ಮತದಾನ ಜಾಗೃತಿ ಕಾರ್ಯಕ್ರಮ.
ಮೋಟಗಿ ನ.09

ಸಿಂದಗಿ ತಾಲ್ಲೂಕಿನ ಮೋರಟಗಿಯ ಸದೃಡ ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಯುವ ಮತದಾರರ ಪಾತ್ರ ಮುಖ್ಯವಾದುದು ಎಂದು ಮೋರಟಗಿ ವಲಯದ ಸಿ.ಆರ್. ಪಿ.ರವಿ ಬಿರಾದಾರ ಹೇಳಿದರು. ಸ್ಥಳಿಯ ಸಿದ್ಧರಾಮೇಶ್ವರ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಮತದಾನ ಜಾಗೃತಿ ಕಾರ್ಯಕ್ರಮದಲ್ಲಿ 18 ವರ್ಷದ ಮೇಲ್ಪಟ್ಟ ವಿದ್ಯಾರ್ಥಿಗಳು ಪ್ರತಿಯೊಬ್ಬರು ಮತದಾರ ಪಟ್ಟಿಯಲ್ಲಿ ಹೆಸರನ್ನು ನೊಂದಾಯಿಸಿ ಕೊಳ್ಳಬೇಕು ಮತದಾನ ನಮ್ಮೆಲ್ಲರ ಹಕ್ಕು ಮತ್ತು ಆದ್ಯ ಕರ್ತವ್ಯವಾಗಿದೆ ಎಂದು ತಿಳಿಸಿದರು. ತಾಲೂಕಿನಲ್ಲಿ ಹೆಣ್ಣು ಮಕ್ಕಳು ಕಡಿಮೆ ಪ್ರಮಾಣದಲ್ಲಿ ನೊಂದಣಿ ಮಾಡಿಕೊಂಡಿದ್ದಾರೆ. ಆದ ಕಾರಣ 18 ವರ್ಷದ ಮೇಲ್ಪಟ್ಟವರು ಪ್ರತಿಯೊಬ್ಬರು ಮತದಾರ ಪಟ್ಟಿಯಲ್ಲಿ ಹೆಸರು ನೊಂದಾಯಿಸಿ ಕೊಂಡು ಕಡ್ಡಾಯವಾಗಿ ಮತದಾನ ಮಾಡಬೇಕು ಎಂದು ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಗುರುಗಳಾದ ಬಿ.ಆರ್ ಬಿರಾದಾರ, ಗ್ರಾಮ ಆಡಳಿತ ಅಧಿಕಾರಿಗಳಾದ ಮಾರುತಿ ಸಾಳುಂಕೆ ಹಾಗೂ ಬಿ.ಎಲ್.ಓ ಗಳಾದ ಜಗದೀಶ ಕಲ್ಯಾಣಿ, ಕೆ.ಜಿ.ತೇಲಿ, ಪದ್ಮರಾಜ ಪಾಟೀಲ ಅಶ್ವಿನಿ ಗಣಾಚಾರಿ, ಶೋಭಾ ಪಾತ್ರೋಟ್, ಕೆ.ಎ ಬಾಗವಾನ, ಹಾಗೂ ಕಾಲೇಜಿನ ಉಪನ್ಯಾಸಕರಾದ ಡಿ.ಜಿ ಮಾಕೋಂಡ ರಾಜಶೇಖರ ಕಂಬಾರ, ಮಾಂತೇಶ ಜೋಗೂರ, ಮತ್ತಿತರರು ಇದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ