ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ – ತಾಲೂಕ ಅಧ್ಯಕ್ಷರಾಗಿ ಯುಸುಫ್ ನೇಮಕ.
ಖಾನ ಹೊಸಹಳ್ಳಿ ಡಿ.02
ಸಮೀಪದ ಹಿರೇ ಕುಂಬಳಗುಂಟೆ ಗ್ರಾಮದ ಯುಸುಫ್.ಕೆ ಇವರು ಎ.ಮ್ ಪ್ರಕಾಶ್ ಸ್ಥಾಪಿತ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ತಾಲೂಕು ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. ಕೂಡ್ಲಿಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ನಡೆದ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ಪದಾಧಿಕಾರಿಗಳ ಆಯ್ಕೆ ಮತ್ತು ಪದಗ್ರಹಣ ಕಾರ್ಯಕ್ರಮದಲ್ಲಿ ರಾಜ್ಯಾಧ್ಯಕ್ಷರಾದ ಪ್ರಕಾಶ್ ತಿಮ್ಮಲಾಪುರ ಹಾಗೂ ಸಂಘದ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಜಿಲ್ಲಾಧ್ಯಕ್ಷರಾದ ದಾಸರ ವೆಂಕಟೇಶ್ ರವರ ಅಧ್ಯಕ್ಷತೆಯಲ್ಲಿ ಹಿರೇ ಕುಂಬಳಗುಂಟೆ ಗ್ರಾಮದ ಯುಸುಫ್. ಅವರಿಗೆ ಅಖಿಲ ಕರ್ನಾಟಕ ರಾಜ್ಯ ಕಿಸಾನ್ ಜಾಗೃತಿ ಸಂಘದ ತಾಲೂಕ ಅಧ್ಯಕ್ಷರಾಗಿ ನೇಮಕ ಮಾಡಿ ಆದೇಶ ಪ್ರಮಾಣ ಪತ್ರವನ್ನು ನೀಡಿದ್ದಾರೆ.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ