ವಿವಿಧ ಕಾಮಗಾರಿಗಳಿಗೆ – ಗುದ್ದಲಿ ಪೂಜೆ
ಹುಣಿಶ್ಯಾಳ ಮಾ.05

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ಮತ ಕ್ಷೇತ್ರದ ಶಾಸಕರಾದ ರಾಜುಗೌಡ ಪಾಟೀಲ್ ಅವರ ಸಹೋದರ ಸಚಿನಗೌಡ ಪಾಟೀಲ್ ಅವರಿಂದ ಗುದ್ದಲಿ ಪೂಜೆ ನೆರವೇರಿಸಿದರು. ದೇವರ ಹಿಪ್ಪರಗಿ ಮತ ಕ್ಷೇತ್ರದ ಹುಣಿಶ್ಯಾಳ ಪಿ.ಬಿ ಗ್ರಾಮದಲ್ಲಿ ಎಸ್.ಸಿ ಕಾಲೋನಿಯಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಸಿ.ಸಿ ರಸ್ತೆ ನಂತರ ಹಾಗೂ ಬೂದಿಹಾಳ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಸಿ.ಸಿ ರಸ್ತೆಗೆ ಮತ್ತು ಉತ್ನಾಳ ಗ್ರಾಮದಲ್ಲಿ 50 ಲಕ್ಷ ರೂ ವೆಚ್ಚದಲ್ಲಿ ಸಿ.ಸಿ ರಸ್ತೆ ಜೊತೆಗೆ ಸಾತಿಹಾಳ ಗ್ರಾಮದಲ್ಲಿ 20 ಲಕ್ಷ ರೂ ವೆಚ್ಚದಲ್ಲಿ ಜೆ.ಜೆ.ಎಮ್ ಕಾಮಗಾರಿಗೆ ಮತ್ತು 50 ಲಕ್ಷ ರೂ ಸಿ.ಸಿ ರಸ್ತೆಗೆ ಭೂಮಿ ಪೂಜೆ ನೆರವೇರಿಸಿ ನಂತರ ಮಾತನಾಡಿದ ಅವರು ನಮ್ಮ ಮತ ಕ್ಷೇತ್ರದಲ್ಲಿನ ಮೂಲಭೂತ ಸೌಲಭ್ಯಗಳಾದ ಸಿ.ಸಿ ರಸ್ತೆ, ಕುಡಿಯುವ ನೀರು, ಚರಂಡಿ, ವಿದ್ಯುತ್ ಶಾಲೆಗಳು, ಅಂಗನವಾಡಿ ಕೇಂದ್ರಗಳು ಸೇರಿದಂತೆ ಹೀಗೆ ಹಲವಾರು ಮೂಲಭೂತ ಸೌಲಭ್ಯಗಳನ್ನು ಹಂತ ಹಂತವಾಗಿ ಪೂರ್ಣ ಗೊಳಿಸುತ್ತೇವೆ.
ಅದಕ್ಕೆ ಪ್ರತಿ ಗ್ರಾಮದ ಹಿರಿಯರ, ಕಿರಿಯರ ಸಹಕಾರ ಬೇಕು ಎಂದರು. ಇದೆ ಸಂದರ್ಭದಲ್ಲಿ ಗ್ರಾಮ ಪಂಚಾಯತ ಸದಸ್ಯರು ವಿವಿಧ ಮುಖಂಡರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಮೈಬೂಬಬಾಷ.ಮನಗೂಳಿ.ತಾಳಿಕೋಟೆ