ವಿವಿಧ ಇಲಾಖೆಗಳ 4 ಸಾವಿರ ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕು ಸ್ಥಾಪನೆ ಮಾಡಿದ – ಸಿ.ಎಂ ಸಿದ್ದರಾಮಯ್ಯ ನೇರವೇರಿಸಿದರು.

ವಿಜಯಪುರ ಜು.14

ವಿಜಯಪುರ ಹಾಗೂ ಈ ಭಾಗದ 93 ಸಾವಿರ ಹೆಕ್ಟೇರ್ ಕೃಷಿ ಭೂಮಿಗೆ ನೀರಾವರಿ ಒದಗಿಸಲು ರೂ.3200 ಕೋಟಿ ಮೊತ್ತದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಜಲ ಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಇಂಡಿ ತಾಲೂಕಿನಲ್ಲಿ ಸೋಮವಾರ ನಡೆದ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಹಾಗೂ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು.

ನಿಮ್ಮ ಶಾಸಕರು ನನಗೆ ಏನೂ ಬೇಡ, ನಮ್ಮ ಭಾಗದ ರೈತರಿಗೆ ನೆರವಾಗಬೇಕು ಎಂದು ಮನವಿ ಮಾಡಿದ್ದಾರೆ. ಹೀಗಾಗಿ ಹೊರ್ತಿ ರೇವಣ್ಣ ಸಿದ್ದೇಶ್ವರ ಏತ ನೀರಾವರಿ, ತಿಡಗುಂದಿ ಶಾಖಾ ಕಾಲುವೆ ಹಾಗೂ ಇಂಡಿ ತಾಲೂಕಿನ 90 ಕೆರೆಗಳನ್ನು ಭರ್ತಿಗೊಳಿಸುವ ಯೋಜನೆಗಳಿಗೆ ಇಂದು ಶಂಕು ಸ್ಥಾಪನೆ ಮಾಡಲಾಗಿದೆ. ವಿವಿಧ ಇಲಾಖೆಗಳಿಂದ ಒಟ್ಟಾರೆ 4,555 ಕೋಟಿ ಮೊತ್ತದ ಕಾಮಗಾರಿಗಳಿಗೆ ಇಂದು ಭೂಮಿ ಪೂಜೆ ಹಮ್ಮಿಕೊಂಡಿದ್ದೇವೆ ಎಂದರು.

ಸರ್ಕಾರದಲ್ಲಿ ಹಣವಿಲ್ಲ, ಎಲ್ಲಾ ಹಣ ಗ್ಯಾರಂಟಿ ಯೋಜನೆಗಳಿಗೆ ಹೋಗಿವೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡುತ್ತಿವೆ. ಇಂದು ಸಾರಿಗೆ ಇಲಾಖೆ ಮೂಲಕ ಜಾರಿಗೆ ತಂದ ಶಕ್ತಿ ಯೋಜನೆಯಲ್ಲಿ ಇಂದಿನ ವರೆಗೆ ಒಟ್ಟು 500 ಕೋಟಿ ಟ್ರಿಪ್ ಗಳನ್ನು ಪೂರೈಸಿದೆ. ಇಂದು ಮುಖ್ಯ ಮಂತ್ರಿಗಳು ಪ್ರಯಾಣಿಕರಿಗೆ 500 ನೇ. ಟಿಕೆಟ್ ನೀಡಿ ಈ ಕ್ಷಣವನ್ನು ಸಂಭ್ರಮಿಸಲಾಗಿದೆ. ಈ ಯೋಜನೆಗೆ ಇದುವರೆಗೂ 12,669 ಕೋಟಿ ವೆಚ್ಚ ಮಾಡಲಾಗಿದೆ. ಇದು ನಮ್ಮ ಗ್ಯಾರಂಟಿ ಯೋಜನೆ. ಆದರೆ ಕ್ಷೇತ್ರದಲ್ಲಿ ಇಂದು 4,555 ಕೋಟಿ ಮೊತ್ತದ ಯೋಜನೆಗೆ ಶಂಕು ಸ್ಥಾಪನೆ ಮಾಡಿರುವುದು ಅಭಿವೃದ್ಧಿಯ ಯೋಜನೆ ಎಂದು ತಿಳಿಸಿದರು.

ಬಿಜೆಪಿ ಟೀಕೆಗಳು ಸಾಯುತ್ತವೆ, ನಮ್ಮ ಯೋಜನೆಗಳು ಶಾಶ್ವತವಾಗಿ ಉಳಿಯುತ್ತವೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸ, ನಂಬಿಕೆ ಬಹಳ ಮುಖ್ಯವಾದುದು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಾರಿಗೆ ಇಲಾಖೆಯಲ್ಲಿ 5,700 ಹುದ್ದೆ, ಪರಿಶಿಷ್ಟರಿಗೆ ವಿಶೇಷ ಯೋಜನೆ ನೀಡಿ 2 ಕೋಟಿ ಮೊತ್ತದ ವರೆಗೂ ಗುತ್ತಿಗೆಯಲ್ಲಿ ಮೀಸಲಾತಿ ನೀಡಲಾಗಿದೆ. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕ ಭಾಗಕ್ಕೆ ಪ್ರತಿ ವರ್ಷ 5 ಸಾವಿರ ಕೋಟಿ ನೀಡುವುದಾಗಿ ಮಾತು ಕೊಟ್ಟಿತ್ತು. ಅದರಂತೆ ನಾವು ನೀಡುತ್ತಿದ್ದೇವೆ. ಆಮೂಲಕ ಈ ಭಾಗದ ಸುಮಾರು 42 ಕ್ಷೇತ್ರಗಳಿಗೆ ಸರಾಸರಿಯಲ್ಲಿ 100 ಕೋಟಿ ಅನುದಾನ ಸಿಗಲಿದೆ. ಈ ಭಾಗದಲ್ಲಿ ಅನೇಕ ಯೋಜನೆ ಜಾರಿಗೆ ತಂದಿದ್ದೇವೆ ಎಂದು ತಿಳಿಸಿದರು.

“ಸರ್ಕಾರದ ಅಭಿವೃದ್ಧಿ ಕಾರ್ಯಗಳು ವಿರೋಧ ಪಕ್ಷಗಳ ಕಣ್ಣಿಗೆ ಕಾಣುತ್ತಿಲ್ಲವೇ”

ಬೀದರ್ ಜಿಲ್ಲೆಯಲ್ಲಿ 2025 ಕೋಟಿ ವೆಚ್ಚದ ಯೋಜನೆಗೆ ಶಂಕು ಸ್ಥಾಪನೆ, ಪಿರಿಯಾಪಟ್ಟಣದಲ್ಲಿ 500 ಕೋಟಿ ಯೋಜನೆ ಆರಂಭಿಸಲಾಗಿದೆ. ಮಹದೇವಪ್ಪ ಅವರು ಇದೇ ತಿಂಗಳು 20-21 ರಂದು 3,647 ಕೋಟಿ ಮೊತ್ತದ ಕಾಮಗಾರಿ ಆರಂಭಿಸಲಿದ್ದಾರೆ. ದಿನೇಶ್ ಗುಂಡೂರಾವ್ ಅವರು ಆರೋಗ್ಯ ಇಲಾಖೆಯಲ್ಲಿ ಕ್ರಾಂತಿಕಾರಕ ಯೋಜನೆ ತರುತ್ತಿದ್ದಾರೆ. ಹೆಚ್.ಕೆ. ಪಾಟೀಲ್ ಅವರ ಪ್ರವಾಸೋದ್ಯಮ ಸಚಿವರಾಗಿ ಸವದತ್ತಿ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಅನೇಕ ಪ್ರವಾಸಿ ತಾಣ ಅಭಿವೃದ್ಧಿಗೆ ಮುಂದಾಗಿದ್ದಾರೆ. ಬೆಂಗಳೂರಿನ ಸಮಗ್ರ ಅಭಿವೃದ್ಧಿಗೆ ಮುಂದಿನ ಐದು ವರ್ಷಗಳಲ್ಲಿ 1 ಲಕ್ಷ ಕೋಟಿ ಮೊತ್ತದ ಯೋಜನೆಗಳನ್ನು ಹಮ್ಮಿಕೊಳ್ಳಲಾಗಿದೆ. ಇದೆಲ್ಲವು ಅಭಿವೃದ್ಧಿಯಲ್ಲವೇ ಎಂದು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಕೇಳಲು ಬಯಸುತ್ತೇನೆ ಎಂದರು.

ನಮ್ಮ ರಾಜ್ಯದ ಗ್ಯಾರಂಟಿ ಯೋಜನೆಗಳು ದೇಶಕ್ಕೆ ದೊಡ್ಡ ಮಾದರಿಯಾಗಿವೆ. ಬಿಜೆಪಿ ಆಡಳಿತ ರಾಜ್ಯಗಳಲ್ಲಿ ನಮ್ಮ ರಾಜ್ಯದ ಮಾದರಿ ಅನುಸರಿಸಲಾಗುತ್ತಿದೆ. ಜನರ ಆದಾಯ ಪಾತಾಳಕ್ಕೆ ಕುಸಿದು, ಬೆಲೆ ಏರಿಕೆಯಾಗುತ್ತಿರುವ ಸಂದರ್ಭದಲ್ಲಿ ಬಡವರನ್ನು ರಕ್ಷಿಸಲು ನಿಮ್ಮ ಬದುಕಿನಲ್ಲಿ ಬದಲಾವಣೆ ತರಬೇಕು ಎಂದು ನಾವು ಈ ಗ್ಯಾರಂಟಿ ಯೋಜನೆ ಜಾರಿಗೆ ತಂದಿದ್ದೇವೆ. ನಮ್ಮ ಯೋಜನೆಗಳಿಂದ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಸರಾಸರಿ 5 ಸಾವಿರ ರೂಪಾಯಿ ಉಳಿತಾಯವಾಗಲಿದೆ. ಇಂತಹ ಜನಪರ ಕಾರ್ಯಕ್ರಮಗಳನ್ನು ಕಾಂಗ್ರೆಸ್ ಸರ್ಕಾರ ಹೊರತಾಗಿ ಬೇರೆ ಯಾರೂ ನೀಡಲು ಸಾಧ್ಯವಿಲ್ಲ ಎಂದರು.

ಅನೇಕರು ನಮ್ಮ ಸರ್ಕಾರವನ್ನು ಟೀಕೆ ಮಾಡುತ್ತಿರುತ್ತಾರೆ, ಮಾಡಲಿ. ಮರದಲ್ಲಿ ಹಣ್ಣು ಕಂಡರೆ ಕಲ್ಲು ಹೊಡೆಯಲು ಅನೇಕರು ಪ್ರಯತ್ನಿಸುತ್ತಾರೆ. ನಮ್ಮ ಪಕ್ಷ 70 ವರ್ಷ ಈ ದೇಶವನ್ನು ಆಳಿದೆ. ನಮ್ಮ ಪಕ್ಷ ನೀಡಿರುವ ಯೋಜನೆಗಳನ್ನು ಯಾರೂ ಬದಲಿಸಲು ಸಾಧ್ಯವಾಗಿಲ್ಲ. ಉಳುವವನಿಗೆ ಭೂಮಿ, ಪಂಚವಾರ್ಷಿಕ ಯೋಜನೆ, ಬಡವರಿಗೆ ನಿವೇಶನ, ಮನೆ, ಪಿಂಚಣಿ ಸೌಲಭ್ಯ, ಉದ್ಯೋಗ ಖಾತರಿ ಸೇರಿದಂತೆ ನಮ್ಮ ಯೋಜನೆಯನ್ನು ಯಾರಿಂದಲೂ ನಿಲ್ಲಿಸಲು ಆಗಲಿಲ್ಲ. ಅದೇ ರೀತಿ ನಮ್ಮ ಪಂಚ ಗ್ಯಾರಂಟಿ ಯೋಜನೆಗಳನ್ನು ಬದಲಿಸಲು ಯಾರಿಂದಲೂ ಸಾಧ್ಯವಿಲ್ಲ. ನಮ್ಮ ಸರ್ಕಾರ ಉತ್ತಮ ಆಡಳಿತ ನೀಡುತ್ತಿದ್ದು, ನಿಮ್ಮ ಆಶೀರ್ವಾದ ನಮ್ಮ ಮೇಲೆ ಇರಬೇಕು ಎಂದು ತಿಳಿಸಿದರು.

ಬಳ್ಳಾರಿ, ವಿಜಯನಗರದಲ್ಲಿ ತಾಂಡಾ ಪ್ರದೇಶದ ಜನರಿಗೆ ಅವರ ಆಸ್ತಿ ಮತ್ತು ಭೂಮಿ ದಾಖಲೆಗಳನ್ನು ನಮ್ಮ ಸರ್ಕಾರ ನೀಡುವ ಮೂಲಕ 1,11,111 ಜನರಿಗೆ ಭೂ ಗ್ಯಾರಂಟಿ ನೀಡಿದೆ. ಇಂತಹ ಕೆಲಸ ಬೇರೆ ಯಾರೂ ಮಾಡಲು ಸಾಧ್ಯವಾಗಿರಲಿಲ್ಲ. ಇನ್ನು ನಮ್ಮ ಸರ್ಕಾರ ರಾಜ್ಯದ ವಿವಿಧ ಪ್ರದೇಶಗಳಲ್ಲಿ ಸಚಿವ ಸಂಪುಟ ಸಭೆ ಮಾಡಿ, ಆ ಭಾಗದ ಅಭಿವೃದ್ಧಿಗಳಿಗೆ ಅನುಮೋದನೆ ನೀಡುತ್ತಿದ್ದೇವೆ. ಕಲಬುರ್ಗಿ, ಚಾಮರಾಜನಗರ, ನಂದಿ ಬೆಟ್ಟದಲ್ಲಿ ಸಚಿವ ಸಂಪುಟ ಸಭೆ ಮಾಡಲಾಗಿದೆ. ಈ ಜಿಲ್ಲೆಯ ಶಾಸಕರು ನಮ್ಮ ಜಿಲ್ಲೆಯಲ್ಲೂ ಸಚಿವ ಸಂಪುಟ ಸಭೆ ಮಾಡಬೇಕು ಎಂದು ಮುಖ್ಯಮಂತ್ರಿಗಳ ಬಳಿ ಮನವಿ ಮಾಡಿದ್ದಾರೆ ಎಂದು ತಿಳಿಸಿದರು.

“ನಿಮ್ಮ ನಂಬಿಕೆ ಉಳಿಸಿಕೊಳ್ಳಲು ಇಲ್ಲಿಗೆ ಬಂದಿದ್ದೇವೆ”

ನಿಂಬೆಗಿಂತ ಶ್ರೇಷ್ಠ ಹುಳಿ ಮತ್ತೊಂದಿಲ್ಲ, ದುಂಬಿಗಿಂತ ಶ್ರೇಷ್ಠವಾದ ಕಪ್ಪು ಮತ್ತೊಂದಿಲ್ಲ, ಶಂಭುಗಿಂತ ದೊಡ್ಡ ದೇವರಿಲ್ಲ, ನಂಬಿಕೆಗಿಂತ ದೊಡ್ಡ ಗುಣ ಬೇರೋಂದಿಲ್ಲ ಎಂದು ಸರ್ವಜ್ಞನ ವಚನ ಹೇಳುತ್ತದೆ. ಅದೇ ರೀತಿ ಇಂದು ಇಂಡಿ ತಾಲೂಕಿನ ಮಹಾ ಜನತೆ ನಮ್ಮ ಮೇಲೆ ನಂಬಿಕೆ ಇಟ್ಟು ಮೂರು ಬಾರಿ ಯಶವಂತ ಪಾಟೀಲ್ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿದ್ದೀರಿ. ಹೀಗಾಗಿ ನಿಮ್ಮ ನಂಬಿಕೆಗೆ ಪ್ರತಿಯಾಗಿ ನಮ್ಮ ಇಡೀ ಸರ್ಕಾರ ನಿಮ್ಮ ಮುಂದೆ ಬಂದು ಸಾವಿರಾರು ಕೋಟಿ ಮೊತ್ತದ ಯೋಜನೆಗಳ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ನೆರವೇರಿಸುತ್ತಿದ್ದೇವೆ. ಇದೇ ನಮ್ಮ ಭಾಗ್ಯ ಎಂದು ತಿಳಿಸಿದರು.

ಈ ಜಿಲ್ಲೆಯಲ್ಲಿ ಒಂದು ಕ್ಷೇತ್ರ ಹೊರತಾಗಿ ಉಳಿದ ಎಲ್ಲಾ ಕಡೆ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ, ಈ ಸರ್ಕಾರ ಅಧಿಕಾರಕ್ಕೆ ಬರಲು ಕಾರಣರಾಗಿದ್ದೀರಿ. ಇಲ್ಲಿ ಬೆಳೆಯುವ ನಿಂಬೆಹಣ್ಣುನ್ನು ನಾವು ಪೂಜೆ, ದೃಷ್ಟಿ ತೆಗೆಯಲು, ಊಟಕ್ಕೆ ಬಳಸುತ್ತೇವೆ. ಈ ನಿಂಬೆಹಣ್ಣಿನ ನಾಡು ಈ ಇಂಡಿ ತಾಲೂಕು. ನಾನು ಎರಡನೇ ಬಾರಿಗೆ ನೀರಾವರಿ ಯೋಜನೆಯಾದ ಬಳಿಕ ಇಂಡಿ ತಾಲೂಕಿಗೆ ಹೊರತಾಗಿ ಬೇರೆ ಯಾವುದೇ ಕ್ಷೇತ್ರಕ್ಕೆ ಇಷ್ಟು ದೊಡ್ಡ ಮಟ್ಟದಲ್ಲಿ ನೀರಾವರಿ ಯೋಜನೆಗೆ ಅನುದಾನ ನೀಡಿಲ್ಲ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಬಿ ಪಾಟೀಲ್ ಅವರು ಈ ಭಾಗದಲ್ಲಿ ಹೆಚ್ಚು ಕೈಗಾರಿಕೆ ತರಬೇಕು ಎಂದು ಅವಿರತ ಪ್ರಯತ್ನ ಮಾಡುತ್ತಿದ್ದಾರೆ. ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಈ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ಇದು ನಿಮ್ಮ ಸರ್ಕಾರ. 2028 ರಲ್ಲಿ ನೀವು ಜಿಲ್ಲೆಯ ಎಲ್ಲಾ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಶಾಸಕರನ್ನು ಆಯ್ಕೆ ಮಾಡಿ ಈ ಸರ್ಕಾರ ಮತ್ತೆ ಅಧಿಕಾರಕ್ಕೆ ತರಬೇಕು, ನಿಮ್ಮ ಸೇವೆಗೆ ಅವಕಾಶ ಮಾಡಿಕೊಡಬೇಕು ಎಂದು ತಿಳಿಸಿದರು.

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button