ಶ್ರೀ ವೀರಭದ್ರೇಶ್ವರ ಸ್ವಾಮಿ ಕಾರ್ತಿಕೋತ್ಸವ – ಸೊನ್ನಮರಡಿಯಲ್ಲಿ ಜರುಗಿತು.
ಸೊನ್ನಮರಡಿ ಡಿ.18

ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಹೊಸಹಳ್ಳಿ ಹೋಬಳಿಯ ಹುಲಿಕೆರೆ ಹೊರ ವಲಯದಲ್ಲಿರುವ ಶ್ರೀ ವೀರಭದ್ರೇಶ್ವರ ಸ್ವಾಮಿಯ ಕಾರ್ತಿಕೋತ್ಸವ ಮಂಗಳವಾರ ಸಂಜೆ ಜರಗಿತು. ಶ್ರೀ ವೀರಭದ್ರೇಶ್ವರ ಸ್ವಾಮಿಯ ಭಕ್ತರು ದೇವಸ್ಥಾನದ ಆವರಣದಲ್ಲಿ ದೀಪಗಳಿಗೆ ಎಣ್ಣೆ. ಬತ್ತಿ. ಹಾಕಿ ದೀಪ ಹಚ್ಚಿ ಭಕ್ತಿ ಸಮರ್ಪಿಸಿದರು.

ಶ್ರೀ ವೀರಭದ್ರೇಶ್ವರ ಸ್ವಾಮಿಗೆ ವಿಶೇಷ ಅಲಂಕಾರ ಗೋಪುರಗಳಿಗೆ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿದ್ದಾರೆ. ದೇವಸ್ಥಾನದ ಆವರಣದಲ್ಲಿ ಎಣ್ಣೆ ಬತ್ತಿ ದೀಪಗಳು ಕಂಗೊಳಿಸುತ್ತಿದ್ದವು. ಕಾರ್ತಿಕೋತ್ಸವದಲ್ಲಿ ಗ್ರಾಮಸ್ಥರು ಸೇರಿ ಸುತ್ತಮುತ್ತಲ ಗ್ರಾಮಸ್ಥರು ಸಹ ಪಾಲ್ಗೊಂಡಿದ್ದರು ದೀಪಹಚ್ಚಿ ಭಕ್ತಿ ಸಮರ್ಪಿಸಿದರು. ಮತ್ತು ಬಯಲು ತುಂಬರಗುದ್ದಿ ಯುವಕರಿಂದ ಭಜನೆ ಕಾರ್ಯಕ್ರಮ ಜರಗಿತ್ತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಕೆ.ಎಸ್.ವೀರೇಶ್.ಕೆ.ಹೊಸಹಳ್ಳಿ