ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಗೆ – ಬೆಳ್ಳಿ ಹಬ್ಬದ ಸಂಭ್ರಮ.

ಮಾನ್ವಿ ಜ.22

ಪಟ್ಟಣದಲ್ಲಿರುವ ನೇತಾಜಿ ಶಿಕ್ಷಣ ಸಂಸ್ಥೆಗೆ‌ ಬೆಳ್ಳಿ ಹಬ್ಬದ ಸಂಭ್ರಮ ತುಂಬಿದ ಹಿನ್ನೆಲೆಯಲ್ಲಿ ಜನವರಿ 30 ಮತ್ತು 31ರಂದು ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ಹಮ್ಮಿ ಕೊಳ್ಳಲಾಗಿದೆ ಎಂದು ಸಂಸ್ಥೆಯ ಅಧ್ಯಕ್ಷ ಕೆ.ಈ ನರಸಿಂಹ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ಪಟ್ಟಣದ ನೇತಾಜಿ ಶಿಕ್ಷಣ ಸಂಸ್ಥೆಯಲ್ಲಿ ಮಂಗಳವಾರ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿ, ಕಾರ್ಯಕ್ರಮವು ಎರಡು ದಿನಗಳ ಕಾಲ ನಡೆಯಲಿದ್ದು, ಕಳೆದ 25 ವರ್ಷಗಳಿಂದ ಸಂಸ್ಥೆಯಲ್ಲಿ ಕಲಿತು ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಮುಗಿಸಿ ಹೊರ ಹೋದ 2 ಸಾವಿರ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದರು.

ಕಾರ್ಯಕ್ರಮವನ್ನು ಸಚಿವರು, ಶಾಸಕರು ಮಾಜಿ ಶಾಸಕರು ಸೇರಿದಂತೆ ಗಣ್ಯರು ಉದ್ಘಾಟಿಸಲಿದ್ದು, ಇದೆ ವೇಳೆ ನಾಣ್ಯ ಪ್ರದರ್ಶನ, ಶಿಲ್ಪಕಲಾ ಪ್ರದರ್ಶನ, ಸಿರಿಧಾನ್ಯ ಪ್ರದರ್ಶನ, ವಿಜ್ಞಾನ ಮಾದರಿ ಪ್ರದರ್ಶನ ಸೇರಿದಂತೆ ನಾನಾ ಕಾರ್ಯಕ್ರಮ ನಡೆಯಲಿದೆ ಎಂದರು.

ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಹುಸೇನ್.ಭಾಷಾ.ನಕ್ಕುಂದಿ.ಮಾನ್ವಿ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button