ಕಾರ್ಮಿಕರಿಗೆ ಕಿಟ್ ವಿತರಿಸಿದ – ಶಾಸಕ ಹಂಪಯ್ಯ ನಾಯಕ.
ಮಾನ್ವಿ ಡಿ.01





ಕಟ್ಟಡ ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗಾಗಿ ನಾನಾ ಯೋಜನೆಗಳನ್ನು ಜಾರಿಗೆ ತರಲಾಗಿದೆ. ಹೀಗಾಗಿ ಸರಕಾರದ ಸೌಲಭ್ಯಗಳನ್ನು ಕಾರ್ಮಿಕರು ಸದ್ಬಳಕೆ ಮಾಡಿ ಕೊಳ್ಳಬೇಕೆಂದು ಶಾಸಕ ಹಂಪಯ್ಯ ನಾಯಕ ತಿಳಿಸಿದರು.
ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ಶಾಸಕರ ಭವನದಲ್ಲಿ ಕಾರ್ಮಿಕ ಇಲಾಖೆ ಹಮ್ಮಿಕೊಂಡಿದ್ದ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ಸರಕಾರ ಅಸಂಘಟಿತ ಮತ್ತು ಸಂಘಟಿತ ಕಾರ್ಮಿಕರಿಗಾಗಿ ಸಕಲ ಸೌಲಭ್ಯ ನೀಡುತ್ತ ಬರುತ್ತಿದೆ ಎಂದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಮ್ಮ ಪರವಾಗಿ ಇದ್ದಾರೆ ಎಂದರು.
ಮಾನ್ವಿಯಲ್ಲಿ ಒಟ್ಟು 300 ಕಾರ್ಮಿಕರಿಗಾಗಿ ಕಿಟ್ ಬಂದಿದ್ದು, ಹಂತ ಹಂತವಾಗಿ ವಿತರಿಸುವ ಕೆಲಸ ಮಾಡಲಾಗುತ್ತದೆ. ಸರಕಾರದ ಕಾರ್ಮಿಕ ಅಧಿಕಾರಿಯಾದ ಮಲ್ಲಯ್ಯ ಅವರು ನಿಮ್ಮ ಪರವಾಗಿ ಕೆಲಸ ಮಾಡುತ್ತಾರೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ