ನರೇಗಾ ಕೂಲಿ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ.
ಬಿಸಲದಿನ್ನಿ ಜೂನ್.14

ಬಾಗಲಕೋಟೆಯ ಹುನಗುಂದ ತಾಲೂಕಿನ ಬಿಸಿಲದಿನ್ನಿ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯ ತಪಾಸಣಾ ಶಿಬಿರ ಹಾಗೂ ಜಲ ಸಂಜೀವಿನಿ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಸಸಿಗೆ ನೀರು ಎರೆಯುವುದರ ಮೂಲಕ ಗಣ್ಯರು ಚಾಲನೆ ನೀಡಿದರು. ಆರೋಗ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮದ ಮುಖಂಡರು ನರೇಗಾ ಕೂಲಿ ಕಾರ್ಮಿಕರಿಗೆ ಆರೋಗ್ಯದ ಬಗ್ಗೆ ವಹಿಸಬೇಕಾದ ಮುಂಜಾಗ್ರತೆ ಕುರಿತು ಮಾಹಿತಿ ನೀಡಿದರು. ಬಳಿಕ ಕೂಲಿ ಕಾರ್ಮಿಕರಿಗೆ ಬಿಪಿ.ಶುಗರ್. ಟಿಬಿ ಸೇರಿದಂತೆ ಹಲವು ಪರೀಕ್ಷೆಗಳನ್ನು ಮಾಡಲಾಯಿತು.ಹೆಚ್ಚಿನ ಚಿಕಿತ್ಸೆಗಾಗಿ ತಾಲೂಕ ಆಸ್ಪತ್ರೆಗೆ ಭೇಟಿ ನೀಡಲು ಸೂಚಿಸಲಾಯಿತು.

ಈ ಸಂದರ್ಭದಲ್ಲಿ ಐಇಸಿ ಸಂಯೋಜಕ ಬಸವರಾಜ ಕೊಪ್ಪದ ಗ್ರಾಮ ಪಂಚಾಯತಿ ಕಾರ್ಯದರ್ಶಿ ಎನ್.ಆರ್.ಮಿರಾಜಕರ್ ಡಾಟ್ ಎಂಟ್ರಿ ಆಪರೇಟರ್ ಬಸವರಾಜ್ ಬಳಬಟ್ಟಿ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗ ಗ್ರಾಮ ಪಂಚಾಯತಿ ಸದಸ್ಯರು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.