ಬಜೆಟ್‌ನಲ್ಲಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ – ಗೌರವ ಧನ ಹೆಚ್ಚಿಸಲು ಒತ್ತಾಯ.
ರೋಣ ಜ.17

ರಾಜ್ಯದಲ್ಲಿ 4,600 ಕ್ಕೂ ಹೆಚ್ಚು ಅತಿಥಿ ಉಪನ್ಯಾಸಕರು ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸೇವೆ ಸಲ್ಲಿಸುತ್ತಿದ್ದು, ಮಾಸಿಕವಾಗಿ ಕೇವಲ 12 ಸಾವಿರ ರೂ. ಗೌರವ ಧನವನ್ನು ನೀಡಲಾಗುತ್ತಿದೆ. ಮೂಂದಿನ ಬಜೆಟ್‌ನಲ್ಲಿ ಅತಿಥಿ ಉಪನ್ಯಾಸಕರ ಗೌರವ ಧನ ಹೆಚ್ಚಿಸಬೇಕು ಎಂದು ಸರಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರ ಸಂಘಟನೆ ಸರಕಾರವನ್ನು ಒತ್ತಾಯಿಸಿದೆ.ಗುರುವಾರ ಸಂಘಟನೆಯು ಪ್ರಕಟನೆ ಹೊರಡಿಸಿದ್ದು, ಸರಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ದಾಖಲಾತಿಯಿಂದ ಹಿಡಿದು ಉತ್ತಮ ಫಲಿತಾಂಶ ಬರುವವರೆಗೂ ಸೇವೆ ಸಲ್ಲಿಸುತ್ತಿರುವ ಉಪನ್ಯಾಸಕರ ಗೌರವ ಧನವನ್ನು ಹೆಚ್ಚಿಸುವುದು ನ್ಯಾಯ ಸಮ್ಮತವಾಗಿದೆ. ಅತಿಥಿ ಉಪನ್ಯಾಸಕರ ಸೇವೆಗೆ ಇದುವರೆಗೂ ಯಾವುದೇ ರೀತಿಯಲ್ಲಿ ಸೇವಾ ಭದ್ರತೆ ದೊರೆತಿಲ್ಲ. ಇದರೊಂದಿಗೆ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಈಗಾಗಲೇ ಅತಿಥಿ ಉಪನ್ಯಾಸಕರು ಸಂಕಷ್ಟದಲ್ಲಿದ್ದಾರೆ ಎಂದಿದೆ.ನಮ್ಮಲ್ಲಿ ಹಲವಾರು ಅತಿಥಿ ಉಪನ್ಯಾಸಕರು ವಯಸ್ಸಾದ ತಂದೆ ತಾಯಿಯ ಅನಾರೋಗ್ಯ ಸೇರಿದಂತೆ ಮಕ್ಕಳ ವಿದ್ಯಾಭ್ಯಾಸದ ಖರ್ಚು ವೆಚ್ಚಗಳನ್ನು ಭರಿಸಲಾಗದೆ ಸಂಕಟದಲ್ಲಿದ್ದಾರೆ. ಇಂಥ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರಲಿರುವ ಬಜೆಟ್‌ನಲ್ಲಿ ಸರಕಾರಿ ಸದವಿ ಪೂರ್ವ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುವ ಅತಿಥಿ ಉಪನ್ಯಾಸಕರಿಗೆ ಗೌರವಯುತ ಬದುಕು ನಡೆಸಲು ಕನಿಷ್ಠ 30 ಸಾವಿರ ರೂ.ಗಳಿಗೆ ಗೌರವ ಧನವನ್ನು ಹೆಚಿಸಬೇಕು ಎಂದು ಸಂಘಟನೆ ಮನವಿ ಮಾಡಿದೆ.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ. ರೋಣ. ಗದಗ