಪ ದ ಮಹಿಳಾ ಘಟಕದ ಅಧ್ಯಕ್ಷರಾದ ಸುನಿತಾ ಕಿರಣ್ ರವರಿಗೆ ಜವಾಬ್ದಾರಿ ನೀಡಿದರು. ಎಲ್ಲಾ ಅಂಗಡಿಗಳಿಗೆ ಕನ್ನಡ ನಾಮಫಲಕ ಕಡ್ಡಾಯವಾಗಿ ಹಾಕಿಸ ಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ರಮೇಶ್ ತಿಳಿಸಿದರು. ಜಯ ಕರ್ನಾಟಕ ಸಂಘಟನೆಯ ತಾಲೂಕು ಅಧ್ಯಕ್ಷ ಜಗದೀಶ್ ಮಾತನಾಡಿ ಕನ್ನಡಪರ ಹೋರಾಟಗಾರರಿಗೆ ಗೌರವಿಸಿ ಅಭಿನಂದಿಸ ಬೇಕು ಎಂದು ಹೇಳಿದರು. ಮಿಲ್ಟ್ರಿ ಶ್ರೀನಿವಾಸ್ ಮಾತನಾಡಿ ಉಪ ಸಮಿತಿಗಳನ್ನು ರಚಿಸಬೇಕು ಎಂದು ಹೇಳಿದರು. ಸಭೆಯಲ್ಲಿ ನಾಡ ಹಬ್ಬಗಳ ಸಮಿತಿಯ ಅಧ್ಯಕ್ಷರಾದ ತಹಶೀಲ್ದಾರ್ ವಿಶ್ವಜಿತ್ ಮೆಹತಾ, ತಹಶೀಲ್ದಾರ್ ಗ್ರೇಡ್ 2 ಡಾ, ನೂರುಲ್ ಹುದಾ, 5 ಗ್ಯಾರೆಂಟಿ ಯೋಜನೆಗಳ ತಾಲೂಕು ಅಧ್ಯಕ್ಷರಾದ ಎನ್.ಜಿ ರಮೇಶ್, ತಾಲೂಕು ಕಾರ್ಯ ನಿರ್ವಹಣಾ ಅಧಿಕಾರಿಗಳಾದ ಡಾ, ದೇವೇಂದ್ರಪ್ಪ, ಸಂಘ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು