ಸೂಳೇಭಾವಿಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮಕ್ಕೆ ಚಾಲನೆ.
ಸೂಳೇಭಾವಿ ಅ.23

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಸೂಳೇಭಾವಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಚ್ಛತಾ ಹಿ ಸೇವಾ ಕಾರ್ಯಕ್ರಮವನ್ನು ಮಾಜಿ ಶಾಸಕರು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರು ಚಾಲನೆ ನೀಡಿದರು. ಗ್ರಾಮದ ಪೆಟ್ರೋಲ್ ಬಂಕ್ ನಿಂದ ಸರ್ಕಾರಿ ಆಸ್ಪತ್ರೆವರೆಗೂ ಸ್ವಚ್ಛತೆಯನ್ನು ಕೈಗೊಳ್ಳಲಾಯಿತು. ಸ್ವಚ್ಛತಾ ಕಾರ್ಯಕ್ಕೆ N.C.C ವಿದ್ಯಾರ್ಥಿಗಳು, ಮಾಜಿ ಸೈನಿಕರು, ಆಶಾ ಕಾರ್ಯಕರ್ತೆಯರು, ಗ್ರಾಮದ ಮುಖಂಡರು ಸಾಥ್ ನೀಡಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ಪೊಲೀಸ್ ಸಬ್ ಇನ್ಸ್‌ಪೆಕ್ಟರ್, ಐಇಸಿ ಸಂಯೋಜಕರು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಗ್ರಾಪಂ ಸರ್ವ ಸದಸ್ಯರು, ಗ್ರಾಪಂ ಸಿಬ್ಬಂದಿ ವರ್ಗ, N.C.C ವಿದ್ಯಾರ್ಥಿಗಳು, ಗ್ರಾಮಸ್ಥರು, ಆಶಾ ಕಾರ್ಯಕರ್ತೆಯರು, ಉಪಸ್ಥಿತರಿದ್ದರು.