ಏಪ್ರಿಲ್ 16. ರಂದು ಅರ್ಜುಣಗಿ ಗ್ರಾಮದಲ್ಲಿ ಉಚಿತ – ಆರೋಗ್ಯ ತಪಾಸಣಾ ಹಾಗೂ ರಕ್ತದಾನ ಶಿಬಿರ.
ಅರ್ಜುಣಗಿ ಏ.10

ಇಂಡಿ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ಶ್ರೀ ಗೈಬಿಪೀರ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಏಪ್ರಿಲ್ 16. ರಂದು ಮೂರನೇ ವರ್ಷದ ಬೃಹತ್ ರಕ್ತದಾನ ಶಿಬಿರ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿದೆ. ರಕ್ತದಾನ ಶಿಬಿರಕ್ಕೆ ಈಗಾಗಲೇ 100 ಜನರು ಹೆಸರು ನೊಂದಾಯಿಸಿದ್ದು. ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಬಿ.ಪಿ, ಶುಗರ್ ಹಾಗೂ ಕಣ್ಣುಗಳ ತಪಾಸಣೆಯನ್ನು ಮಾಡಲಾಗುವುದು. ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳಬೇಕೆಂದು ಜಾತ್ರಾ ಸಮಿತಿಯವರು ಪತ್ರಿಕಾ ಮಾಧ್ಯಮ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್ ಗೆ ತಿಳಿಸಿದ್ದಾರೆ.