ತರೀಕೆರೆಯಲ್ಲಿ ಪಟಾಕಿ ಮಾರಾಟ ದಿಂದ ಹಗಲು ದರೋಡೆ.
ತರೀಕೆರೆ ನ.02

ಗ್ರಾಹಕರಿಗೆ ವಂಚನೆ ಮಾಡುತ್ತಾ ಪಟಾಕಿ ಮಾರಾಟ ಮಾಡುತ್ತಿದ್ದಾರೆ, ಸರ್ಕಾರ ಪರಿಸರ ಮಾಲಿನ್ಯ ತಡೆಯಲು ಹಸಿರು ಪಟಾಕಿಯನ್ನು ಮಾತ್ರ ಮಾರಾಟ ಮಾಡಲು ಕೆಲವು ಮಾರ್ಗ ಸೂಚಿಗಳನ್ನು ಅನುಸರಿಸಲು ತಿಳಿಸಿದ್ದರೂ ಸರ್ಕಾರದ ಮಾರ್ಗಸೂಚಿ ಉಲ್ಲಂಘನೆ ಮಾಡಿ ಬೇಕಾಬಿಟ್ಟಿ ಅತಿ ಹೆಚ್ಚು ದರದಲ್ಲಿ ಪಟಾಕಿ ಮಾರಾಟ ಮಾಡುತ್ತಿದ್ದಾರೆ. ಸಾರ್ವಜನಿಕರು ಪಟಾಕಿ ಮಾರಾಟ ಮಾಡುವವರು ಹಗಲು ದರೋಡೆ ಮಾಡುತ್ತಿದ್ದಾರೆ ಎಂದು ದೂರುತ್ತಿದ್ದು. ಅಧಿಕಾರಿಗಳು ಸೂಕ್ತ ತನಿಖೆ ನಡೆಸಿ ದಾಸ್ತಾನು ಮಾಡಿರುವ ಪಟಾಕಿಗಳನ್ನು ಪರಿಶೀಲನೆ ಮಾಡಿ ಪರಿಸರದ ಮಾಲಿನ್ಯ ಕಾಪಾಡಲು ಮುಂದಾಗ ಬೇಕು ಗ್ರಾಹಕರಿಗೆ ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ದೂರಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎನ್. ವೆಂಕಟೇಶ್.ತರೀಕೆರೆ.ಚಿಕ್ಕಮಗಳೂರು