ಹೊರಗುತ್ತಿಗೆ ನೌಕರರ ಹಾಗೂ ಅತಿಥಿ ಶಿಕ್ಷಕರ ಪ್ರತಿಭಟನೆ ಜಿಲ್ಲಾಧಿಕಾರಿ ಮುಖಾಂತರ – ಮುಖ್ಯಮಂತ್ರಿಗೆ ಮನವಿ.
ಚಿಕ್ಕಮಗಳೂರು ಜ.21

ಕರ್ನಾಟಕ ರಾಜ್ಯ ಸರ್ಕಾರಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಸಂಘ ಬೆಂಗಳೂರು ಜಿಲ್ಲಾ ಸಮಿತಿ ಚಿಕ್ಕಮಗಳೂರು ವತಿಯಿಂದ ನಗರದ ಆಜಾದ್ ಪಾರ್ಕಿನಲ್ಲಿ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರು ಪ್ರತಿಭಟನೆ ಮಾಡಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಜಂಟಿ ಕಾರ್ಯದರ್ಶಿ ಹಾಗೂ ಜಿಲ್ಲಾದ್ಯಕ್ಷ ಶಿವಮೂರ್ತಿ.S ಮಾತನಾಡಿ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಕೂಡಲೇ ಈಡೇರಿಸಬೇಕು ಕನಿಷ್ಠ ವೇತನ 31000 ನೀಡುವುದು, ನೇರವಾಗಿ ಇಲಾಖೆಯಿಂದ ವೇತನ, ಬೀದರ್ ಜಿಲ್ಲಾ ಮಾದರಿಯಲ್ಲಿ ಜಿಲ್ಲಾ ಕಾರ್ಮಿಕ ಸೇವೆಗಳ ವಿವಿಧೋದ್ಧೇಶ ಸಹಕಾರ ಸಂಘವನ್ನು ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಸ್ಥಾಪಿಸುವುದು, ಸಿಬ್ಬಂದಿಗಳ ಸಂಖ್ಯೆ ಕಡಿತ ಆದೇಶವನ್ನು ವಾಪಸ್ ಪಡೆಯುವುದು, ಹತ್ತು ವರ್ಷ ಸೇವೆ ಸಲ್ಲಿಸಿರುವ ಹೊರಗುತ್ತಿಗೆ ನೌಕರರು ಹಾಗೂ ಅತಿಥಿ ಶಿಕ್ಷಕರನ್ನು ದಿನಗೂಲಿ ನೌಕರರ ಕ್ಷೇಮಾಭಿವೃದ್ಧಿ ಅಧಿನಿಯಮ ದಡಿಯಲ್ಲಿ ತರುವುದು, ಮುಖ್ಯಮಂತ್ರಿಯವರ ಅಧ್ಯಕ್ಷತೆಯಲ್ಲಿ ಸಂಘದ ಮುಖಂಡರು, ಹೊರಗುತ್ತಿಗೆ ನೌಕರರ ಸಭೆ ಮಾಡಿ ಬೇಡಿಕೆಗಳನ್ನು ಈಡೇರಿಸುವುದು, ಸಮಾನ ಕೆಲಸಕ್ಕೆ ಸಮಾನ ವೇತನ, ಸೇವಾ ಭದ್ರತೆ ನೀಡುವುದು, ಅಧಿಕಾರಿಗಳ ಕಿರುಕುಳ ತಪ್ಪಿಸುವುದು, ಭಾರತ ರತ್ನ ಡಾ, ಬಿ.ಆರ್. ಅಂಬೇಡ್ಕರ್ ಶಾಲೆಗಳ ಅತಿಥಿ ಶಿಕ್ಷಕರಿಗೆ ಕೇವಲ 8500. ರೂ ವೇತನ ನೀಡುತ್ತಿದ್ದು ಇತರೆ ಶಾಲೆಗಳ ಶಿಕ್ಷಕರಿಗೆ ನೀಡುತ್ತಿರುವಂತೆ 16500 ಇವರಿಗೆ ನೀಡಬೇಕು ಹಾಗೂ ಇನ್ನಿತರ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಮಾನ್ಯ ಜಿಲ್ಲಾಧಿಕಾರಿಯವರ ಅಧ್ಯಕ್ಷತೆಯಲ್ಲಿ ಎಲ್ಲಾ ಇಲಾಖೆಯ ಜಿಲ್ಲಾ ಅಧಿಕಾರಿಗಳು, ಕಾರ್ಮಿಕ ಇಲಾಖೆ, ಇಎಸ್ಐ ಮತ್ತು ಇಪಿಎಫ್ ಅಧಿಕಾರಿಗಳು, ಏಜೆನ್ಸಿಯವರೊಂದಿಗೆ ನಮ್ಮ ಸಂಘದ ಮುಖಂಡರು ಹಾಗೂ ಹೊರಗುತ್ತಿಗೆ ನೌಕರರೊಂದಿಗೆ ಸಭೆ ಮಾಡಿ ಸಮಸ್ಯೆಗಳನ್ನು ಬಗೆಹರಿಸಲು ದಿನಾಂಕ ನಿಗಧಿ ಮಾಡುವಂತೆ ಒತ್ತಾಯಿಸಿ ಪ್ರತಿಭಟನೆ ಮಾಡಲಾಗುತ್ತಿದೆ ಎಂದರು.
ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿ ಮೀನಾ ನಾಗರಾಜ್ (I. A.S) ರವರು ನಿಮ್ಮ ನ್ಯಾಯಯುತ ಬೇಡಿಕೆಗಳ ಮನವಿಯನ್ನು ಸರ್ಕಾರಕ್ಕೆ ಕಳಿಸಿ ಕೊಡಲಾಗುವುದು ಹಾಗೂ ಜನವರಿ 26 ರ ನಂತರ ನಿಮ್ಮಗಳ ಸಭೆ ಮಾಡಲು ದಿನಾಂಕ ನಿಗದಿ ಪಡಿಸಲಾಗುವುದು ಎಂದರು. ಮುಖಂಡರಾದ ರಂಗಸ್ವಾಮಿ, ಲೋಕೇಶ್, ಕುಮಾರಸ್ವಾಮಿ, ರೇಖಾ, ವಿಶಾಲ ಬಿ ಎಂ, ಪವಿತ್ರ,ರಮೇಶ್, ಜಿಲ್ಲೆಯ ಎಲ್ಲಾ ತಾಲೂಕುಗಳ ಹಾಸ್ಟೇಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರು ಹಾಗೂ ಭಾರತರತ್ನ ಡಾ.ಬಿ ಆರ್.ಅಂಬೇಡ್ಕರ್ ವಸತಿ ಶಾಲೆಗಳ ಅತಿಥಿ/ಹೊರಗುತ್ತಿಗೆ ಶಿಕ್ಷಕರು ಭಾಗವಹಿಸಿದ್ದರು.