ಸಾಹಿತ್ಯ ಸಂಸ್ಕೃತಿ ವೇದಿಕೆ ಮತ್ತು ಸಂಪದ ಸಾಲು ಪತ್ರಿಕೆ ವತಿಯಿಂದ – ಶತ ಕವಿ ಕಾವ್ಯವಾಚನ ಕಾರ್ಯಕ್ರಮ.
ಬೆಳಗಾವಿ ಜ.17

ದಿನಾಂಕ 19/1/2025 ರ ಭಾನುವಾರ ದಂದು ಬೆಂಗಳೂರಿನ ಅಗರದಲ್ಲಿ ಶತ ಕವಿ ಕಾವ್ಯವಾಚನ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ 100 ಕ್ಕೂ ಹೆಚ್ಚು ಕವಿಗಳು ಕಾರ್ಯಕ್ರಮದಲ್ಲಿ ನೋಂದಾಯಿಸಿದ್ದು ಇವರೆಲ್ಲರೂ ಕವನ ವಾಚನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾಹಿತ್ಯ ಸಂಸ್ಕೃತಿ ವೇದಿಕೆಯ ದಶಮಾನೋತ್ಸವದ ಅಂಗವಾಗಿ ಪುಸ್ತಕ ಬಿಡುಗಡೆ ಕಾರ್ಯಕ್ರಮ, ಹಲವು ಸಾಹಿತ್ಯ ಸಾಂಸ್ಕೃತಿಕ ಚಟುವಟಿಕೆಗಳು ಜರುಗಲಿದೆ.ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಲೋಕಸಭೆಯ ಸದಸ್ಯರಾದ ಶ್ರೀ ಡಾ. ಮಂಜುನಾಥ್, ತೇಜಸ್ವಿ ಸೂರ್ಯ, ಶೋಭಾ ಕರಂದ್ಲಾಜೆ ಹಾಗು ಶಾಸಕರಾದ ಶ್ರೀ ಸೋಮಶೇಖರ, ಮಲಯಶಾಂತಮುನಿ ದೇಶಿಕೇಂದ್ರ ಶಿವಾಚಾರ್ಯ ಸ್ವಾಮಿಗಳು, ಶಿವಗಂಗಾ ಕ್ಷೇತ್ರ, ಕರಿವೃಷಭೇಂದ್ರ ಮಹಾಸ್ವಾಮಿಗಳು ನೊಣವಿನಕೆರೆ, ಸಂಪದ ಸಾಲು ಪತ್ರಿಕೆಯ ಸಂಪಾದಕರಾದ ಪತ್ರಕರ್ತ ವೆಂಕಟೇಶ ಸಂಪ, ಮುಂತಾದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಸಾಹಿತ್ಯ ಸಂಸ್ಕೃತಿ ವೇದಿಕೆಯ ಅಧ್ಯಕ್ಷರಾದ ಶ್ರೀ ಸದಾಶಿವಯ್ಯ ಜರಗನಹಳ್ಳಿ ಅವರು ತಿಳಿಸಿದ್ದಾರೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಂ.ಎಂ ಶರ್ಮಾ ಬೆಳಗಾವಿ