ಎರಡು ತಿಂಗಳೊಳಗೆ ಸಕ್ಕರೆ ಕಾರ್ಖಾನೆ ಆರಂಭಕ್ಕೆ – ಭೂಮಿ ಪೂಜೆ ಭರವಸೆ.

ಹೊಸಪೇಟೆ ಮೇ. 22

ವಸತಿ, ವಕ್ಫ್, ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಸಚಿವ ಬಿ.ಜೆಡ್ ಜಮೀರ್ ಅಹ್ಮದ್ ಖಾನ್ ಸಮರ್ಪಣೆ ಸಂಕಲ್ಪ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿ ಸಮರ್ಪಣಾ ಸಂಕಲ್ಪ ಸಮಾವೇಶಕ್ಕೆ ಅಂದಾಜು 1.5 ಲಕ್ಷ ಜನ ಸೇರುವ ನಿರೀಕ್ಷೆ ಇತ್ತು. ಆದರೆ ಇಂದು ಸುಮಾರು 3. ಲಕ್ಷಕ್ಕೂ ಹೆಚ್ಚು ಜನಸಂಖ್ಯೆ ಸೇರಿರುವುದು ನಮ್ಮ ಸರ್ಕಾರದ ಸಾಧನೆ ಆಗಿದೆ. ಆಗಮಿಸಿದ ಎಲ್ಲಾ ಮಹಾ ಜನತೆಗೆ ಕೈಮುಗಿದು ನಮಸ್ಕಾರಗಳನ್ನು ತಿಳಿಸುತ್ತೇನೆ. ವಿಜಯನಗರ ಜಿಲ್ಲೆಗೆ ಅನೇಕ ಅಭಿವೃದ್ಧಿಗಳ ಬೇಡಿಕೆ ಇದೆ. 100 ಕೋಟಿ ವೆಚ್ಚದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ನಿರ್ಮಾಣ ಆಗಬೇಕಿದೆ. 40. ಕೋಟಿ ವೆಚ್ಚದಲ್ಲಿ ಉತ್ತಮ ವೈದ್ಯಕೀಯ ಸೇವೆಗೆ ಹೈಟೆಕ್ ಹಾಸ್ಪಿಟಲ್ ಆರಂಭಿಸಬೇಕಿದೆ. ಈಚೇಗೆ ತುಂಗಭದ್ರಾ ಜಲಾಶಯದ 19. ನೇ ಗೇಟ್ ದುರಸ್ಥಿಯಿಂದಾಗಿ ಬಹುದೊಡ್ಡ ಅನಾಹುತ ಸಂಭವಿಸ ಬೇಕಿತ್ತು. ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ನವರ ನಿರ್ದೇಶನದಂತೆ ಶೀಘ್ರ ಕಾಮಗಾರಿ ಕೈಗೆತ್ತಿ ಕೊಂಡು ತಾತ್ಕಾಲಿಕ ಗೇಟ್ ಅಳವಡಿಸುವಲ್ಲಿ ಯಶಸ್ವಿ ಯಾಗಿದ್ದೇವೆ. ಶಾಶ್ವತ ಗೇಟ್ ನಿರ್ಮಾಣಕ್ಕೆ ರಾಜ್ಯ ಸರ್ಕಾರದಿಂದ ಶೀಘ್ರ ಅನುದಾನ ನೀಡ ಬೇಕಿದೆ. ಈ ಭಾಗದ ರೈತರ ಬಹು ದಿನದ ಬೇಡಿಕೆ ಸಕ್ಕರೆ ಕಾರ್ಖಾನೆ ಆರಂಭಿಸುವುದಾಗಿದೆ. ಈಗಾಗಲೇ ಮುಖ್ಯಮಂತ್ರಿಗಳ ಬಳಿ ಚರ್ಚಿಸಲಾಗಿದೆ. ಇನ್ನೆರಡು ತಿಂಗಳಲ್ಲಿ ಸಕ್ಕರೆ ಕಾರ್ಖಾನೆ ಸೂಕ್ತ ನಿವೇಶನ ಗುರುತಿಸಿ ಭೂಮಿ ಪೂಜೆ ನೆರವೇರಿಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಭರವಸೆ ನೀಡಿದ್ದಾರೆ. ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಜ್ಯ ಸರ್ಕಾರ ಸಹಕರಿಸ ಬೇಕಿದೆ ಎಂದರು.ವೇದಿಕೆಯಲ್ಲಿ ರಾಜ್ಯ ಸಭೆ ಸಂಸದ ರಣದೀಪ್ ಸಿಂಗ್ ಸುರ್ಜೇವಾಲಾ, ಗೃಹ ಸಚಿವ ಡಾ, ಜಿ.ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಕರ್ಯ ಅಭಿವೃದ್ಧಿ ಸಚಿವ ಎಂ.ಬಿ ಪಾಟೀಲ್, ಇಂಧನ ಸಚಿವ ಕೆ.ಜಾರ್ಜ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ, ಹೆಚ್.ಸಿ ಮಹದೇವಪ್ಪ, ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಐಟಿ ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಅರಣ್ಯ, ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಖಂಡ್ರೆ, ಕೃಷಿ ಸಚಿವ ಎನ್.ಚೆಲುವರಾಯಸ್ವಾಮಿ, ಹಜ್ ಹಾಗೂ ಪೌರಾಡಳಿತ ಸಚಿವ ರಹೀಂಖಾನ್, ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಸಚಿವ ಶರಣಪ್ರಕಾಶ್ ರುದ್ರಪ್ಪ ಪಾಟೀಲ್, ಅಬಕಾರಿ ಸಚಿವ ಆರ್.ಬಿ ತಿಮ್ಮಾಪುರ, ಪಶು ಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ.ವಿ ವೆಂಕಟೇಶ್, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ.ಎಸ್ ತಂಗಡಗಿ, ಯೋಜನೆ ಹಾಗೂ ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್, ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಸುರೇಶ್.ಬಿ.ಎಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮಿ.ಆರ್ ಹೆಬ್ಬಾಳ್ಕರ್, ಸಣ್ಣ ನೀರಾವರಿ ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್ ಬೋಸರಾಜು, ವಿಧಾನ ಪರಿಷತ್ ಸದಸ್ಯ ಡಿ.ಟಿ ಶ್ರೀನಿವಾಸ್, ಲೋಕಸಭಾ ಸಂಸದರಾದ ಈ.ತುಕಾರಾಮ್, ವಿಜಯನಗರ ಕ್ಷೇತ್ರ ಶಾಸಕ ಹೆಚ್.ಆರ್ ಗವಿಯಪ್ಪ ಕೂಡ್ಲಿಗಿ ಶಾಸಕ ಡಾ, ಶ್ರೀನಿವಾಸ.ಎನ್.ಟಿ. ಹರಪನಹಳ್ಳಿ ಶಾಸಕಿ ಎಂ.ಪಿ.ಲತಾ ಮಲ್ಲಿಕಾರ್ಜುನ್, ಹೊಸಪೇಟೆ ನಗರ ಸಭೆ ಅಧ್ಯಕ್ಷ ರೂಪೇಶ್ ಕುಮಾರ್.ಎನ್, ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎನ್.ಎಫ್ ಇಮಾಮ್ ನಿಯಾಜಿ, ಕರ್ನಾಟಕ ಹಾಲು ಒಕ್ಕೂಟ ಅಧ್ಯಕ್ಷ ಭೀಮಾನಾಯ್ಕ್, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಹೆಚ್.ಎಂ ರೇವಣ್ಣ ಸೇರಿದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಡಾ, ಶಾಲಿನಿ ರಜನೀಶ್ ಹಾಗೂ ವಸತಿ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ಹಾಗೂ ವಿಜಯನಗರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಕಂದಾಯ ಇಲಾಖೆ ಸರ್ಕಾರ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಟಾರಿಯಾ, ಕಂದಾಯ ಇಲಾಖೆಯ ವಿಪತ್ತು ನಿರ್ವಹಣೆ, ನೋಂದಣಿ ಮತ್ತು ಮುದ್ರಣ ಹಾಗೂ ಸಾಮಾಜಿಕ ಭದ್ರತೆ ವಿಭಾಗದ ಸರ್ಕಾರ ಪ್ರಧಾನ ಕಾರ್ಯದರ್ಶಿ ಮುನೀಶ್ ಮೌದ್ಗಿಲ್, ಕಂದಾಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್, ಭೂ ಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಆಯುಕ್ತ ಜೆ.ಮಂಜುನಾಥ, ಕಲಬುರಗಿ ಪ್ರಾದೇಶಿಕ ಆಯುಕ್ತ ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ ಎಂ.ಎಸ್ ದಿವಾಕರ್, ಜಿ.ಪಂ. ಸಿಇಓ ನೋಂಗ್ಜಾಯ್ ಮೋಹಮ್ಮದ್ ಅಲಿ ಅಕ್ರಮ್ ಷಾ, ಪೊಲೀಸ್ ವರಿಷ್ಠಾಧಿಕಾರಿ ಬಿ.ಎಲ್ ಶ್ರೀಹರಿಬಾಬು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮಾಲತೇಶ್.ಶೆಟ್ಟರ್.ಹೊಸಪೇಟೆ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button