ಮಕ್ಕಳಿಗೆ ಮುದ ನೀಡಿದ ಸ್ನೇಹ – ಸಮ್ಮೇಳನ ಕಾರ್ಯಕ್ರಮ.
ಅಥಣಿ ಫೆ.05

ವಾರ್ಷಿಕ ಸ್ನೇಹ ಸಮ್ಮೇಳನ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಮಕ್ಕಳು ಡಿಜೆ ಹಾಡಿಗೆ ಕುಣಿದು ಕುಪ್ಪಳಿಸಿದರು.ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅಬ್ಬಿಹಾಳ ಗ್ರಾಮದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನದ ಕಾರ್ಯಕ್ರಮಕ್ಕೆ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಪದವಿ ಪೂರ್ವ ಸುರೇಶ ಮಹಾರಾಜರು ಸರಸ್ವತಿ ದೇವಿ ಭಾವ ಚಿತ್ರಕ್ಕೆ ಪೂಜೆ ಸಲ್ಲಿಸಿ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಪುಟಾಣಿ ಮಕ್ಕಳು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಜೀವನಾಧಾರಿತ ನಾಟಕ ಮಾಡುವ ಮೂಲಕ ಎಲ್ಲರ ಗಮನ ಸೆಳೆದವು. ಚಿಕ್ಕ ಹಳ್ಳಿಯಲ್ಲಿ ಉತ್ತಮ ಗುಣಮಟ್ಟದ ಶಿಕ್ಷಣ ಹಾಗೂ ಧಾರ್ಮಿಕ, ಸಾಮಾಜಿಕ, ಕ್ರೀಡೆಯಲ್ಲೂ ಮಕ್ಕಳ ಚಟುವಟಿಕೆ ಅಬ್ಬಿಹಾಳ ಗ್ರಾಮದ ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಶಾಲೆಯಲ್ಲಿ ನೆರೆದ ಜನರ ಪ್ರಶಂಷೆಗೆ ಕಾರಣವಾಯಿತು.
ತಾಲೂಕ ವರದಿಗಾರರು, ಸಿಹಿ ಕಹಿ ಕನ್ನಡ ದಿನ ಪತ್ರಿಕೆ ಹಾಗೂ ಎಸ್.ಕೆ ನ್ಯೂಸ್ ಕನ್ನಡ ಚಾನಲ್: ಪೀರು.ನಂದೇಶ್ವರ.ಅಥಣಿ.