ಕಡ್ಡಾಯ ಕಾಲುಬಾಯಿ ರೋಗ ಲಸಿಕೆ ಹಾಕಿಸಿ – ಶಾಸಕ ಡಾ, ಎನ್.ಟಿ ಶ್ರೀ ನಿವಾಸ್.
ಗುಡೇಕೋಟೆ ಅ.22

ಜಾನುವಾರುಗಳ ರಕ್ಷಣೆಗೆ ಮುಂಜಾಗ್ರತವಾಗಿ ಕಾಲ ಕಾಲಕ್ಕೆ ಲಸಿಕೆ ಹಾಕುವುದು ಮತ್ತು ರೋಗ ಪೀಡಿತ ಜಾನುವಾರುಗಳಿಗೆ ಚಿಕಿತ್ಸೆ ನೀಡುವ ಮೂಲಕ ಜಾನುವಾರುಗಳ ಆರೋಗ್ಯ ರಕ್ಷಣೆಗೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳುವುದು ಅತೀ ಅವಶ್ಯಕ ಎಂದು ಶಾಸಕ ಡಾ, ಎನ್.ಟಿ ಶ್ರೀನಿವಾಸ್ ತಿಳಿಸಿದರು.ಕೂಡ್ಲಿಗಿ ತಾಲೂಕಿನ ನರಸಿಂಹನಗಿರಿ ಗ್ರಾಮದ ಪಶು ಆಸ್ಪತ್ರೆಯಲ್ಲಿ ಸೋಮವಾರ ಆಯೋಜಿಸಿದ್ದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಲ್ಲಿ 6 ಸುತ್ತಿನ ಕಾಲುಬಾಯಿ ಲಸಿಕಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ಕಾಲುಬಾಯಿ ಲಸಿಕಾ ಕಾರ್ಯಕ್ರಮದಿಂದ ಯಾವುದೇ ಜಾನುವಾರುಗಳು ಹೊರಗುಳಿಯ ದಂತೆ ಶೇಕಡ 100% ರಷ್ಟು ತಾಲೂಕಿನಲ್ಲಿ ಲಸಿಕೆ ಹಾಕಿ ಮೂಕ ಪ್ರಾಣಿಗಳ ಜೀವ ರಕ್ಷಕರಾಗಿ ಕೆಲಸ ಮಾಡುವಂತೆ ಪಶು ಪಾಲನಾ ಇಲಾಖೆ ಅಧಿಕಾರಿಗಳಿಗೆ ಕಿವಿಮಾತು ಹೇಳಿದರು. ಲಸಿಕಾ ಕಾರ್ಯಕ್ರಮ ಯಶಸ್ವಿ ಯಾಗಲು ಎಲ್ಲಾ ರೈತಾಪಿ ಜನರ ಸಹಕಾರ ಅತ್ಯಗತ್ಯವಾಗಿದೆ. ಜಾನುವಾರು ಮಾಲೀಕರು ತಮ್ಮಲ್ಲಿರುವ ತಪ್ಪು ಕಲ್ಪನೆಗಳನ್ನು ಬದಿಗೊತ್ತಿ ತಮ್ಮ ಜಾನುವಾರುಗಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸುವಂತೆ ಕರೆ ನೀಡಿದರು. ಈ 6 ಸುತ್ತಿನ ಕಾಲುಬಾಯಿ ಬೇನೆ ಲಸಿಕಾ ಕಾರ್ಯಕ್ರಮವನ್ನು ನಿಗದಿತ ಸಮಯದೊಳಗೆ ಪೂರ್ಣ ಗೊಳಿಸಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.ಈ ಸಂದರ್ಭದಲ್ಲಿ ಪಶು ಸಂಗೋಪನೆ ಇಲಾಖೆ ನಿರ್ದೇಶಕರು, ಮತ್ತು ಸಿಬ್ಬಂದಿ ವರ್ಗದವರು, ಹಾಗೂ ಬೆಳ್ಳಿಗಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷರು ಸರ್ವ ಸದಸ್ಯರು, ಸುತ್ತ ಮುತ್ತಲಿನ ಗ್ರಾಮಗಳ ರೈತರು, ಪಶುಪ್ರೀಯರು ಉಪಸ್ಥಿತರಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ