ಖಾನಾ ಹೊಸಹಳ್ಳಿ ಗ್ರಾ.ಪಂ ಉಪಾಧ್ಯಕ್ಷೆ ವಿರುದ್ಧ – ಅವಿಶ್ವಾಸ ಮಂಡನೆ.
ಹೊಸಹಳ್ಳಿ ಡಿ.07

ಕೂಡ್ಲಿಗಿ ತಾಲೂಕಿನ ಖಾನಾ ಹೊಸಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಉಪಾಧ್ಯಕ್ಷೆ ಎಂ.ನೇತ್ರಾವತಿ ಅವರ ವಿರುದ್ಧ ಸದಸ್ಯರು ಅವಿಶ್ವಾಸ ನಿರ್ಣಯ ಮಂಡಿಸಿದರು. ಖಾನಾ ಹೊಸಹಳ್ಳಿ ಪಂಚಾಯಿತಿಯಲ್ಲಿ 30 ಸದಸ್ಯರಿದ್ದು, 25 ಜನ ಸದಸ್ಯರು ಹಾಜರಿದ್ದು. ಆ ಪೈಕಿ 23 ಸದಸ್ಯರು ಉಪಾಧ್ಯಕ್ಷರ ವಿರುದ್ಧ ಅವಿಶ್ವಾಸ ನಿರ್ಣಯ ಮಂಡನೆಗೆ ಒಪ್ಪಿಗೆ ಸೂಚಿಸಿದರು. ಹೊಸಪೇಟೆ ಸಹಾಯಕ ಆಯುಕ್ತರು ಪಿ.ವಿವೇಕಾನಂದ ಅವರು ತಿಳಿಸಿದ್ದಾರೆ. ಗ್ರಾಮ ಪಂಚಾಯಿತಿ ಅಧ್ಯಕ್ಷ ಎ.ಸಿ ಚೇತನ್ ಅವರ ಅವಿಶ್ವಾಸ ಗೊತ್ತುವಳಿ ಸಂಬಂಧ ಧಾರವಾಡದ ಹೈಕೋರ್ಟ್ ಮಧ್ಯಂತರ ಆದೇಶದ ಅನುಸಾರ ಗ್ರಾಮ ಪಂಚಾಯಿತಿ ಅಧ್ಯಕ್ಷರ ಸ್ಥಾನಕ್ಕೆ ಅವಿಶ್ವಾಸ ಮಂಡನೆಯನ್ನು ಮುಂದೂಡಲಾಯಿತು. ನೂತನ ಅಧ್ಯಕ್ಷರ ಆಯ್ಕೆಗೆ ದಿನ ನಿಗದಿ ಪಡಿಸಲಾಗುವುದು ಎಂದರು. ಇದೇ ಸಂದರ್ಭದಲ್ಲಿ ಹೊಸಪೇಟೆ ಸಹಾಯಕ ಆಯುಕ್ತರು ಕಚೇರಿಯ ಸಿಬ್ಬಂದಿ ಪ್ರದೀಪ್, ಹೊಸಹಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವಿನಯ್ ಕುಮಾರ್ ಸೇರಿದಂತೆ ಗ್ರಾ.ಪಂ. ಸದಸ್ಯರು ಭಾಗವಹಿಸಿದ್ದರು.
ಹೋಬಳಿ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ ಹೊಸಹಳ್ಳಿ