ರೋಣದಲ್ಲಿ ಬಸ್ ಪ್ರಯಾಣ ದರ ಹೆಚ್ಚಳಕ್ಕೆ – ಆಕ್ರೋಶ ಎ.ಬಿ.ವಿ.ಪಿ ಯಿಂದ ಪ್ರತಿಭಟನೆ.

ರೋಣ ಜ.07

ರಾಜ್ಯದಲ್ಲಿ ಸಾರಿಗೆ ಬಸ್ ಪ್ರಯಾಣ ದರ ಶೇ 15. ರಷ್ಟು ಹೆಚ್ಚಳ ಮಾಡಿದ್ದರಿಂದ ಜನ ಸಾಮಾನ್ಯರಿಗೆ ತೀವ್ರ ಹೊರೆ ಯಾಗಲಿದ್ದು, ರಾಜ್ಯ ಸರ್ಕಾರದ ಈ ಕ್ರಮ ತೀವ್ರವಾಗಿ ಖಂಡನೀಯ ಎಂದು ರೋಣ ತಾಲೂಕು ಎ.ಬಿ.ವಿ.ಪಿ ಘಟಕದ ಪದಾಧಿಕಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದು, ಪಟ್ಟಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.ಈ ವೇಳೆ ಎಬಿವಿಪಿ ಶಹರ ಘಟಕ ಕಾರ್ಯದರ್ಶಿ ಸಚಿನ್ ಕುಂದರಗಿ ಮಾತನಾಡಿ, ರಾಜ್ಯ ಸರ್ಕಾರ ಸಾರಿಗೆ ಬಸ್ ಪ್ರಯಾಣ ದರ ಹೆಚ್ಚಳ ಮಾಡಿದ್ದು ಖಂಡನೀಯ, ಬಡವರು, ರೈತರು, ಮಧ್ಯಮ ವರ್ಗದ ಜನರು ಸಾರಿಗೆ ಬಸ್ ಪ್ರಯಾಣವನ್ನೇ ಅವಲಂಬಿಸಿದ್ದಾರೆ.

ಬರಗಾಲ, ಅತಿವೃಷ್ಟಿ, ಅಗತ್ಯ ಬೆಲೆ ಏರಿಕೆಯಿಂದ ಮೊದಲೇ ಕಂಗಾಲಾದ ಜನರಿಗೆ ಮತ್ತಷ್ಟು ಪೆಟ್ಟು ನೀಡಿದಂತಾಗಿದೆ. ಒಂದೆಡೆ ಗ್ಯಾರಂಟಿ ಯೋಜನೆಗಳನ್ನು ಉಚಿತವಾಗಿ ನೀಡಿ ಮತ್ತೊಂದು ಮಾರ್ಗದಿಂದ ಜನರಿಗೆ ಸಂಕಷ್ಟ ತಂದೊಡ್ಡುವುದು ಎಷ್ಟರ ಮಟ್ಟಿಗೆ ಸರಿ…..? ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಿದ್ದು ಸೂಕ್ತವಲ್ಲ. ಕೂಡಲೇ ದರ ಹೆಚ್ಚಳದಿಂದ ರಾಜ್ಯ ಸರ್ಕಾರ ಹಿಂದೆ ಸರಿಯಬೇಕು. ಜನರಿಗೆ ಮೂಲ ಸೌಲಭ್ಯ ಸಮರ್ಪಕವಾಗಿ ಒದಗಿಸಬೇಕು ಎಂದು ಆಗ್ರಹಿಸಿದರು.ಎ.ಬಿ.ವಿ.ಪಿ ತಾಲೂಕು ಸಂಚಾಲಕ ವಿರೇಶ್ ಉಳ್ಳಾಗಡ್ಡಿ ಮಾತನಾಡಿ, ಸಾರಿಗೆ ಬಸ್ ಪ್ರಯಾಣ ದರ ಏರಿಕೆ ಮಾಡಿದ್ದ ಕ್ರಮ ಸಮಂಜಸವಲ್ಲ. ಇದರಿಂದ ನಿತ್ಯ ಬೇರೆಡೆ ದುಡಿಯಲು ತೆರಳುವ ಶ್ರಮಿಕರಿಗೆ ತೊಂದರೆ ಯಾಗಲಿದೆ.

ಸರ್ಕಾರಿ ಬಸ್‌ ಪ್ರಯಾಣವನ್ನೇ ಅವಲಂಬಿಸಿರುವ ಜನರ ಮೇಲೆ ಆರ್ಥಿಕ ಹೊರೆಯನ್ನುಂಟು ಮಾಡಿದಂತಾಗಿದೆ ಎಂದು ಹೇಳಿದರು.ಪಟ್ಟಣದ ಮುಲ್ಲನಬಾವಿ ವೃತ್ತ, ಪೋತದಾರ ರಾಜನ ಕಟ್ಟೆ ಬಳಿ ಮಾನವ ಸರಪಳಿ ನಿರ್ಮಿಸಿ, ಸರ್ಕಾರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಉಪ ತಹಸೀಲ್ದಾರ್ ಜೆ.ಟಿ ಕೊಪರ ಅವರ ಮೂಲಕ ಮುಖ್ಯಮಂತ್ರಿಗೆ ಮನವಿ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ತಾಲೂಕು ಎಸ್.ಎಫ್.ಡಿ ಪ್ರಮುಖ ವಿಶ್ವನಾಥ್ ಕುರಿ, ನಗರ ಸಹ ಕಾರ್ಯದರ್ಶಿ ಶಿವಕುಮಾರ ಬಣಪನವರ, ತಾಲೂಕು ಕಾರ್ಯಕರ್ತ ಹರ್ಷ ಕಟ್ಟಿ, ಶರಣಪ್ಪ ಮುದಿಗೌಡರ ಹಾಗೂ ಪಟ್ಟಣದ ವಿವಿಧ ಕಾಲೇಜು ವಿದ್ಯಾರ್ಥಿಗಳು ಎಬಿವಿಪಿ ಪದಾಧಿಕಾರಿಗಳು ಭಾಗವಹಿಸಿದ್ದರು.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ. ರೋಣ ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button