ಹಲ್ಲೆಗೊಳಗಾದ ದಲಿತ ಕಾರ್ಮಿಕರಿಗೆ ಸೂಕ್ತ ರಕ್ಷಣೆ ನೀಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ – ಆಗ್ರಹ ಡಾ, ಮಲಕಪ್ಪ ಬಾಗೇವಾಡಿ.
ವಿಜಯಪುರ ಜ.26

ವಿಜಯಪುರದಲ್ಲಿ ಇತ್ತೀಚೆಗೆ ನಡೆದ ಇಟ್ಟಿಗೆ ಬಟ್ಟಿಯ ಕೂಲಿ ಕಾರ್ಮಿಕರ ಮೇಲೆ ಅಮಾನವೀಯವಾಗಿ ಹಿಂಸೆ ಮಾಡಿರುವ ಕೃತ್ಯ ಸಮಾಜ ವಿರೋಧಿಯಾಗಿದೆ. ಕೂಲಿ ಕಾರ್ಮಿಕರ ಮೇಲೆ ಹಿಂಸೆ ಮಾಡಿರುವ ದುರುಳರನ್ನು ಪೊಲೀಸ್ ಇಲಾಖೆ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಿ ಅವರ ಮೇಲೆ ಸೂಕ್ತ ಕ್ರಮ ಜರುಗಿಸ ಬೇಕು ಎಂದು ಡಾ, ಮಲಕಪ್ಪ ಬಾಗೇವಾಡಿ ಜಾಂಬವ ಯುವ ಸೇನೆ ರಾಜ್ಯ ಉಪಾಧ್ಯಕ್ಷರು ಮತ್ತು ಬಿಜೆಪಿ ಎಸ್.ಸಿ ಮೋರ್ಚಾ ಮಂಡಲ ಅಧ್ಯಕ್ಷರು ದೇವರ ಹಿಪ್ಪರಗಿ ತಿಳಿಸಿದ್ದಾರೆ.ಪತ್ರಿಕಾ ಹೇಳಿಕೆ ನೀಡಿದ ಅವರು ಸಮಾಜದಲ್ಲಿ ಗೂಂಡಾ ವರ್ತನೆ ತಾಂಡವಾಡುತ್ತಿದೆ. ಹೊಟ್ಟೆ ಪಾಡಿಗಾಗಿ ಅಲೆದಾಡುತ್ತಿರುವ ಕೂಲಿ ಕಾರ್ಮಿಕರ ಮೇಲೆ ಈ ರೀತಿ ದೌರ್ಜನ್ಯ ಮಾಡುತ್ತಿರುವುದು ಯಾವ ನ್ಯಾಯ. ಅವರು ತಪ್ಪು ಮಾಡಿದ್ದರೇ ಅದನ್ನ ತಿಳಿ ಹೇಳುವಲ್ಲಿ ಮುಂದಾಗಬೇಕು ಹೊರತು ಕೂಲಿ ಕಾರ್ಮಿಕರು ಎಂದು ಅವರ ಮೇಲೆ ಹೀನ ಕೃತ್ಯ ಮಾಡುವುದು ಸಮಾಜದ ವಿರೋಧಿ ಕಾರ್ಯ ಮತ್ತು ಇದು ದೊಡ್ಡ ಅಪರಾಧ. ಕಾರ್ಮಿಕರ ಮೇಲೆ ಹಲ್ಲೆ ಮಾಡುತ್ತಿರುವ ವಿಡಿಯೋ ವೈರಲ್ ಆಗಿದ ತಕ್ಷಣವೇ ವಿಜಯಪುರ ಗ್ರಾಮೀಣ ಪೊಲೀಸ್ ಇಲಾಖೆಯವರು ಅಪರಾದಿಗಳನ್ನು ಬಂಧಿಸುವಲ್ಲಿ ಯಶಸ್ವಿ ಯಾಗಿದ್ದಾರೆ. ಇದನ್ನು ಸ್ವಾಗತಿಸುತ್ತೇನೆ. ಆದರೆ ಆ ಕಿಡಿ ಗೇಡಿಗಳನ್ನು ಸುಮ್ಮನೆ ಬಿಡಬಾರದು. ಬೇರೆ ಬೇರೆ ಕಡೆ ಕೂಲಿ ಕೆಲಸ ಮಾಡುತ್ತಿರುವ ಕಾರ್ಮಿಕರು ಭಯದಿಂದ ಬದುಕುತ್ತಿದ್ದಾರೆ. ಅವರಿಗೆ ನೆಮ್ಮದಿಯ ಬದುಕು ಬೇಕಾಗಿದೆ. ಸಮಾಜದಲ್ಲಿ ನಿತ್ಯ ಕಾರ್ಮಿಕರ ಮೇಲೆ ಒಂದಿಲ್ಲೊಂದು ಹಲ್ಲೆಗಳು ನಿರಂತರವಾಗಿ ನಡೆಯುತ್ತಿವೆ. ಇದಕ್ಕೆ ಸಂಬಂಧಪಟ್ಟ ಕಾರ್ಮಿಕ ಇಲಾಖೆ ಜಾಣ ಕುರುಡರಂತೆ ವರ್ತಿಸುತ್ತಿದೆ. ಇದನ್ನು ಜಾoಭವ ಯುವ ಸೇನೆ ತೀವ್ರವಾಗಿ ಖಂಡಿಸುತ್ತದೆ. ಸರ್ಕಾರ ಮತ್ತು ಕಾರ್ಮಿಕ ಇಲಾಖೆ ಈ ಕೃತ್ಯವನ್ನು ಗಂಭೀರವಾಗಿ ಪರಿಗಣಿಸಿ ಆರೋಪಿಗಳಿಗೆ ಅತೀ ಕಠಿಣ ಕ್ರಮವನ್ನು ಜರುಗಿಸ ಬೇಕೆಂದು ಆಗ್ರಹಿಸಿದ್ದಾರೆ.