ಲೋಕಾಯುಕ್ತದಲ್ಲಿ ಸರ್ಕಾರಿ ನೌಕರರು ಹಾಗೂ ಅಧಿಕಾರಿಗಳ ಆಸ್ತಿ ವಿವರ ಸಿಗುವಂತಾಗಲಿ – ನಿರುಪಾದಿ.ಕೆ ಗೋಮರ್ಸಿ ಆಗ್ರಹ.
ಸಿಂಧನೂರು ಜ.19

ರಾಜ್ಯ ಸರ್ಕಾರದ ಎಲ್ಲಾ ನೌಕರರು ಮತ್ತು ಅಧಿಕಾರಿಗಳು ಪ್ರತಿ ವರ್ಷ ಕಡ್ಡಾಯವಾಗಿ ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸುವುದರ ಜೊತೆಗೆ ಅದು ಸಾರ್ವಜನಿಕರಿಗೆ ಲಭ್ಯವಿರಬೇಕು ಎಂದು ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಯುವ ಮುಖಂಡ ನಿರುಪಾದಿ.ಕೆ ಗೋಮರ್ಸಿ ಪತ್ರಿಕಾ ಹೇಳಿಕೆ ಮುಖಾಂತರ ಆಗ್ರಹಿಸಿದರು. ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ದಿಂದ ಅಕ್ರಮ ಆಸ್ತಿ ಗಳಿಕೆಗೆ ಕಡಿವಾಣ ಹಾಕಲು ಗ್ರಾಮ ಪಂಚಾಯತಿ ಸದಸ್ಯರು ಸೇರಿ ರಾಜ್ಯದ ಎಲ್ಲಾ ಜನ ಪ್ರತಿನಿಧಿಗಳು ತಮ್ಮ ಆಸ್ತಿ ವಿವರವನ್ನು ಲೋಕಾಯುಕ್ತಕ್ಕೆ ಸಲ್ಲಿಸಬೇಕೆಂಬ ನಿಯಮ ಜಾರಿಯಲ್ಲಿದೆ. ಈ ನಿಯಮ ಸರಕಾರಿ ನೌಕರರು ಮತ್ತು ಅಧಿಕಾರಿಗಳಿಗೆ ಅನ್ವಯವಾಗುವಂಥ ಕಾನೂನು ರೂಪಿಸಬೇಕೆಂದು ತಿಳಿಸಿದರು.ಕೇಂದ್ರ ಸರ್ಕಾರದ ನೌಕರರು ತಮ್ಮ ಆಸ್ತಿ ವಿವರಗಳನ್ನು ಪ್ರತಿ ವರ್ಷ ಲೋಕಪಾಲರಿಗೆ ಕಡ್ಡಾಯವಾಗಿ ಸಲ್ಲಿಸಬೇಕೆಂದು ಲೋಕಪಾಲ ಕಾಯ್ದೆಯ ಸೆಕ್ಷನ್ 44 ಹೇಳುತ್ತದೆ. ಕೇಂದ್ರ ಸರ್ಕಾರದ ನೌಕರರು ಮತ್ತು ಅಧಿಕಾರಿಗಳಿಗೆ ಈ ನಿಯಮ ಅನ್ವಯವಾಗುವಾಗ ರಾಜ್ಯ ಸರ್ಕಾರದ ನೌಕರರು ತಮಗೆ ಇಂಥ ನಿಯಮ ಇರಬಾರದೆಂದು ಹೇಳುವುದು ವಿರೋಧ ಬಾಸ ಎಂದು ಟೀಕಿಸಿದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ