ರೋಣ 200, ಕೋಟಿ ಅಭಿವೃದ್ಧಿಗೆ ಚಾಲನೆ ನೀಡಿದ – ಸಿ.ಎಂ ಸಿದ್ದರಾಮಯ್ಯ.

ರೋಣ ಡಿ.16

ನಾವು ಬಡವರ ಅನುಕೂಲಕ್ಕಾಗಿ, ಬಡವರಿಗೆ ಶಕ್ತಿ ತುಂಬಲು ಐದು ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದವು. ಆಗ ವಿರೋಧ ಪಕ್ಷದವರು ಈ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸಾಧ್ಯವಿಲ್ಲ ಎಂದು ಟೀಕೆ ಮಾಡಿದ್ದರು. ಈಗ ಈ 5 ಗ್ಯಾರಂಟಿಗಳಿಂದ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ಹೇಳುತ್ತಿದ್ದಾರೆ. ಅವರು ಹೇಳಿದಂತೆ ಒಂದು ವೇಳೆ ಅಭಿವೃದ್ಧಿ ಕೆಲಸಕ್ಕೆ ಹಣವಿಲ್ಲದಿದ್ದರೆ ರೋಣ ಮತಕ್ಷೇತ್ರ ಒಂದಕ್ಕೆ ಎರಡು ನೂರು ಕೋಟಿ ರೂಪಾಯಿ ಕೆಲಸ ಮಾಡಲು ಹೇಗೆ ಸಾಧ್ಯವಾಗುತ್ತಿತ್ತು ಎಂದು ಸಿಎಂ ಸಿದ್ದರಾಮಯ್ಯ ವಿರೋಧ ಪಕ್ಷದವರನ್ನು ಪ್ರಶ್ನಿಸಿದರು.

ಅವರು ರೋಣ ಪಟ್ಟಣದ ತಾಲೂಕ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ ಮತ್ತು ತಾಲೂಕು ಆಡಳಿತದ ವತಿಯಿಂದ ಆಯೋಜಿಸಿದ್ದ ರೋಣ ಮತಕ್ಷೇತ್ರದ ಅಭಿವೃದ್ಧಿಯ ಕೆಲಸಗಳಿಗೆ ಎರಡು ನೂರು ಕೋಟಿ ರೂಪಾಯಿ ಅನುದಾನದ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ ಕಾರ್ಯಕ್ರಮದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ಐದು ಗ್ಯಾರಂಟಿ ಘೋಷಣೆ ಮಾಡಿದ ಮೇಲೆ ಸರ್ಕಾರದ ಬಳಿ ಅಭಿವೃದ್ಧಿ ಕಾರ್ಯಗಳಿಗೆ ಹಣವಿಲ್ಲ ಎಂದು ವಿರೋಧ ಪಕ್ಷದವರು ಸರ್ಕಾರದ ವಿರುದ್ಧ ಟೀಕೆ ಮಾಡುತ್ತಾರೆ. ಬಡವರಿಗೆ ಶಕ್ತಿ ತುಂಬುವಂತ ಕೆಲಸವನ್ನು ಮಾಡುತ್ತಿರುವ ನಮ್ಮ ಸರ್ಕಾರದ ಯೋಜನೆಗಳ ಬಗ್ಗೆ ಅವರಿಗೆ ಅಭಿಪ್ರಾಯ ಸರಿ ಇಲ್ಲ, ಸಮಾಜದಲ್ಲಿ ಸಮಾನತೆ ಸಮ ಸಮಾಜ ಇರಬಾರದು ಎಂಬ ಉದ್ದೇಶ ಬಿಜೆಪಿ ಮತ್ತು ಜೆಡಿಎಸ್‌ದ್ದಾಗಿದೆ, ಬಡವರಿಗೆ ಶಕ್ತಿ ತುಂಬುವಂತ ಕೆಲಸವನ್ನು ಸರ್ಕಾರ ಗ್ಯಾರಂಟಿಗಳ ಮೂಲಕ ಮಾಡುತ್ತಿದೆ. ಅದನ್ನು ವಿರೋಧ ಪಕ್ಷದವರು ವಿರೋಧ ಮಾಡುತ್ತಿದ್ದಾರೆ ಎಂದು ಹೇಳಿದರು. ನಮ್ಮ ಬಳಿ ಅಭಿವೃದ್ಧಿಗಾಗಿ ಹಣ ಇಲ್ಲದಿದ್ದರೆ ರೋಣ ಮತಕ್ಷೇತ್ರಕ್ಕೆ ಎರಡು ನೂರು ಕೋಟಿ ರೂಪಾಯಿ ಅನುದಾನದಲ್ಲಿ ಅಭಿವೃದ್ಧಿ ಕಾರ್ಯ ಮಾಡಲು ಸಾಧ್ಯವಾಗುತ್ತಿತ್ತ. ಈ ಬಾರಿ 3,71,000 ಕೋಟಿಯ ಬಜೆಟ್ ಅನ್ನು ಮಂಡಿಸಲಾಗಿದೆ, ಅದರಲ್ಲಿ 1,20,000 ಕೋಟಿ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದೇವೆ. 57 ಸಾವಿರ ಕೋಟಿ ರೂಪಾಯಿಯನ್ನು ಈ ವರ್ಷದ ಗ್ಯಾರಂಟಿ ಯೋಜನೆಗಳಿಗಾಗಿ ಮೀಸಲಿಟ್ಟಿದೆ. ನಾವು ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದ ಸಂದರ್ಭದಲ್ಲಿ ಪ್ರಧಾನ ಮಂತ್ರಿ ಮೋದಿಯಿಂದ ಹಿಡಿದು ಎಲ್ಲರೂಸಿರಿ ಧಾನ್ಯಗಳಲ್ಲಿ ಹೆಚ್ಚಿನ ನಾರಿನ ಅಂಶ ಇರುವ ಕಾರಣ ಜಗತ್ತಿನಲ್ಲಿ ಸಿರಿಧಾನ್ಯವನ್ನು ಬೆಳೆಯಲು ಹೆಚ್ಚು ಹೆಚ್ಚು ಪ್ರಯತ್ನ ಪಡುತ್ತಿದ್ದಾರೆ. ಭಾರತ ದೇಶದಲ್ಲಿಯೂ ಸಹ ಬೆಳೆಯುತ್ತಿದ್ದಾರೆ ಕರ್ನಾಟಕ ರಾಜ್ಯದಲ್ಲೂ ಸಹ ನಾವು ಸಿರಿಧಾನ್ಯ ಬೆಳೆಯಲು ಹೆಚ್ಚು ಪ್ರೋತ್ಸಾಹ ಕೊಡುತ್ತಿದ್ದೇವೆ. ಇದರಿಂದ ರೋಗ ನಿರೋಧಕ ಶಕ್ತಿ ಹೆಚ್ಚು ಆಗುತ್ತದೆ ಎಂದರು.

ಈ ಯೋಜನೆಗಳನ್ನು ಜಾರಿ ಮಾಡಲು ಸಾಧ್ಯವಿಲ್ಲ ಎಂದು ಟೀಕಿಸಿದರು. ಕೊಟ್ಟ ಮಾತಿನಂತೆ ನಡೆದು ಕೊಂಡಿದ್ದು ಕಾಂಗ್ರೆಸ್ ಸರ್ಕಾರ, ಬಿಜೆಪಿಯವರು 2018 ರಲ್ಲಿ 600 ಭರವಸೆಗಳನ್ನು ಕೊಟ್ಟಿದ್ದರು ಅದರಲ್ಲಿ ಶೇಕಡ ಹತ್ತರಷ್ಟು ಸಹ ಭರವಸೆಗಳನ್ನು ಈಡೇರಿಸಲು ಆಗಲಿಲ್ಲ. 2013 ರಿಂದ 18 ರಲ್ಲಿ ನಾವು ಕೊಟ್ಟ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿದ್ದೆವು. ಅನ್ನಭಾಗ್ಯ ಕ್ಷೀರ ಭಾಗ್ಯ ಕ್ಷೀರಧಾರೆ. ಕೃಷಿಭಾಗ್ಯ ಶಾದಿಭಾಗ್ಯ, ಪಶುಭಾಗ್ಯ, ಮನಸ್ವಿನಿ.ಮೈತ್ರಿ, ಇಂದಿರಾ ಕ್ಯಾಂಟೀನ,, ಸಾಲ ಮನ್ನಾ, ಬಿಜೆಪಿ ಸಾಲ ಮನ್ನಾ ಮಾಡುತ್ತೇವೆ ಎಂದು ಹೇಳಿದ್ದರು ಸಾಲಮನ್ನಾ ಮಾಡಿ ಎಂದು ನಮ್ಮ ಪಕ್ಷದವರು ಕೇಳಿದಾಗ ಆಗ ಯಡಿಯೂರಪ್ಪನವರು ನಮ್ಮ ಬಳಿ ನೋಟ್ ಪ್ರಿಂಟ್ ಮಾಡುವ ಮಷಿನ್ ಇಲ್ಲ ಎಂದು ಹೇಳಿದ್ದರು. ಅವರತ್ರ ಕೇವಲ ನೋಟ್ ಎನಿಸುವ ಮಿಷನ್ ಇದೆ ಹೊರತು ನೋಟ್ ಪ್ರಿಂಟ್ ಮಾಡುವ ಮಿಷನ್ ಇಲ್ಲ, ಗ್ಯಾರಂಟಿ ಯೋಜನೆಗಳ ಜೊತೆ ನಾವು ರಾಜ್ಯದ ಎಲ್ಲಾ ಅಭಿವೃದ್ಧಿ ಕಾರ್ಯಗಳಿಗೆ ಹಣವನ್ನು ಖರ್ಚು ಮಾಡುತ್ತಿದ್ದೇವೆ, ಬಿಜೆಪಿಯವರು ಧರ್ಮದ ಆಧಾರದ ಮೇಲೆ ಮೇಲೆ ಮತ್ತು ಜಾತಿ ಆಧಾರದ ಮೇಲೆ ರಾಜಕಾರಣ ಮಾಡಿ ಇಡೀ ಸಮಾಜವನ್ನು ಹೊಡಿ ತಕ್ಕಂತಹ ಕೆಲಸ ಮಾಡಿದ್ದೀರಿ. ಆದರೆ ನಾವು ಸರ್ವ ಜನಾಂಗದ ಶಾಂತಿಯ ತೋಟವನ್ನಾಗಿ ಮಾಡಬೇಕು, ಬಡವ ಬಲ್ಲಿದರ ಅಂತರ ಕಡಿಮೆ ಮಾಡಬೇಕು ಎನ್ನುವುದು ನಮ್ಮ ಉದ್ದೇಶ, ಇದಕ್ಕಾಗಿ ಕಾಂಗ್ರೆಸ್ ಸರ್ಕಾರ ತನ್ನ ಎಲ್ಲಾ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದೆ. ಜಿ.ಎಸ್ ಪಾಟೀಲರು ರೋಣ ಮತಕ್ಷೇತ್ರದ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದಾರೆ ಇದಕ್ಕೆ ನಮ್ಮ ಸರ್ಕಾರ ಎಲ್ಲ ರೀತಿಯ ಬೆಂಬಲವನ್ನು ನೀಡುತ್ತದೆ ಎಂದರು.

ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ, ಸಚಿವ ಹೆಚ್ ಕೆ ಪಾಟೀಲ, ಸಲೀಂ ಅಹಮದ್, ಮಾಜಿ ಶಾಸಕರಾದ ಬಿ.ಆರ್ ಯಾವಗಲ್ಲ, ರಾಮಕೃಷ್ಣ ದೊಡ್ಡಮನಿ, ರಾಮಣ್ಣ ಲಮಾಣಿ, ಮಾಜಿ ಸಂಸದ ಆರ್.ಎಸ್ ಪಾಟೀಲ್, ಮಾಜಿ ಮುಖ್ಯ ಕಾರ್ಯದರ್ಶಿ ಬಿ.ಎಸ್ ಪಾಟೀಲ್, ಪುರಸಭೆ ಅಧ್ಯಕ್ಷೆ ಗೀತಾ ಮಾಡಲಗೇರಿ, ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ, ಜಿ.ಪಂ ಸಿಇಒ ಎಸ್ ಭರತ್, ಪುರಸಭೆ ಸದಸ್ಯ ಮಿಥುನ ಪಾಟೀಲ, ಐ.ಎಸ್ ಪಾಟೀಲ, ಶರಣಗೌಡ ಪಾಟೀಲ, ಪ್ರಭು ಮೇಟಿ, ಮಂಜುಳಾ ಹುಲ್ಲಣ್ಣನವರ, ನಾಜಬೇಗಂ ಎಲಿಗಾರ, ಪರಶುರಾಮ ಅಳಗವಾಡಿ, ಎ.ಆರ್ ಗುಡಿಸಾಗರ, ಟಿ ಈಶ್ವರ, ವೀರಣ್ಣ ಶೆಟ್ಟರ, ಆನಂದಯ್ಯ ಗಡ್ಡದೇವರಮಠ, ವಿ.ಬಿ ಸೋಮನಕಟ್ಟೆ ಮಠ, ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಎಸ್ ನೇಮಗೌಡ, ತಹಸೀಲ್ದಾರ್ ನಾಗರಾಜ ಕೆ. ಸೇರಿದಂತೆ ಉಪಸ್ಥಿತರಿದ್ದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button