ನರೇಗಲ್ ಪಟ್ಟಣ ಪಂಚಾಯತಿ ಅಧ್ಯಕ್ಷ ಉಪಾಧ್ಯಕ್ಷ ಚುನಾವಣೆ.
ನರೇಗಲ್ ಸ.02

ಕುತೂಹಲ ಕೆರಳಿಸಿದ ನೆರೆಗಲ್ ಪಟ್ಟಣ ಪಂಚಾಯತಿ ಚುನಾವಣೆ ಸ್ಥಳೀಯ ಪಟ್ಟಣ ಪಂಚಾಯಿತಿ ಅಧ್ಯಕ್ಷ, ಉಪಾಧ್ಯಕ್ಷರ 2 ನೇ. ಅವಧಿಗಾಗಿ ನಡೆಯುವ ಚುನಾವಣೆ ಸೆ. 2 ರಂದು ನಿಗದಿಯಾಗಿದೆ. ಸಂಖ್ಯಾ ಬಲದ ಆಧಾರದ ಮೇಲೆ ಆಡಳಿತಕ್ಕೆ ಬರುವುದು ಖಚಿತ ಎಂದು ಕೊಂಡಿದ್ದ ಬಿಜೆಪಿಗೆ ಅವರದೇ ಪಕ್ಷದ ಆರು ಜನ ಸದಸ್ಯರ ಮೊಬೈಲ್ ಸ್ವಿಚ್ ಆಫ್ ಆಗಿರುವುದು ಹಾಗೂ ನರೇಗಲ್ ಪಟ್ಟಣದಲ್ಲಿ ಕಾಣಿಸಿ ಕೊಳ್ಳದಿರುವುದು ಶಾಕ್ ನೀಡಿದೆ.

ಅದರಲ್ಲೂ ಈ ಹಿಂದಿನ ಅವಧಿಯಲ್ಲಿ ಅಧ್ಯಕ್ಷ, ಉಪಾಧ್ಯಕ್ಷ, ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನಗಳನ್ನು ಅನುಭವಿಸಿದ್ದ ಸದಸ್ಯರೇ ಕಾಣೆಯಾಗಿರುವುದು ಹಲವು ಸಂಶಯಗಳಿಗೆ ಎಡೆಮಾಡಿದ ಕೊಟ್ಟಿದೆ.ಒಟ್ಟು 17 ಸದಸ್ಯ ಬಲದ ನರೇಗಲ್ ಪಟ್ಟಣ ಪಂಚಾಯ್ತಿಯಲ್ಲಿ 12 ಬಿಜೆಪಿ, 3 ಕಾಂಗ್ರೆಸ್, ಇಬ್ಬರು ಪಕ್ಷೇತರ ಸದಸ್ಯರು ಇದ್ದಾರೆ. ಪಕ್ಷೇತರರ ಪೈಕಿ ಈ ಹಿಂದೆ ಒಬ್ಬರು ಕಾಂಗ್ರೆಸ್, ಒಬ್ಬರು ಬಿಜೆಪಿಗೆ ಬೆಂಬಲ ನೀಡಿದ್ದರು. ಇದರಿಂದ ಬಿಜೆಪಿ 13, ಕಾಂಗ್ರೆಸ್ 4 ಸದಸ್ಯ ಬಲ ಹೊಂದಿದೆ. ಹೀಗಾಗಿ ಸ್ಪಷ್ಟ ಬಹುಮತ ದೊಂದಿಗೆ ಬಿಜೆಪಿ ಆಡಳಿತಕ್ಕೆ ಬರುವುದು ಬಹುತೇಕ ಖಚಿತವಾಗಿತ್ತು.
ಜಿಲ್ಲಾ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಶಿವಾನಂದ.ಎಫ್.ಗೋಗೇರಿ.ತೋಟಗಂಟಿ.ಗದಗ