ಸರ್ವರಿಗೂ ಸಮಾನತೆಯ ತತ್ವ ಸಾರಿದ ಮಡಿವಾಳ ಮಾಚಿದೇವಾದಿ ಶರಣರು – ಪ್ರಧಾನ ಗುರುಗಳು ಬಸರಾಜ.ಬಿ ಕುರಿ.
ನರೇಗಲ್ ಪೆ.01

ಕೆ.ಜಿ.ಎಸ್ ಶಾಲೆಯಲ್ಲಿ ಶ್ರೀ ಮಡಿವಾಳ ಮಾಚಿದೇವರ ಜಯಂತಿ ಆಚರಿಸಲಾಯಿತು ಈ ಸಂಧರ್ಭದಲ್ಲಿ ಮುಖ್ಯಪಾಧ್ಯಾಯರಾದ ಬಸರಾಜ.ಬಿ ಕುರಿ ಮಾತನಾಡಿದರು 12 ನೇ. ಶತಮಾನದಲ್ಲಿ ದುರ್ಬಲರ ಶೋಷಣೆ , ಜಾತೀಯತೆ, ಮೇಲು -ಕೀಳು ತಾರತಮ್ಯ , ಅಸ್ಪ್ರುಶ್ಯತೆ , ಮೂಢ ನಂಬಿಕೆಗಳ ಸೃಷ್ಟಿ , ಶಿಕ್ಷಣದಲ್ಲಿ ಅವಕಾಶ ವಂಚನೆ ಹೀಗೆ ಅನೇಕ ಸಾಮಾಜಿಕ ಅಸಮಾನತೆ ಯಿಂದ ಜನರು ತುಳಿತಕ್ಕೆ ಒಳಗಾಗಿದ್ದರು. ಇವುಗಳೆಲ್ಲವು ಗಳಿಂದ ಮಹಿಳೆಯರು, ವೃತ್ತಿ ನಿರತ ಶ್ರಮಜೀವಿಗಳು , ಬಡವರು, ದೀನ ದಲಿತರು ನಿರಾಶೆ-ಹತಾಶೆಗೊಂಡು ಅಸಹನೀಯ ಬದುಕಿಗೆ ತುತ್ತಾಗಿದ್ದರು. ಸರ್ವರಿಗೂ ಸಮಪಾಲು -ಸಮಬಾಳು ಒದಗಿಸಲು ಬಸವ-ಮಾಚಿದೇವಾದಿ ಶರಣರು ಸಾಮಾಜಿಕ ಕ್ರಾಂತಿಯನ್ನೇ ಕೈಗೊಂಡರು. ಶರಣರ ಅಗ್ರಗಣ್ಯ ಬಳಗದಲ್ಲಿ ‘ಮಡಿವಾಳ ಮಾಚಿದೇವ’ ಅತ್ಯಂತ ಪ್ರಕಾಶಮಾನವಾಗಿ ಕಂಡು ಬರುವರು ಅನುಭವ ಮಂಟಪ ಕಟ್ಟುವಲ್ಲಿ ಮಡಿವಾಳ ಮಾಚಿದೇವರ ಕಾಯಕ ಅತಿ ಮಹತ್ವದ್ದು. ದೇಶದ ನಾನಾ ಭಾಗಗಳಿಂದ ಕಲ್ಯಾಣಕ್ಕೆ ಬರುವವರಿಗೆ ಪರೀಕ್ಷಿಸಿ , ‘ಮಡಿ’ ಹಾಸಿ ಸ್ವಾಗತಿಸುವ ಕೆಲಸ ಅವರದಾಗಿತ್ತು. ಮಾಚಿದೇವರ ಪರೀಕ್ಷೆ ಗೊಳಪಡದ ಹೊರತು ಕಲ್ಯಾಣಪುರ ಪ್ರವೇಶದ ಪ್ರಮಾಣ ಪತ್ರ ಹೊರಗಿನಿಂದ ಬರುವವರಿಗೆ ಸಿಗುತ್ತಿರಲಿಲ್ಲ ವೆಂಬುದು ಮಾಚಯ್ಯನ ಮಹಾ ಘನತೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಈ ಸಮಯದಲ್ಲಿ ಶ್ರೀಮತಿ ಎನ್.ಎಲ್ ಚೌವಾನ್ ಎಸ್.ಐ ಜಗಾಪುರ ಎಮ್.ಪಿ ಅನಗೌಡರ್ ಡಿ.ವಿ ಕಳ್ಳಿ ಜೆ.ಎ ಪಾಟೀಲ್ ಎಂ.ಎಸ್ ಮಾಳ ಶೆಟ್ಟಿ ಶ್ರೀಮತಿ ರಾಜೇಶ್ವರಿ ತೊಂಡೆಯಾಳ್ , ಸಿಂಧು ಗುಡಿಸಾಗರ ಗುರು ಮಾತೆಯರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್:ಎಸ್.ವಿ ಸಂಕನಗೌಡ್ರ ರೋಣ ಗದಗ