ನಾಳೆ ದಿನಾಂಕ:-04-03-2024 ರಂದು ಹುನಗುಂದ ಮತಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ಸಮಾರಂಭ.
ಇಲಕಲ್ಲ ಮಾರ್ಚ್.3

ಬಿಸಲದಿನ್ನಿ, ಕೃಷ್ಣಾಪೂರ, ಚಟ್ನಿಹಾಳ, ಸೋಮಲಾಪುರ, ದಮ್ಮೂರ, ಗೋರಬಾಳ, ಗ್ರಾಮಗಳ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರು ಹಾಗೂ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀ ವಿಜಯಾನಂದ ಎಸ್ ಕಾಶಪ್ಪನವರ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ.ಕಾರಣ ಈ ಮೇಲಿನ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಹಾಲಿ, ಮಾಜಿ ಸದಸ್ಯರುಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು ಸದಸ್ಯರು, ಪಿಕೆಪಿಎಸ್ ನಿರ್ದೇಶಕರು ಸ್ಥಳೀಯ ಮುಖಂಡರು, ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಭಾಗವಹಿಸ ಬೇಕೆಂದು ತಮ್ಮಲ್ಲಿ ವಿನಂತಿ ಮೂಲಕ ಕೋರಲಾಗಿದೆ.
ತಾಲೂಕ ವರದಿಗಾರರು ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಪ್ರತಾಪ್.ವಾಯ್.ಕಿಳ್ಳಿ.ಇಲಕಲ್ಲ