ವಿಜಯೇಂದ್ರ ಅಧಿಕಾರದ ಕತ್ತಿ ಹಿಡಿದು – ಸರ್ಕಾರವನ್ನ ತರಬೇಕಿದೆ.
ಮಾನ್ವಿ ಜ.19

ವಿಜಯೇಂದ್ರ ಅವರು ಬಿಜೆಪಿ ಪಕ್ಷದ ರಾಜ್ಯಾಧ್ಯಕ್ಷ ರಾಗಿದ್ದಾರೆ. ವಿಜಯೇಂದ್ರ ಅವರು ಮುಖ್ಯಮಂತ್ರಿಯಾಗುವ ಮೂಲಕ ನಮಗೆ ನವಲಿ ಜಲಾಶಯ ಮಾಡಿ, ಹತ್ತಾರು ಕೆರೆಯನ್ನ ಮಾಡಬೇಕು ಎಂದು ಮಾಜಿ ಸಚಿವ ಕೆ.ಶಿವನಗೌಡ ನಾಯಕ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದಲ್ಲಿ ಕೆ.ಶಿವನಗೌಡ ನಾಯಕ ಅಭಿಮಾನಿಗಳ ಬಳಗದಿಂದ ನಡೆದ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿ, ವಿಜಯೇಂದ್ರ ಈ ರಾಜ್ಯದ ಮುಖ್ಯಮಂತ್ರಿ ಆಗುವುದನ್ನ ತಪ್ಪಿಸಲು ಯಾರಿಂದ ಸಾಧ್ಯವಿಲ್ಲ ಮುಂದೊಂದು ದಿನ ವಿಜಯೇಂದ್ರ ಮುಖ್ಯಮಂತ್ರಿ ಹಾಗುತ್ತಾರೆ ಎಂದು ಕೊಂಡಾಡಿದರು.

ರಾಯಚೂರು ಜಿಲ್ಲೆಯಲ್ಲಿ ಏಮ್ಸ್ ಹೋರಾಟ ನಿರಂತರವಾಗಿ ಮಾಡುತ್ತಿದ್ದಾರೆ, ವಿಜಯೇಂದ್ರ ಅವರು ಮೋದಿ, ನಡ್ಡಾ, ಅಮಿತ್ ಶಾ ಮನವೊಲಿಸಿ ಏಮ್ಸ್ ತರಬಹುದು ಅದು ವಿಜಯೇಂದ್ರ ಅವರಿಂದ ಮಾತ್ರ ಸಾಧ್ಯವಿದೆ ಎಂದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ