ರಾಜೀವಗಾಂಧಿ ಬಿಇಡಿ ಕಾಲೇಜಿನಲ್ಲಿ – ಶೇ.100 ರಷ್ಟು ಫಲಿತಾಂಶ.

ರೋಣ ಜ.23

ಪಟ್ಟಣದ ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಬಿ.ಇ.ಡಿ ಮಹಾವಿದ್ಯಾಲಯದ 2024-25 ನೇ. ಸಾಲಿನ ಪರೀಕ್ಷೆಯಲ್ಲಿ ಪ್ರಶಿಕ್ಷಣಾರ್ಥಿಗಳು ಶೇ.100 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ್ದಾರೆ. ರಾಜೀವಗಾಂಧಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಶಾಸಕ ಜಿ.ಎಸ್ ಪಾಟೀಲ ಪರೀಕ್ಷೆಯಲ್ಲಿ ಶೇ.100 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದ ಪ್ರಶಿಕ್ಷಣಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದರು. ಬಿ.ಇ.ಡಿ ಪರೀಕ್ಷೆಯಲ್ಲಿ ಮಹಾವಿದ್ಯಾಲಯದ ಪ್ರಶಿಕ್ಷಣಾರ್ಥಿಗಳಾದ ಪ್ರತಿಭಾ ತಿಮ್ಮನಗೌಡ್ರ ಶೇ.91.04 ಪ್ರಥಮ, ಅನೀಲ ಹಿರೇಗೌಡ್ರ ಶೇ.91 ದ್ವೀತಿಯ,ಈರಮ್ಮ ಗಾಣಿಗೇರ ಶೇ.90.08 ತೃತೀಯ ಸ್ಥಾನ ಪಡೆದಿದ್ದಾರೆ. ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಹಿನ್ನೆಲೆಯಲ್ಲಿ ಮಹಾವಿದ್ಯಾಲಯದ ಅಧ್ಯಕ್ಷ ಮಿಥುನ ಪಾಟೀಲ, ಪ್ರಾಚಾರ್ಯ ವೈ.ಎಸ್ ಪಾಪಣ್ಣವರ ಸೇರಿದಂತೆ ಆಡಳಿತ ಮಂಡಳಿಯ ಸದಸ್ಯರು ಸೇರಿದಂತೆ ಮಹಾವಿದ್ಯಾಲಯದ ಭೋದಕರು ಹಾಗೂ ಬೋಧಕೇತರ ಪ್ರಶಿಕ್ಷಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ.

ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ ಗದಗ

ಮಾರುತಿ ಹೊಸಮನಿ

Maruti Basavantappa Hosamani is Editor of Sihi Kahi Kannada Daily News Paper. Sihi Kahi News Daily Publishing News Contents from His Own News Network and Own Contents. Over the Print Media and Website.

Leave a Reply

Back to top button