ಜ್ಞಾನ ವಿಕಾಸ ಕೇಂದ್ರದ ಮೂಲಕ ಮಹಿಳೆಯರಿಗೆ ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಲು-ನವೀನ್ ಕುಮಾರ್ ಕರೆ.
ಕೂಡ್ಲಿಗಿ ಸಪ್ಟೆಂಬರ್.9

ಮಹಿಳೆಯರ ಬದುಕನ್ನು ಬೆಳಗಿಸುವ ವಿಶೇಷ ಯೋಜನೆಯೇ ಜ್ಞಾನ ವಿಕಾಸ ಕಾರ್ಯಕ್ರಮ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಟ್ಟೂರು ತಾಲೂಕು ಯೋಜನಾಧಿಕಾರಿ ನವೀನ ಕುಮಾರ ತಿಳಿಸಿದರು. ತಾಲೂಕಿನ ಬಣವಿಕಲ್ಲು ಗ್ರಾಮದ ಸಮುದಾಯ ಭವನದಲ್ಲಿ ಶುಕ್ರವಾರ ಜ್ಞಾನ ವಿಕಾಸ ಕೇಂದ್ರದ 3ನೇ ವರ್ಷದ ವಾರ್ಷಿಕೋತ್ಸವ ಅಂಗವಾಗಿ ಕೊಟ್ಟೂರು ಯೋಜನೆ ವ್ಯಾಪ್ತಿಯ ಏರ್ಪಡಿಸಿದ್ದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಪೂಜ್ಯ ಹೇಮಾವತಿ ಹೆಗ್ಗಡೆಯವರ ಕನಸಿನ ಕೂಸಾದ ಜ್ಞಾನ ವಿಕಾಸ ಕಾರ್ಯಕ್ರಮದ ಮೂಲಕ ಮಹಿಳೆಯರ ವ್ಯಕ್ತಿತ್ವ ವಿಕಾಸನ, ಸಂಸ್ಕಾರ, ನಮ್ಮ ಸಂಸ್ಕೃತಿ ಕಾಪಾಡುವುದು, ಸ್ವ ಉದ್ಯೋಗ ಮಾಹಿತಿ, ಕುಟುಂಬದ ಆರೋಗ್ಯ ಕಾಪಾಡುವುದು,ಹಿಂದೆ ಮಹಿಳೆಯರು ಮನೆಯಿಂದ ಹೊರಗೆ ಬಂದು ಮಾಹಿತಿ ಕೊಡಲು ಕೂಡ ತುಂಬಾ ಭಯಪಡುತ್ತಿದ್ದರು.

ಆದರೆ ಈ ದಿನಗಳಲ್ಲಿ ಧರ್ಮಸ್ಥಳದ ಜ್ಞಾನ ವಿಕಾಸ ಕಾರ್ಯಕ್ರಮದ ದಿಸೆಯಿಂದ ಮಹಿಳೆಯರು ಎಲ್ಲಾ ರೀತಿಯಲ್ಲಿ ಮುಂದೆ ಬಂದಿದ್ದು, ಜೊತೆಯಲ್ಲಿ ಆಟೋಟ ಸ್ಪರ್ಧೆಯಗಳ ಚಟುವಟಿಕೆಗಲ್ಲಿ ಕೂಡ ತಮ್ಮ ವಯಸ್ಸನ್ನು ಮರೆತು ಸಕ್ರೀಯವಾಗಿ ಭಾಗವಹಿಸಿದ್ದನ್ನು ಕಂಡು ತುಂಬಾ ಹೆಮ್ಮೆಯೆನಿಸುತ್ತಿದೆ ಎಂದರು. ಈ ಕಾರ್ಯಕ್ರಮದ ಸಾವಿತ್ರಿ ನಾಗರಾಜ್ ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಈ ಕಾರ್ಯಕ್ರಮದ ಬಿ.ಎಂ ಬಸಮ್ಮ ಅಧ್ಯಕ್ಷರು ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿದ್ದರು, ಶಾಕುಂತಲಮ್ಮ ಜೆವಿಕೆ ಕೇಂದ್ರದ ಹಿರಿಯರು, ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶಾಂತ ಕುಮಾರಿ, ಸ್ವಾಗತಸಿದರು,ಕುಬೇಂದ್ರ ಕುಮಾರ್ ಎಚ್. ವಲಯ ಮೇಲ್ವಿಚಾರಕರು ಕಾರ್ಯಕ್ರಮವನ್ನು ನೆರವೇರಿಸಿದರು, ಈ ಕಾರ್ಯಕ್ರಮ ದಲ್ಲಿ ಸುನಿತಾ ಸೇವಾ ಪ್ರತಿನಿಧಿ ಸದಸ್ಯರು ಹಾಗೂ ಸೇವಾ ಪ್ರತಿನಿಧಿಗಳು ಮತ್ತು ಸಂಘದ ಸರ್ವ ಸದಸ್ಯರು ಊರಿನ ಮುಖಂಡರು ಉಪಸಿತರಿದ್ದರು.
ಜಿಲ್ಲಾ ವರದಿಗಾರರು:ರಾಘವೇಂದ್ರ.ಬಿ.ಸಾಲುಮನೆ.ಕೂಡ್ಲಿಗಿ

