ಪೇಜಾವರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥರು ದೇಶದ ಸಂವಿಧಾನದ ವಿರೋಧಿ ಹೇಳಿಕೆಗೆ – ತೀವ್ರ ಆಘಾತ.

ಬಳ್ಳಾರಿ ಡಿ.01

ಪೇಜಾವರರ ಮಠಾಧೀಶರಾದ ವಿಶ್ವ ಪ್ರಸನ್ನ ತೀರ್ಥರು ದೇಶದ ಸಂವಿಧಾನವನ್ನು ವಿರೋಧಿಸಿ ನೀಡಿರುವ ಹೇಳಿಕೆ ಅತ್ಯಂತ ಆಘಾತಕಾರಿಯಾಗಿದೆ ಪೇಜಾವರ ಮಠಾಧೀಶರು ಈ ಹಿಂದೆಯೂ ಅಧ್ಯಾತ್ಮಿಕ ನಾಯಕರಿಗೆ ತಕ್ಕುದ್ದಲ್ಲದ ಹೇಳಿಕೆಗಳನ್ನು ನೀಡಿದ್ದಾರೆ. ಈ ಬಾರಿ ಅವರು ನೇರವಾಗಿ ದೇಶದ ಸಂವಿಧಾನವನ್ನೇ ವಿರೋಧಿಸಿ ಮಾತನಾಡಿದ್ದಾರೆ. ಇದು ಅತ್ಯಂತ ಕಳ ಕಳವಳಕಾರಿ ಬೆಳವಣಿಗೆಯಾಗಿದೆ ಇದನ್ನು ಎಲ್ಲರೂ ಒಕ್ಕೊರಲಿನಿಂದ ಖಂಡಿಸಬೇಕು ಹಾಗೂ ಸಂವಿಧಾನ ವಿರೋಧಿ ಹೇಳಿಕೆ ನೀಡಿರುವ ಪೇಜಾವರ ಮಠಾಧೀಶರ ವಿರುದ್ಧ ಕೂಡಲೇ ಪೋಲಿಸ್ ಇಲಾಖೆ ಸ್ವಯಂ ಪ್ರೇರಿತವಾಗಿ ಸೂಕ್ತ ಕಾನೂನು ಕ್ರಮ ಕೈಗೊಳ್ಳ ಬೇಕು ಎಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆ ಆಗ್ರಹಿಸುತ್ತದೆ. ನಮ್ಮನ್ನು ಗೌರವಿಸುವ ಸಂವಿಧಾನ ಇರಬೇಕು ಎಂದು ಹೇಳುವ ಮೂಲಕ ಪೇಜಾವರ ಮಠಾಧೀಶರು ಏನು ಹೇಳಲು ಬಯಸುತ್ತಿದ್ದಾರೆ ಎಂದು ಸ್ಪಷ್ಟಪಡಿಸ ಬೇಕಾಗಿದೆ. ಈ ದೇಶಕ್ಕೆ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ವಿಶ್ವವೇ ಗೌರವಿಸುವಂತ ಅತಿ ಶ್ರೇಷ್ಠ ಸಂವಿಧಾನವನ್ನು ನೀಡಿದ್ದಾರೆ. ಈ ದೇಶದ ಎಲ್ಲರೂ ಸಮಾನರು ಎಲ್ಲರಿಗೂ ಸಮಾನ ಗೌರವ ಹಾಗೂ ಆಶಯಗಳು ಸಿಗಬೇಕು ಅಲ್ಲದೆ ಪ್ರತಿಯೊಬ್ಬರಿಗೂ ಅವರವರ ನಂಬಿಕೆಗಳನ್ನು ಅನುಸರಿಸಿ ಕೊಂಡು ಹೋಗಲು ಅವಕಾಶವಿದೆ ಎಂದು ನಮ್ಮ ದೇಶದ ಸಂವಿಧಾನ ಹೇಳುತ್ತದೆ. ಆದರೆ ಪೇಜಾವರ ಮಠಾಧೀಶರಿಗೆ ಎಲ್ಲರಿಗೂ ಗೌರವ ಕೊಡುವ ಸಂವಿಧಾನ ಬೇಡವಾಗಿದೆ ಸಮಾಜದ ಒಂದು ವರ್ಗವನ್ನು ಮಾತ್ರ ಉಳಿದ ಎಲ್ಲಾ ವರ್ಗಗಳು ಗೌರವಿಸುವ ಹಾಗೂ ಉಳಿದೆಲ್ಲಾ ವರ್ಗಗಳು ಗುಲಾಮರಾಗಿಯೇ ಇರುವಂತ ವ್ಯವಸ್ಥೆಯ ಸಂವಿಧಾನ ಬೇಕು ಎಂಬದಾಟಿಯ ತೀರಾ ಅವಮಾನವೀಯ ಬೇಡಿಕೆಯನ್ನು ಪೇಜಾವರ ಮಠಾಧೀಶರು ಇಚ್ಛಿಸಿರುವುದು ಆಘಾತಕಾರಿಯಾಗಿದೆ ವಿರೋಧಿಗಳು ಆರಂಭದಿಂದಲೂ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಕೊಟ್ಟಿರುವ ಈ ದೇಶದ ಸಂವಿಧಾನವನ್ನು ವಿರೋಧಿಸುತ್ತಲೇ ಬಂದಿದ್ದಾರೆ. ಮನುಷ್ಯ ವಿರೋಧಿ ಸ್ತ್ರೀ ವಿರೋಧಿ ಆಶಯಗಳಿಂದಲೇ ತುಂಬಿ ತುಳುಕುತ್ತಿರುವ ಮನಸ್ಕೃತಿಯನ್ನೇ ಈ ದೇಶದ ಸಂವಿಧಾನವಾಗಿ ಮಾಡಬೇಕು ಎಂದು ಬಯಸುತ್ತಾರೆ ಈಗ ಪೇಜಾವರ ಮಠಾಧೀಶರು ಪರೋಕ್ಷವಾಗಿ ಅದನ್ನೇ ಹೇಳಿರುವ ಹಾಗೆ ಕಾಣುತ್ತಿದೆ. ಅಧ್ಯಾತ್ಮಿಕತೆಯ ಮಾರ್ಗದರ್ಶಕರಾಗಿ ಇರಬೇಕಾದ ವ್ಯಕ್ತಿಯೊಬ್ಬರು ಇಂತಹ ಜನ ವಿರೋಧಿ ದೇಶ ವಿರೋಧಿ ಹಾಗೂ ಸಂವಿಧಾನ ವಿರೋಧಿ ಮಾತುಗಳನ್ನು ಆಡಿರುವುದು ಅತ್ಯಂತ ಖಂಡನೀಯವಾಗಿದೆ. ಮುಂದುವರಿದ ರಾಷ್ಟ್ರಗಳು ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ಅವರನ್ನು ನಾ ಮುಂದು ತಾ ಮುಂದು ಅಂತಾ ಮುಕ್ತ ಮನಸ್ಸಿನಿಂದ ವರ್ತಿಸುತ್ತಿರುವುದನ್ನು ಜ್ಞಾನದ ದೀವಿಗೆ, ವಿಶ್ವ ಕಂಡ ಮಹಾನ್ ದಿವ್ಯ ಚೇತನ್, ಜ್ಞಾನದ ಬೆಳಕು, ಅಜ್ಞಾನದ ಪರದಿ ಕಳಚಿದ ಮಹಾನ್ ಮಾನವತಾವಾದಿ ಡಾ, ಬಾಬಾ ಸಾಹೇಬ್ ಅಂಬೇಡ್ಕರ್ ರವರ ಹಗುರವಾಗಿ ಮಾತನಾಡುವುದು ಶೋಭೆಯಲ್ಲ ಇದೇ ಪ್ರವೃತ್ತಿ ಮುಂದುವರಿದರೆ ದೇಶದಲ್ಲಿ ರಕ್ತಪಾತ ವಾದೀತೆಂದು ಕರ್ನಾಟಕ ದಲಿತ ರಕ್ಷಣಾ ವೇದಿಕೆಯ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಶಂಕರ್ ನಂದಿಹಾಳ ಎಚ್ಚರಿಕೆ ನೀಡಿದ್ದಾರೆ.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button