ಜಾಲವಾದ ಶಾಲೆಯಲ್ಲಿ ಸಂಭ್ರಮ ಶನಿವಾರ – ಆಚರಣೆ.
ಜಾಲವಾದ ನ.17

ಸರ್ಕಾರ ಆದೇಶದಂತೆ ಪ್ರತಿ ತಿಂಗಳು ಮೂರನೇ ಶನಿವಾರ ದಂದು ವಿದ್ಯಾರ್ಥಿಗಳಿಗೆ ಬ್ಯಾಗ್ ರಹಿತ ಕರೆ ಕೊಟ್ಟು ಸಂಭ್ರಮ ಶನಿವಾರ ಆಚರಣೆ. ದೇವರ ಹಿಪ್ಪರಗಿ ತಾಲೂಕಿನ ಜಾಲವಾದ ಗ್ರಾಮದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಪ್ರೌಢ ವಿಭಾಗ ಆಚರಿಸಲಾಯಿತು. ವಿದ್ಯಾರ್ಥಿಗಳಲ್ಲಿ ಪಠ್ಯೇತರ ಚಟುವಟಿಕೆಗಳು ಏರ್ಪಡಿಸುವ ಕುರಿತಂತೆ ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ಈ ಸಂಭ್ರಮದಲ್ಲಿ ವಿದ್ಯಾರ್ಥಿಗಳಲ್ಲಿ ಆರೋಗ್ಯಕರ ಜೀವನ ಎಂಬ ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಯಿತು.

ಹಲವಾರು ವಿದ್ಯಾರ್ಥಿಗಳು ಭಾಷಣ ಸ್ಪರ್ಧೆಯಲ್ಲಿ ಭಾಗವಹಿಸಿ ಆರೋಗ್ಯಕರ ವಿಷಯದ ಕುರಿತು ಮಾತನಾಡಿದರು. ಈ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಕರ್ನಾಟಕ ಪಬ್ಲಿಕ್ ಸ್ಕೂಲ್ ಶಾಲೆಯ ಮುಖ್ಯಸ್ಥರು ಹಾಗೂ ಉಪ ಪ್ರಾಂಶುಪಾಲರಾದ ಅಶೋಕ್ ಹೊಸಗೌಡರ್ ಮಾತನಾಡಿ ವಿದ್ಯಾರ್ಥಿಗಳಲ್ಲಿ ಸದೃಢವಾದ ದೇಹದಲ್ಲಿ ಸದೃಢವಾದ ಮನಸ್ಸು ನಿರ್ಮಿಸುವುದೇ ನಿಜವಾದ ಶಿಕ್ಷಣ ಎಂದು ಹೇಳಿ ವಿದ್ಯಾರ್ಥಿಗಳಿಗೆ ಪೌಷ್ಟಿಕ ಆಹಾರದ ಕುರಿತು ಜಾಗೃತಿ ಮೂಡಿಸಬೇಕು ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಶಾಲೆಯ ಎಲ್ಲಾ ಶಿಕ್ಷಕರು, ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಭೀಮಪ್ಪ.ಹಚ್ಯಾಳ.ದೇವರ ಹಿಪ್ಪರಗಿ